ಹೆಣ್ಣುಕುಲಕ್ಕೆ ನೋವು ಕೊಟ್ಟವ ಉದ್ಧಾರವಾದ ಇತಿಹಾಸವಿಲ್ಲ: ನಟ ಜಗ್ಗೇಶ್ ಆಕ್ರೋಶ

ಗಜಪಡೆಯ ಕೀಳು ಮಟ್ಟದ ಪೋಸ್ಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿರುವ ಜಗ್ಗೇಶ್‌, ʼಪುನೀತನ ಮಡದಿ ಅಣಕಿಸಿದ ನತದೃಷ್ಟರೆ, ನಿಮಗೂ ತಾಯಿ ಇರಬೇಕು ಹಾಗೂ ತಾಯಿ ಬೆಲೆ ಗೊತ್ತಿರಬೇಕು.. ಒಂದು ವೇಳೆ ತಾಯಿ ಹೆಣ್ಣು ಗೌರವ ಇಲ್ಲ ಎಂದರೆ ಕಂಡಿತ ಅಂಥವರು ಮನುಕುಲಕ್ಕೆ ಅನರ್ಹ! ಎಂದು ಕಿಡಿಕಾರಿದ್ದಾರೆ.

Written by - Puttaraj K Alur | Last Updated : Apr 7, 2024, 07:41 PM IST
  • ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ವಿಚಾರ
  • ಪುನೀತನ ಮಡದಿ ಅಣಕಿಸಿದ ನತದೃಷ್ಟರೆ, ನಿಮಗೂ ತಾಯಿ ಇರಬೇಕು ಹಾಗೂ ತಾಯಿ ಬೆಲೆ ಗೊತ್ತಿರಬೇಕು..
  • ಗಜಪಡೆಯ ಕೀಳು ಮಟ್ಟದ ಪೋಸ್ಟ್‌ಗೆ ಹಿರಿಯ ನಟ ಜಗ್ಗೇಶ್‌ ಆಕ್ರೋಶ
ಹೆಣ್ಣುಕುಲಕ್ಕೆ ನೋವು ಕೊಟ್ಟವ ಉದ್ಧಾರವಾದ ಇತಿಹಾಸವಿಲ್ಲ: ನಟ ಜಗ್ಗೇಶ್ ಆಕ್ರೋಶ title=
ಹಿರಿಯ ನಟ ಜಗ್ಗೇಶ್‌ ಆಕ್ರೋಶ!

ಬೆಂಗಳೂರು: ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಪತ್ನಿ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಹಿರಿಯ ನಟ ಜಗ್ಗೇಶ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಭಾನುವಾರ ಟ್ವೀಟ್‌ ಮಾಡಿರುವ ಅವರು, ಹೆಣ್ಣುಕುಲಕ್ಕೆ ನೋವು ಕೊಟ್ಟವ ಉದ್ಧಾರ ಆದ ಇತಿಹಾಸವಿಲ್ಲʼ ವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ FIR ದಾಖಲಿಸಲಾಗಿದೆ. ಪ್ರಸಕ್ತ ಐಪಿಎಲ್‌ ಟೂರ್ನಿಯಲ್ಲಿ ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣವೆಂದು ನಿಂದಿಸಿದವರಿಗೆ ನಟ ಜಗ್ಗೇಶ್ ಸೇರಿದಂತೆ ಅನೇಕರು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Challenging Star Darshan: ನಟ ದರ್ಶನ್‌ ಕೈ ಶಸ್ತ್ರಚಿಕಿತ್ಸೆ ಯಶಸ್ವಿ, ಶೀಘ್ರವೇ ಡಿಸ್ಚಾರ್ಜ್?

ಗಜಪಡೆಯ ಕೀಳು ಮಟ್ಟದ ಪೋಸ್ಟ್‌ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್‌ ಮಾಡಿರುವ ಜಗ್ಗೇಶ್‌, ʼಪುನೀತನ ಮಡದಿ ಅಣಕಿಸಿದ ನತದೃಷ್ಟರೆ, ನಿಮಗೂ ತಾಯಿ ಇರಬೇಕು ಹಾಗೂ ತಾಯಿ ಬೆಲೆ ಗೊತ್ತಿರಬೇಕು.. ಒಂದು ವೇಳೆ ತಾಯಿ ಹೆಣ್ಣು ಗೌರವ ಇಲ್ಲ ಎಂದರೆ ಕಂಡಿತ ಅಂಥವರು ಮನುಕುಲಕ್ಕೆ ಅನರ್ಹ! ಪುನೀತನ ಮಡದಿ ಅನಾಥಳಲ್ಲಾ ತನ್ನ ಪ್ರೀತಿಸುತ್ತಿದ್ದ ಕೋಟ್ಯಾಂತರ ಅಭಿಮಾನಿಗಳ ಬಳುವಳಿ ಕೊಟ್ಟು ಹೋಗಿದ್ದಾನೆ. ಹೆಣ್ಣುಕುಲಕ್ಕೆ ನೋವು ಕೊಟ್ಟವ ಉದ್ದಾರ ಆದ ಇತಿಹಾಸವಿಲ್ಲ!ʼ ಎಂದು ಬರೆದುಕೊಂಡಿದ್ದಾರೆ. 

ಏನಿದು ವಿವಾದ..?

ಮಾರ್ಚ್ 19ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ RCB ಅನ್‌ಬಾಕ್ಸ್ ಇವೆಂಟ್‌ಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರಿಗೆ ಆಹ್ವಾನ ನೀಡಲಾಗಿತ್ತು. ಅದರಂತೆ ಅಶ್ವಿನಿಯವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಆರ್‌ಸಿಬಿ ತಂಡವು ತಾನಾಡಿದ ಐದು ಪಂದ್ಯಗಳ ಪೈಕಿ ನಾಲ್ಕರಲ್ಲಿ ಸೋಲು ಕಂಡಿದೆ. ಚಾಲೆಂಜಿಂಗ್‌ ಸ್ಟಾರ್ ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಆರ್‌ಸಿಬಿ ತಂಡದ ಸೋಲಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಕಾರಣವೆಂದು ಕೆಟ್ಟದಾಗಿ ನಿಂದಿಸಲಾಗಿದೆ. ಹೀಗಾಗಿ ಅಪ್ಪು ಅಭಿಮಾನಿಗಳು ಸೇರಿದಂತೆ ಕನ್ನಡ ಚಿತ್ರರಂಗದ ಹಲವಾರು ಸೆಲೆಬ್ರೆಟಿಗಳು ಇದನ್ನು ಖಂಡಿಸಿದ್ದಾರೆ.

ಇದನ್ನೂ ಓದಿ: Indian 2 : ಜೂನ್ ನಲ್ಲಿ ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾ ರಿಲೀಸ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News