Actor Kishore on Manipur Violence : ಮಣಿಪುರದ ರಾಜಧಾನಿ ಇಂಪಾಲದಿಂದ 35 ಕಿಮೀ ದೂರದಲ್ಲಿರುವ ಕಾಂಗ್ ಪೋಕ್ಷಿಯಲ್ಲಿ ಮೇ 4ರಂದು ನಡೆದ ಹೇಯ ಕೃತ್ಯ ಇಡೀ ದೇಶವನ್ನೇ ಮೌನವಾಗಿಸಿತ್ತು. ಇಬ್ಬರು ಯುವತಿಯರನ್ನು ಬಟ್ಟೆಇಲ್ಲದೇ ನಡು ಬೀದಿಯಲ್ಲಿ ಮೆರವಣಿಗೆ ಮಾಡಿದ್ದಲ್ಲದೇ, ಯುವತಿಯರ ಪೋಷಕರನ್ನೂ ಕೊಂದಿದ್ದರು. ಈ ಕೃತ್ಯದ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಇಲ್ಲಿಯವರೆಗೂ ಯಾರನ್ನು ಬಂಧಿಸಿರಲಿಲ್ಲ.
Shameful! My sisters are walking naked in the streets,their private parts are being hit and we can't do anything because of an incompetent king.But look at you #Modi ji, you'll find whole country is naked today to the World.Enjoy your joyrides. #ManipurViolence pic.twitter.com/1BICHF9vkX
— Trinamoole Nabo Jowar (@itsurpkm) July 19, 2023
ಸುದೀರ್ಘ 77 ದಿನಗಳ ಬಳಿಕ ತಡವಾಗಿ ಬೆಳಕಿಗೆ ಬಂದ ಈ ಘಟನೆಗೂ ಮುಂಚೆಯೇ, ಮಣಿಪುರದಲ್ಲಿ ಕೆಲ ತಿಂಗಳ ಹಿಂದೆ ಇಬ್ಬರು ಯುವತಿಯರ ಬಟ್ಟೆ ಬಿಚ್ಚಿ ಸಾಮೂಹಿಕ ಅತ್ಯಾಚಾರ ನಡೆಸಿದ ಅಮಾನವೀಯ ಘಟನೆ ನಡೆದಿತ್ತು. ಇದನ್ನು ಗಂಭೀರವಾಗಿ ಕೇಂದ್ರ ಸರ್ಕಾರ ಜನರ ಆಕ್ರೋಶಕ್ಕೆ ಗುರಿಯಾಗಿತ್ತು. ಇದೀಗ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಬಹುಭಾಷಾ ನಟ ಕಿಶೋರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ-ನ್ಯಾಯ ಅಂದ್ರೆ ನ್ಯಾಯ...ಹಾಸ್ಟೆಲ್ ಹುಡುಗರನ್ನು ಕೆಣಕಿದ ಮೋಹಕತಾರೆಗೆ ಟಾಂಗ್ ಕೊಟ್ಟ ರಿಷಬ್ ಶೆಟ್ಟಿ..!
ಇನ್ನು ನಟಿ ಕಿಶೋರ್ ಆಗ್ಗಾಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಎತ್ತುತ್ತಿರುತ್ತಾರೆ. ಸಾಕಷ್ಟು ಬಾರಿ ಮೋದಿ ಸರ್ಕಾರವನ್ನು ಟೀಕಿಸಿದ್ದಾರೆ. ಇದೀಗ ಮಣಿಪುರದಲ್ಲಿ ನಡೆದ ಯುವತಿಯರ ಬೆತ್ತಲೆ ಮರವಣಿಗೆ ಮತ್ತು ಅತ್ಯಾಚಾರಗೈದ ಕ್ರೌರ್ಯ ಕೃತ್ಯವನ್ನು ಖಂಡಿಸಿ ಮತ್ತೇ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
"ಕೇವಲ ಮತ ಮತ್ತು ಅಧಿಕಾರಕ್ಕಾಗಿ ಜನರನ್ನು ವಿಭಜಿಸುವ ನಿಮ್ಮ ರಾಜಕೀಯ, ಇಂದು ನಮ್ಮನ್ನು ಇಲ್ಲಿಗೆ ತಂದು ನಿಲ್ಲಿಸಿದೆ. ನೀವು ಈಗಲಾದರೂ ನಿಮ್ಮ ಬಾಯಿ ತೆರೆದು ಈ ಮಹಿಳೆಯರಲ್ಲಿ ಕ್ಷಮೆಯಾಚಿಸದಿದ್ದರೆ, ನಿಮ್ಮ 56 ಇಂಚಿನ ಬಡಾಯಿಗೆ ಧಿಕ್ಕಾರವಿರಲಿ. ಹೌದು, ನಿಮ್ಮಿಂದ ನಾವು ಏನನ್ನಾದರೂ ನಿರೀಕ್ಷಿಸಲು ಹೇಗೆ ಸಾಧ್ಯ? ಮಹಿಳಾ ಕುಸ್ತಿಪಟುಗಳ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳನ್ನು ಸದ್ದಿಲ್ಲದೆ ಬೆಂಬಲಿಸಿದವರು ನೀವೇ ಅಲ್ಲವೇ?..ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಸದ್ದಿಲ್ಲದೆ ಬಿಡುಗಡೆ ಮಾಡಿ ಸಂಭ್ರಮಿಸಿದವರು ನೀವೇ ಅಲ್ಲವೇ?, ಹಾತ್ರಸ್ ನ ದಲಿತ ಹೆಣ್ಣುಮಕ್ಕಳ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಮುಚ್ಚಿ ಮುಗಿಸಿದವರು ನೀವೇ ಅಲ್ಲವೇ?..ನಿಮ್ಮ ಘೋಷಣೆಗಳನ್ನು ನಿಲ್ಲಿಸಿ ಮೊದಲು ಕೆಲಸ ಮಾಡಿ. ನಿಮ್ಮ ಬೇಟಿ ಬಚಾವೋ ನಾಟಕಕ್ಕೆ ಧಿಕ್ಕಾರವಿರಲಿ." ಎಂದು ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.