VijayaNagara: ಹುಡುಗಿ ಕೊಡುತ್ತಿಲ್ಲ ಎಂದು ಯುವಕ ಆತ್ಮಹತ್ಯೆ..!

Karnataka Crime News: ಮಧುಸೂಧನ್ ತಂದೆ ಮಾನಸಿಕ ಅಸ್ವಸ್ಥರಾಗಿದ್ದರಂತೆ. ಹೀಗಾಗಿ ಮಧುಸೂಧನ್ ನೋಡಿಬರುತ್ತಿದ್ದ ಹೆಣ್ಣುಗಳು ಆತನನ್ನು ತಿರಸ್ಕರಿಸುತ್ತಿದ್ದರಂತೆ. ಮದುವೆಗೆ ವಯಸ್ಸಾಗಿದ್ದರೂ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲವೆಂಬ ಬೇಸರದಲ್ಲಿದ್ದ ಮಧುಸೂಧನ್ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ತೆಗೆದಕೊಂಡಿದ್ದಾನೆ.   

Written by - Puttaraj K Alur | Last Updated : Jan 16, 2024, 07:01 PM IST
  • ಮದುವೆಯಾಗಲು ಯಾರೂ ಹೆಣ್ಣು ಕೊಡುತ್ತಿಲ್ಲವೆಂದು ಯುವಕ ಆತ್ಮಹತ್ಯೆ
  • ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದಲ್ಲಿ ಘಟನೆ
  • ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಯುವಕ!
VijayaNagara: ಹುಡುಗಿ ಕೊಡುತ್ತಿಲ್ಲ ಎಂದು ಯುವಕ ಆತ್ಮಹತ್ಯೆ..! title=
ಯುವಕ ಆತ್ಮಹತ್ಯೆ..!

ವಿಜಯನಗರ: ಮದುವೆಯಾಗಲು ಯಾರೂ ಹೆಣ್ಣು ಕೊಡುತ್ತಿಲ್ಲವೆಂದು ಬೇಸತ್ತ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯಲ್ಲಿ ನಡೆದಿದೆ.  ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಗ್ರಾಮದ ನಿವಾಸಿ ಬಿ.ಮಧುಸೂಧನ್ (26) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಇದೇ ಜನವರಿ 5ರಂದು ಮಧುಸೂಧನ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಆದರೆ ಜ.15ರಂದು ಸಂಜೆ ಚಿಕಿತ್ಸೆ ಫಲಕಾರಿಯಾಗಿದೆ ಸಾವನ್ನಪ್ಪಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಮಧುಸೂಧನ್ ತಂದೆ ಮಾನಸಿಕ ಅಸ್ವಸ್ಥರಾಗಿದ್ದರಂತೆ. ಹೀಗಾಗಿ ಮಧುಸೂಧನ್ ನೋಡಿಬರುತ್ತಿದ್ದ ಹೆಣ್ಣುಗಳು ಆತನನ್ನು ತಿರಸ್ಕರಿಸುತ್ತಿದ್ದರಂತೆ. ಮದುವೆಗೆ ವಯಸ್ಸಾಗಿದ್ದರೂ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲವೆಂಬ ಬೇಸರದಲ್ಲಿದ್ದ ಮಧುಸೂಧನ್ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ತೆಗೆದಕೊಂಡಿದ್ದಾನೆ.   

ಇದನ್ನೂ ಓದಿ: Ayodhya : ಅಯೋಧ್ಯೆಯಲ್ಲಿ ರಾಮ ಮಂದಿರದ ಬಳಿ ಕಾಂಗ್ರೆಸ್ ಮುಖಂಡರ ಮೇಲೆ ಹಲ್ಲೆ.!

ಮಾನಸಿಕ ಅಸ್ವಸ್ಥ ತಂದೆಯನ್ನು ನೋಡಿಕೊಳ್ಳಬೇಕಾಗುತ್ತದೆ ಅನ್ನೋ ಕಾರಣಕ್ಕೆ ಯಾರೂ ತನಗೆ ಹೆಣ್ಣು ಕೊಡುತ್ತಿಲ್ಲವೆಂದು ಆತ ನೊಂದುಕೊಂಡಿದ್ದನಂತೆ. ಮಧುಸೂಧನ್‍ಗೆ ಕೆಲವರು ಹೆಣ್ಣು ಕೊಡಲು ಒಪ್ಪಿದ್ದರೂ ನಂತರ ಅವರ ಮನೆಗೆ ಬಂದಾಗ ಆತನ ತಂದೆ ಮಾನಸಿಕ ಅಸ್ವಸ್ಥರು ಎಂಬುದನ್ನು ತಿಳಿದು ತಿರಿಸ್ಕರಿಸುತ್ತಿದ್ದರಂತೆ.  

ಇದರಿಂದ ಬೇಸತ್ತು ಮಧುಸೂಧನ್ ಗ್ರಾಮದ ಹೊರವಲಯದ ಈರಪ್ಪನ ಮಠದ ಬಳಿ ಹೋಗಿ ವಿಷ ಸೇವಿಸಿದ್ದಾನೆ. ಇದನ್ನು ಗಮನಿಸಿದ ಸ್ಥಳೀಯರು ಆತನನ್ನು ಕೂಡಲೇ ಗುಡೇಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಆತ ಸೋಮವಾರ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಗುಡೇಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: TCS, Infosys ಕ್ಯಾಂಪಸ್‌ಗಳ ಬಳಿ ಚಿರತೆ ಪ್ರತ್ಯಕ್ಷ; ಅರಣ್ಯ ಇಲಾಖೆಯಿಂದ ಶೋಧ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News