Vicky Katrina Gets Threats: ಸಲ್ಮಾನ್‌ ಖಾನ್‌ ಬಳಿಕ ವಿಕ್ಕಿ ಕೌಶಲ್-ಕತ್ರಿನಾಗೆ ಬಂತು ಕೊಲೆ ಬೆದರಿಕೆ

Vicky Katrina Gets Threats: ಬಾಲಿವುಡ್ ತಾರಾ ಜೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರಿಗೆ ಜೀವ ಬೆದರಿಕೆ ಬಂದಿದ್ದು, ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. 

Written by - Chetana Devarmani | Last Updated : Jul 25, 2022, 12:19 PM IST
  • ಬಾಲಿವುಡ್ ತಾರಾ ಜೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರಿಗೆ ಜೀವ ಬೆದರಿಕೆ
  • ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲು
  • ಸಲ್ಮಾನ್‌ ಖಾನ್‌ ಬಳಿಕ ವಿಕ್ಕಿ ಕೌಶಲ್-ಕತ್ರಿನಾಗೆ ಬಂತು ಕೊಲೆ ಬೆದರಿಕೆ
Vicky Katrina Gets Threats: ಸಲ್ಮಾನ್‌ ಖಾನ್‌ ಬಳಿಕ ವಿಕ್ಕಿ ಕೌಶಲ್-ಕತ್ರಿನಾಗೆ ಬಂತು ಕೊಲೆ ಬೆದರಿಕೆ title=
ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್

Vicky Katrina Gets Threats: ಬಾಲಿವುಡ್ ತಾರಾ ಜೋಡಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರಿಗೆ ಜೀವ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅಪರಿಚಿತರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ವರದಿಗಳ ಪ್ರಕಾರ, ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ಅವರಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಜೀವ ಬೆದರಿಕೆ ಬಂದಿದೆ. ಈ ಬಗ್ಗೆ ಮುಂಬೈನ ಸಾಂತಾಕ್ರೂಜ್ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 506(2), 354(ಡಿ) ಐಟಿ ಕಾಯ್ದೆಯ ಸೆಕ್ಷನ್ 67ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಇನ್‌ಸ್ಟಾಗ್ರಾಮ್‌ನಲ್ಲಿ ಒಬ್ಬ ವ್ಯಕ್ತಿ ಬೆದರಿಕೆಯ ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದಾನೆ ಎಂದು ಕೌಶಲ್ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಯು ತನ್ನ ಪತ್ನಿ ಕತ್ರಿನಾಳನ್ನು ಹಿಂಬಾಲಿಸಿ ಬೆದರಿಕೆ ಹಾಕುತ್ತಿದ್ದಾನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಣವೀರ್ ಸಿಂಗ್ ಬಳಿಕ ಬೆತ್ತಲಾದ ಸೌತ್‌ ಸ್ಟಾರ್‌, ಪತ್ನಿಗೆ ಸಿಕ್ತು ಕ್ರೆಡಿಟ್‌

ಪಂಜಾಬಿ ಗಾಯಕ ಸಿಧು ಮುಸೇವಾಲಾ ಹತ್ಯೆಯಾದ ನಂತರ, ಸೆಲೆಬ್ರಿಟಿಗಳನ್ನು ಬಿಡದಂತೆ ಕೊಲ್ಲುವ ಬೆದರಿಕೆಗಳು ನಿರಂತರವಾಗಿ ಬರುತ್ತಿವೆ. ಕೆಲವು ದಿನಗಳ ಹಿಂದೆ ಸಲ್ಮಾನ್ ಖಾನ್ ಮತ್ತು ಅವರ ತಂದೆ ಸಲೀಂ ಖಾನ್ ಅವರಿಗೆ ಪತ್ರದ ಮೂಲಕ ಜೀವ ಬೆದರಿಕೆ ಹಾಕಲಾಗಿತ್ತು. 

ಮುಂಬೈನ ಸಾಂತಾಕ್ರೂಜ್ ಪೊಲೀಸ್ ಠಾಣೆಯ ಪೊಲೀಸರು ಈ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪೊಲೀಸರ ಪ್ರಕಾರ, ಇನ್‌ಸ್ಟಾಗ್ರಾಮ್‌ನಲ್ಲಿ ಬೆದರಿಕೆಗಳು ಬರುತ್ತಿವೆ ಮತ್ತು ಆರೋಪಿಗಳು ಕತ್ರಿನಾ ಕೈಫ್ ಅವರನ್ನು ಹಿಂಬಾಲಿಸಿ ಬೆದರಿಕೆ ಹಾಕುತ್ತಿದ್ದರು ಎಂದು ತಿಳಿದುಬಂದಿದೆ. 

ಇದನ್ನೂ ಓದಿ: Rashmika Mandanna: ಶೀಘ್ರದಲ್ಲೇ ರಶ್ಮಿಕಾ ರಾಜಕೀಯ ಪ್ರವೇಶ? ಕರ್ನಾಟಕದ ಸಂಸದೆ ಆಗ್ತಾರಂತೆ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News