ನಿನ್ನೆಯಷ್ಟೇ ಹುಟ್ಟು ಹಬ್ಬ ಆಚರಿಸಿಕೊಂಡವನ ಕೊಲೆ ಮಾಡಿದ ದುಷ್ಕರ್ಮಿಗಳು..!

ಯಮಕನಮರಡಿ ಗ್ರಾಮ‌ದ ಹತ್ತರಗಿ ಟೋಲ್ ನಾಕಾ ಸಮೀಪದಲ್ಲಿ ರವಿವಾರ ರಾತ್ರಿ ಯುವಕನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. 

Written by - Yashaswini V | Last Updated : Sep 5, 2022, 07:20 AM IST
  • ಈ ಯುವಕನ ಶನಿವಾರವಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದನಂತೆ‌
  • ಮಾರನೇ ದಿನವೇ ಕೊಲೆಯಾಗಿದೆ.
  • ಯುವಕನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ.
ನಿನ್ನೆಯಷ್ಟೇ ಹುಟ್ಟು ಹಬ್ಬ ಆಚರಿಸಿಕೊಂಡವನ ಕೊಲೆ ಮಾಡಿದ ದುಷ್ಕರ್ಮಿಗಳು..! title=
Murder

ಚಿಕ್ಕೋಡಿ: ನಿನ್ನೆಯಷ್ಟೇ ಹುಟ್ಟು ಹಬ್ಬ ಆಚರಿಸಿಕೊಂಡ ಯುವಕನೊಬ್ಬನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಯಮಕನಮರಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಯಮಕನಮರಡಿ ಗ್ರಾಮ‌ದ ಹತ್ತರಗಿ ಟೋಲ್ ನಾಕಾ ಸಮೀಪದಲ್ಲಿ ರವಿವಾರ ರಾತ್ರಿ ಯುವಕನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಯಮಕನಮರಡಿ ನಿವಾಸಿ ವಿನಾಯಕ ಸೋಮಶೇಖರ ಹೋರಕೇರಿ ( 28 ) ಕೊಲೆಯಾದ ದುರ್ದೈವಿ.

ಇದನ್ನೂ ಓದಿ- Breaking News : ಟಾಟಾ ಸನ್ಸ್‌ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ರಸ್ತೆ ಅಪಘಾತದಲ್ಲಿ ನಿಧನ!

ಯುವಕ ಬೈಕ್ ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿ ಹತ್ಯೆಗೈದು,  ಆರೋಪಿಗಳು ಪರಾರಿಯಾಗಿದ್ದಾರೆ. ತೀವ್ರ ರಕ್ತಸ್ರಾವದಿಂದ ಯುವಕ ಸ್ಥಳದಲ್ಲೇ ಕೊನೆಯುಸಿರೆಳಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಇದನ್ನೂ ಓದಿ- ನಡುರಸ್ತೆಯಲ್ಲಿಯೇ ಎರಡು ಗುಂಪುಗಳ ನಡುವೆ ಮಾರಾಮಾರಿ : ಮಚ್ಚು, ರಾಡ್‌ ಕಂಡು ಬೆಚ್ಚಿ ಬಿದ್ದ ಜನ

ಈ ಯುವಕನ ಶನಿವಾರವಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದನಂತೆ‌. ಮಾರನೇ ದಿನವೇ ಕೊಲೆಯಾಗಿದೆ. ಘಟನಾ ಸ್ಥಳಕ್ಕೆ ಈಗಾಗಲೇ ಯಮಕನಮರಡಿ ಪಿಎಸ್‌ಐ ಬಿ.ವಿ.ನಾಮಗೌಡಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷವ ಸತೀಶ ಜಾರಕಿಹೊಳಿ ಆಪ್ತರೊಬ್ಬರ ಮೇಲೆ ಈ ಯುವಕ ನಾಡಪಿಸ್ತೂಲಿನಿಂದ ಪೈರಿಂಗ್ ಮಾಡಿ ಪರಾರಿಯಾಗಿದ್ದನು. ಕೆಲ ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಗೆ ಬಂದಿದ್ದ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಈ ಘಟನೆ ಕುರಿತಂತೆ ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News