"ನೆಲೆಸಿಗದ ನಾಯಿ ನರಿ ಬೊಗಳಿದರೆ ಇತಿಹಾಸ ಬದಲಾಗುತ್ತ?" ಚೇತನ್‌ ವಿರುದ್ದ ಗುಡುಗಿದ ಜಗ್ಗೇಶ್!

Jaggesh Reaction: ನಟ ಚೇತನ್‌ ಅಹಿಂಸಾ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ, ಈ ನಟನ ಮೇಲೆ ನವರಸ ನಾಯಕ ಜಗ್ಗೇಶ್‌ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.  

Written by - Zee Kannada News Desk | Last Updated : Dec 18, 2023, 01:07 PM IST
  • ನಟ ಚೇತನ್‌ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು.
  • ನಟ ಜಗ್ಗೇಶ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಚೇತನ್ ಮೇಲೆ ಹರಿಹಾಯ್ದಿದ್ದಾರೆ.
  • ವಿವಾದಾತ್ಮಕ ಹೇಳಿಕೆಯ ಮೂಲಕವೇ ಸಾಕಷ್ಟು ಸದ್ದು ಮಾಡುತ್ತಿರುವ ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.
"ನೆಲೆಸಿಗದ ನಾಯಿ ನರಿ ಬೊಗಳಿದರೆ ಇತಿಹಾಸ ಬದಲಾಗುತ್ತ?" ಚೇತನ್‌ ವಿರುದ್ದ ಗುಡುಗಿದ ಜಗ್ಗೇಶ್! title=

Jaggesh Reacts To Chethanʼs Post: ಸ್ಯಾಂಡಲ್‌ವುಡ್‌ ನಟ ಚೇತನ್‌ ಅಹಿಂಸಾ ಹಲವಾರು ವರ್ಷಗಳಿಂದ ಸಿನಿಮಾರಂಗದಿಂದ ದೂರವಿದ್ದು, ಸಾಮಾಜಿಕ ಕಳಕಳಿಯ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸೋಷಿಯಲ್‌ ಹಂಚಿಕೊಳ್ಳುವುದರ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚೆಗೆ ಈ ನಟ ಸೋಷಿಯಲ್ ಮೀಡಿಯಾ ಪೇಜ್‌ನಲ್ಲಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಕುರಿತಂತೆ ನಟ ಜಗ್ಗೇಶ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಚೇತನ್ ಮೇಲೆ ಹರಿಹಾಯ್ದಿದ್ದಾರೆ.

ನಟ ಚೇತನ್‌ ಸೋಷಿಯಲ್‌ ಮಿಡಿಯಾ ಪೇಜ್‌ನಲ್ಲಿ "ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರಾದೃಷ್ಟವಶಾತ್ ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ " ಎಂದು  ಬರೆದಿದ್ದರು.

ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರಿಗೆ ಅವಮಾನ: ನಟ ಚೇತನ್‌ ಅಹಿಂಸಾ ವಿರುದ್ದ FIR ದಾಖಲು!

ಇದಕ್ಕೆ ಪ್ರತಿಕ್ರಿಯಿಸಿದ ನವರಸ ನಾಯಕ ಜಗ್ಗೇಶ್‌, "ಕೆಂಪೇಗೌಡ ವಿಜಯನಗರ ಸಾಮ್ರಾಜ್ಯದ ಒಡೆಯನ ತೊಡೆಯ ಮೇಲೆ ಕೂತು ಬೆಳೆದ ಮಗು.. ಮುಂದೆ ಸಾಮಾಜಿಕ ನ್ಯಾಯ ಎತ್ತಿ ಹಿಡಿದು ಬೆಂದಕಾಳೂರು ಬೆಳಗಿಸಿದ ಸಾರ್ವಭೌಮ.. ಇಂದಿನ ನಾಯಿ ನರಿ ಬೊಗಳಿದರೆ ಅವರ ಇತಿಹಾಸ ಬದಲಾಗುವುದೆ! ಚಿತ್ರರಂಗದಲ್ಲಿ ನೆಲೆಕಾಣದೆ ಚಾಪುಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತ? ಕಾನೂನಿದೆ ಎಚ್ಚರ..!" ಎಂದು ಬರೆದುಕೊಂಡಿದ್ದಾರೆ.

ವಿವಾದಾತ್ಮಕ ಹೇಳಿಕೆಯ ಮೂಲಕವೇ ಸಾಕಷ್ಟು ಸದ್ದು ಮಾಡುತ್ತಿರುವ ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ನಟ ಚೇತನ್  ತಮ್ಮ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಮಾನ ಮಾಡುವಂತಹ ಪೋಸ್ಟ್ ಹಾಕಿದ್ದಾರೆ ಎನ್ನುವ ಕಾರಣಕ್ಕಾಗಿ ವಕೀಲ ಆರ್.ಎಲ್.ಎನ್ ಮೂರ್ತಿ ಎನ್ನುವವರು ಶೇಷಾದ್ರಿ ಪುರಂ  ಪೊಲೀಸ್ ಠಾಣೆಯಲ್ಲಿ ಚೇತನ್ ವಿರುದ್ಧ ದೂರು ನೀಡಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News