ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಶುರುವಾಗಿದೆ. ಮೈಸೂರಿನ ಅರಮನೆಯಲ್ಲಿ ರಾಜ ಪರಂಪರೆಯ ದಸರಾಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅರಮನೆಯಲ್ಲಿ ನಡೆಯುವ ದಸರಾ ಪೂಜಾ ಕಾರ್ಯಕ್ರಮಗಳ ಪಟ್ಟಿ ಜೀ ಕನ್ನಡ ನ್ಯೂಸ್‍ಗೆ ಲಭ್ಯವಾಗಿದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಅರಮನೆ ಪೂಜಾ ಕಾರ್ಯಕ್ರಮಗಳ ಪಟ್ಟಿ
ಅಕ್ಟೋಬರ್ 9ರ ಸೋಮವಾರ ರತ್ನ ಖಚಿತ ಸಿಂಹಾಸನವನ್ನು ಜೋಡಿಸಲಾಗುತ್ತದೆ. ಬಳಿಕ ಬೆಳಗ್ಗೆ 7 ಗಂಟೆಗೆ ನವಗ್ರಹ ಹೋಮ ಸೇರಿ ಹಲವು ಪೂಜಾ ವಿಧಿ ವಿಧಾನ ನೆರವೇರಿಸಲಾಗುತ್ತದೆ. ನಂತರ 10.05 ರಿಂದ 10.35ರ ಶುಭ ಲಗ್ನದಲ್ಲಿ ಸಿಂಹಾಸನವನ್ನು ಜೋಡಿಸಲಾಗುತ್ತದೆ. ಗೋಶಾಲೆಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆಗಮಿಸಲಿವೆ. ಅ.15ರ ಭಾನುವಾರ ಬೆಳಗ್ಗೆ 6 ರಿಂದ 6.25ರವರ ಶುಭ ಮುಹೂರ್ತದಲ್ಲಿ ಸಿಂಹಾಸವನ್ನು ಜೋಡಿಸಲಾಗುತ್ತದೆ. ನಂತರ ಬೆಳಗ್ಗೆ 7.05 ರಿಂದ 7.45ರ ಶುಭ ಲಗ್ನದಲ್ಲಿ ಕಂಕಣಧಾರಣೆ ನಡೆಯಲಿದೆ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮತ್ತು ಪತ್ನಿ ತ್ರಿಷಿಕಾ ಕುಮಾರಿಯವರಿಗೆ ವಾಣಿವಿಲಾಸ ಅರಮನೆಯಲ್ಲಿ ಕಂಕಣಧಾರಣೆ ನಡೆಯಲಿದೆ.
ಇದನ್ನೂ ಓದಿ: ಸಿಕ್ಕಿಂ ಪ್ರವಾಹದಲ್ಲಿ 23 ಯೋಧರು ನಾಪತ್ತೆ ! ಮುಂದುವರೆದ ಶೋಧ ಕಾರ್ಯ
ಬೆಳಗ್ಗೆ 9.45ಕ್ಕೆ ಅರಮನೆ ಸವಾರಿ ತೊಟ್ಟಿಗೆ ಗೋಶಾಲೆಯ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆಗಮಿಸಲಿವೆ. ಬೆಳಗ್ಗೆ 10.15ಕ್ಕೆ ಕಳಸ ಪೂಜೆ ಮತ್ತು ಸಿಂಹಾಸನ ಪೂಜೆ ನಡೆಯಲಿದೆ. ನಂತರ ಬೆಳಗ್ಗೆ 11.30ರಿಂದ 11.50ಕ್ಕೆ ಖಾಸಗಿ ದರ್ಬಾರ್ ನಡೆಯಲಿದೆ. ಸಿಂಹಾಸನವೇರಿ ಯದುವೀರ್ ಅವರು ಖಾಸಗಿ ದರ್ಬಾರ್ ನಡೆಸಲಿದ್ದಾರೆ. ಮಧ್ಯಾಹ್ನ 1.45 ರಿಂದ 2.05ರವರೆಗೆ ತಾಯಿ ಚಾಮುಂಡೇಶ್ವರಿಯನ್ನು ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ರವಾನಿಸಲಾಗುತ್ತದೆ. ಅಕ್ಟೋಬರ್ 20ರ ಶುಕ್ರವಾರ ಬೆಳಗ್ಗೆ 10.05 ರಿಂದ 10.25ಕ್ಕೆ ಸರಸ್ವತಿ ಪೂಜೆ ನಡೆಯಲಿದೆ. ಅ.21ರ ಶನಿವಾರ ಕಾಳರಾತ್ರಿ ಪೂಜೆ, ಅ.22ರ ಭಾನುವಾರ ದುರ್ಗಾಷ್ಠಮಿ, ಅ.23ರ ಸೋಮವಾರ ದುರ್ಗಾಷ್ಠಮಿ ಆಚರಣೆ, ಬೆಳಗ್ಗೆ 5.30ಕ್ಕೆ ಚಂಡಿಹೋಮದೊಂದಿಗೆ ಪೂಜೆ ಆರಂಭವಾಗಲಿದೆ. ಬೆಳಗ್ಗೆ 5.30ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆಗಮನವಾಗಲಿದೆ.
ಬೆಳಗ್ಗೆ 6.05 ರಿಂದ 6.15ಕ್ಕೆ ಖಾಸಾ ಆಯುಧಗಳು ಅರಮನೆ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆಯಾಗಲಿವೆ. ಬೆಳಗ್ಗೆ 7.15ಕ್ಕೆ ಖಾಸಾ ಆಯುಧಗಳು ಕೋಡಿ ಸೋಮೇಶ್ವರ ದೇಗುಲದಿಂದ ಅರಮನೆಗೆ ವಾಪಸ್ ಆಗಲಿವೆ. ಬಳಿಕ ಕಲ್ಯಾಣ ಮಂಟಪಕ್ಕೆ ಆಯುಧಗಳ ಆಗಮಿಸಲಿವೆ. ಬೆಳಗ್ಗೆ 9.30ಕ್ಕೆ ಚಂಡಿಹೋಮ ಪೂರ್ಣಾಹುತಿ. ನಂತರ ಬೆಳಗ್ಗೆ 11.45ಕ್ಕೆ ಕಲ್ಯಾಣ ಮಂಟಪಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆಗಮಿಸಲಿವೆ. ಮಧ್ಯಾಹ್ನ 12.20ರಿಂದ 12.45ರವರೆಗೆ ಆಯುಧ ಪೂಜೆ ನಡೆಯಲಿದೆ.
ಇದನ್ನೂ ಓದಿ: Survey Report: ಮತ್ತೆ ಮೋದಿಯೇ ಪ್ರಧಾನಿಯಾಗಲಿ ಎಂದ ಶೇ.61ರಷ್ಟು ಮತದಾರರು..!
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಅರಮನೆ ಕಲ್ಯಾಣ ಮಂಟಪದಲ್ಲಿ ಆಯುಧಗಳಿಗೆ ಪೂಜೆ ನಡೆಯಲಿದೆ. ಸಂಜೆ ಖಾಸಗಿ ದರ್ಬಾರ್ ನಡೆಯಲಿದ್ದು, ದರ್ಬಾರ್ ನಂತರ ಸಿಂಹಾಸನ ವಿಸರ್ಜನೆ ನಡೆಯಲಿದೆ. ವಾಣಿ ವಿಲಾಸ ದೇವರ ಮನೆಯಲ್ಲಿ ಕಂಕಣ ವಿಸರ್ಜನೆ ನಡೆಯಲಿದ್ದು, ಅಂಬಾವಿಲಾಸದಲ್ಲಿ ದಪ್ತಾರ್ ಪೂಜೆ ನಡೆಯಲಿದೆ. ಮಹಾಸನ್ನಿಧಾನದಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರಿಂದ ಅಮಲದೇವಿ ದರ್ಶನವಾಗಲಿದೆ.
ಅ.24ರ ಬುಧವಾರ ವಿಜಯದಶಮಿ ಆಚರಣೆ ನಡೆಯಲಿದ್ದು, ಅಂದು ಬೆಳಗ್ಗೆ 9.45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಆಗಮಿಸಲಿವೆ. ಕಲ್ಯಾಣ ಮಂಟಪದಲ್ಲಿ ಖಾಸಗಿ ಆಯುಧಗಳಿಗೆ ಪೂಜೆ ಸಲ್ಲಿಸಲಾಗುತ್ತದೆ. ಬೆಳಗ್ಗೆ 11 ರಿಂದ 11.40 ವಿಜಯದಶಮಿ ಮೆರವಣಿಗೆ ನಡೆಯಲಿದೆ. ಅರಮನೆ ಆನೆ ಬಾಗಿಲಿನಿಂದ ಅರಮನೆ ಭುವನೇಶ್ವರಿ ದೇಗುಲದವರೆಗೂ ಮೆರವಣಿಗೆ ನಡೆಯಲಿದೆ. ಭುವನೇಶ್ವರಿ ದೇಗುಲದಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ರಿಂದ ಶಮಿ ಪೂಜೆ ನಡೆಯಲಿದೆ. ಬಳಿಕ ಪೂಜೆ ಮಗಿಸಿ ಅರಮನೆಗೆ ವಾಪಸ್ ಆಗಲಿದ್ದು, ನ.8ರ ಬುಧವಾರ ಸಿಂಹಾಸನ ಭದ್ರತಾ ಕೊಠಡಿಗೆ ರವಾನೆಯಾಗಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.