ಬಾಲಿವುಡ್ ‌ಕಿಂಗ್ ಖಾನ್ ಹೆಸರಿಗೆ ಹೊಸ ರೆಕಾರ್ಡ್... ಡಂಕಿ, ಜವಾನ್, ಪಠಾಣ್ ವೀಕ್ಷಿಸಿದ್ದು ಎಷ್ಟು ಮಂದಿ ಗೊತ್ತಾ.?

Sharukh New Record: ಕಿಂಗ್ ಈಸ್ ಆಲ್ ವೆಸ್ ಕಿಂಗ್...ಹೀಗಂತ ನಾವ್ ಹೇಳ್ತಿಲ್ಲ. ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಅಭಿಮಾನಿಗಳು ಹೆಮ್ಮೆಯಿಂದ ಕೂಗುತ್ತಿದ್ದಾರೆ. ಅದಕ್ಕೆ ಕಾರಣ ಕಿಂಗ್ ಖಾನ್ ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ.   

Written by - Savita M B | Last Updated : Jan 10, 2024, 05:15 PM IST
  • 2023ರಲ್ಲಿ ಬಾಕ್ಸಾಫೀಸ್ ಧೂಳಿಪಟ ಮಾಡಿದ ಕೀರ್ತಿ ಶಾರುಖ್ ಗೆ ಸಲ್ಲುತ್ತದೆ.
  • ಡಂಕಿ, ಜವಾನ್ ಹಾಗೂ ಪಠಾಣ್ ಸಿನಿಮಾಗಳ ಮೂಲಕ ಒಂದೇ ವರ್ಷದಲ್ಲಿ ಹ್ಯಾಟ್ರಿಕ್ ಹಿಟ್ ಬಾರಿಸಿದ ರೆಕಾರ್ಡ್ ಬಾದ್ ಷಾಗೆ ಸೇರಿದೆ.
  • ಬರೀ ಕಲೆಕ್ಷನ್ ಅಷ್ಟೇ ಅಲ್ಲ ಈ ಮೂರು ಚಿತ್ರಗಳನ್ನು ವೀಕ್ಷಿಸಿದ್ದು, ಎಂಟು ಕೋಟಿ ಮಂದಿ.
ಬಾಲಿವುಡ್ ‌ಕಿಂಗ್ ಖಾನ್ ಹೆಸರಿಗೆ ಹೊಸ ರೆಕಾರ್ಡ್... ಡಂಕಿ, ಜವಾನ್, ಪಠಾಣ್ ವೀಕ್ಷಿಸಿದ್ದು ಎಷ್ಟು ಮಂದಿ ಗೊತ್ತಾ.? title=

Sharukh Khan: 2023ರಲ್ಲಿ ಬಾಕ್ಸಾಫೀಸ್ ಧೂಳಿಪಟ ಮಾಡಿದ ಕೀರ್ತಿ ಶಾರುಖ್ ಗೆ ಸಲ್ಲುತ್ತದೆ. ಡಂಕಿ, ಜವಾನ್ ಹಾಗೂ ಪಠಾಣ್ ಸಿನಿಮಾಗಳ ಮೂಲಕ ಒಂದೇ ವರ್ಷದಲ್ಲಿ ಹ್ಯಾಟ್ರಿಕ್ ಹಿಟ್ ಬಾರಿಸಿದ ರೆಕಾರ್ಡ್ ಬಾದ್ ಷಾಗೆ ಸೇರಿದೆ. ಬರೀ ಕಲೆಕ್ಷನ್ ಅಷ್ಟೇ ಅಲ್ಲ ಈ ಮೂರು ಚಿತ್ರಗಳನ್ನು ವೀಕ್ಷಿಸಿದ್ದು, ಎಂಟು ಕೋಟಿ ಮಂದಿ. ಒಂದು ವರ್ಷದಲ್ಲಿಯೇ ಇಷ್ಟು ಮಂದಿ ಸಿನಿಮಾ ವೀಕ್ಷಿಸಿರುವುದು ದಾಖಲೆಯೇ ಸರಿ..ಜವಾನ್ ಚಿತ್ರದ 3.93 ಕೋಟಿ ಟಿಕೆಟ್ ಮಾರಾಟವಾಗಿದ್ದು, ಪಠಾಣ್ 3.20 ಕೋಟಿ, ಡಂಕಿ 1 ಕೋಟಿ..ಈ ಸಾಧನೆ ಮಾಡಿದ ಮೊದಲ ಬಾಲಿವುಡ್ ತಾರೆ ಶಾರುಖ್.

2023ರಲ್ಲಿ ಜವಾನ್ ಹಾಗೂ‌ ಪಠಾಣ್ ‌ಗಳಿಕೆಯಲ್ಲಿ ದಾಖಲೆ ಬರೆದಿದ್ದು, ಅದಕ್ಕೆ ಡಂಕಿ ಕೂಡ ಸೇರ್ಪಡೆಯಾಯಿತು. 2023ರ ಆರಂಭದಲ್ಲಿ ಪಠಾಣ್ ಬಾಕ್ಸ್ ಆಫೀಸ್ ಬ್ಯಾಂಗ್ ಮಾಡಿತು. ಈ ಚಿತ್ರ ಹಿಂದಿ ಬೆಲ್ಟ್ ನಲ್ಲಿಯೇ 524 ಕೋಟಿ ಬಾಚಿತ್ತು.

ಇದನ್ನೂ ಓದಿ-ಚಾಲೆಂಜಿಗ್ ಸ್ಟಾರ್ ದರ್ಶನ್ ‘ಕಾಲಾಯ ತಸ್ಮಯ್ ನಮಃ’ ಅಂದಿದ್ದು ಯಾರಿಗೆ..?

ಭಾರತಾದ್ಯಂತ 545 ಕೋಟಿ‌ ಲೂಟಿ ಮಾಡಿದ್ದ ಪಠಾಣ್ ಒಟ್ಟಾರೆ ವಿಶ್ವಾದ್ಯಂತ 1055 ಕೋಟಿ ಗಳಿಕೆ ಕಂಡಿತ್ತು. ಆ ನಂತರ  ಜೂನ್ ನಲ್ಲಿ ತೆರೆಕಂಡ ಜವಾನ್, ಹಿಂದಿ ಚಿತ್ರರಂಗದಲ್ಲಿ 643 ಕೋಟಿ ಕಲೆಕ್ಷನ್ ಮಾಡಿದರೆ, ವಿಶ್ವಾದ್ಯಂತ 580 ಕೋಟಿ ಲೂಟಿ ಮಾಡಿತ್ತು. ಡಿಸೆಂಬರ್ ನಲ್ಲಿ ಬಿಡುಗಡೆಯಾದ ಡಂಕಿ ಕೇವಲ 13 ದಿನದಲ್ಲಿ 410 ಕೋಟಿ ಗಳಿಕೆ ಮಾಡಿತ್ತು.

ಇದನ್ನೂ ಓದಿ-ಮೈ ಬಿಸಿ ಹೆಚ್ಚಿಸುತ್ತಿದೆ ತಮನ್ನಾ ಟೈಟ್‌ ಡ್ರೇಸ್‌..! ಫೋಟೋಸ್‌ ಇಲ್ಲಿದೆ

ಡಂಕಿ ಸಿನಿಮಾಗೆ ರಾಜ್ ಕುಮಾರ್ ಹಿರಾನಿ ಆಕ್ಷನ್ ಕಟ್ ಹೇಳಿದ್ದು, ಚಿತ್ರದಲ್ಲಿ ಶಾರುಖ್ ಖಾನ್, ತಾಪ್ಸಿ ಪನ್ನು, ವಿಕ್ಕಿ ಕೌಶಲ್, ಬೊಮನ್ ಇರಾನಿ, ವಿಕ್ರಂ ಕೊಚ್ಚರ್, ಅನಿಲ್ ಗ್ರೋವರ್ ಮುಂತಾದವರು ನಟಿಸಿದ್ದಾರೆ. ಕತೆಯ ಆಯ್ಕೆಯಲ್ಲಿ ಪ್ರತಿಬಾರಿ ನಿರ್ದೇಶಕ ರಾಜ್ಕುಮಾರ್ ಹಿರಾನಿ ಒಂದು ಗಟ್ಟಿಯಾದ ಕಥಾವಸ್ತು ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದು ಸಿನಿಪ್ರೇಮಿಗಳಿಗೆ ಗೊತ್ತಿರುವ ಸಂಗತಿ.

ಅದೇ ರೀತಿ ಈ ಚಿತ್ರದಲ್ಲಿ ಕೆಲಸ ಅರಸಿ ಅಕ್ರಮವಾಗಿ ದೇಶಗಳ ಗಡಿ ದಾಟುವವರ ಕಥೆಯನ್ನು ಡಂಕಿ ಮೂಲಕ ತೋರಿಸಿದ್ದಾರೆ. 'ಡಂಕಿ’ ಸಿನಿಮಾವನ್ನು ಜಿಯೋ ಸ್ಟುಡಿಯೋಸ್, ರೆಡ್ ಚಿಲ್ಲೀಸ್ ಎಂಟರ್‌ಟೇನ್‌ಮೆಂಟ್ ಮತ್ತು ರಾಜ್‌ಕುಮಾರ್ ಹಿರಾನಿ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಗೌರಿ ಖಾನ್ ಹಾಗೂ ರಾಜ್‌ಕುಮಾರ್ ಹಿರಾನಿ ನಿರ್ಮಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News