ನಟ ಧ್ರುವ ಸರ್ಜಾ ಕಾರು ಅಪಘಾತ

ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಧ್ರುವ ಸರ್ಜಾ ಹಾಗೂ ಅವರ ಸ್ನೇಹಿತರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.   

Last Updated : Sep 24, 2019, 04:20 PM IST
ನಟ ಧ್ರುವ ಸರ್ಜಾ ಕಾರು ಅಪಘಾತ title=

ಬೆಂಗಳೂರು: ಕನ್ನಡ ಚಿತ್ರರಂಗದ ಆಕ್ಷನ್ ಪ್ರಿನ್ಸ್ ಎಂದೇ ಕರೆಯುವ ನಟ ದ್ರುವ ಸರ್ಜಾ ಅವರು ಚಲಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. 

ಪೊಗರು ಚಿತ್ರದ ಶೂಟಿಂಗ್ ಮುಗಿಸಿ ಬಳ್ಳಾರಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಧ್ರುವ ಸರ್ಕಾರ ಅವರಿದ್ದ ಕಾರು, ಎದುರಿಗೆ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. 

ಅಪಘಾತದಲ್ಲಿ ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಧ್ರುವ ಸರ್ಜಾ ಹಾಗೂ ಅವರ ಸ್ನೇಹಿತರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ. 

ನಂದಕಿಶೋರ್ ಸಾರಥ್ಯದಲ್ಲಿ ಮೂಡಿಬರುತ್ತಿರುವ 'ಪೊಗರು' ಸಿನಿಮಾದಲ್ಲಿ ಡಾಲಿ ಧನಂಜಯ್, ಸ್ಯಾಂಡಲ್​ವುಡ್ ಸಾನ್ವಿ ರಶ್ಮಿಕಾ ಮಂದಣ್ಣ, ಆರ್ಮುಗಂ ರವಿಶಂಕರ್ ಸೇರಿದಂತೆ ದೊಡ್ಡ ತಾರಾ ಬಳಗವೇ ಇದೆ. ಬಿ.ಕೆ.ಗಂಗಾಧರ್ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಪಂಚ ಭಾಷೆಗಳಲ್ಲಿ ಚಿತ್ರ ತೆರೆಕಾಣಲಿದೆ.
 

Trending News