Kishore : ಉರಿಗೌಡ, ನಂಜೇಗೌಡ ವಿವಾದ.. ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ?

Actor Kishore : ಉರಿಗೌಡ ಮತ್ತು ನಂಜೇಗೌಡ ವಿವಾದದ ಕುರಿತು ನಟ ಕಿಶೋರ್‌ ಮಾತನಾಡಿದ್ದಾರೆ. ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಸುದೀರ್ಘ ಬರವಣಿಗೆಯನ್ನು ಬರೆದುಕೊಂಡಿದ್ದಾರೆ. ʼಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ… ಇದು ಇಂದಿನ ಪ್ರಜಾಪ್ರಭುತ್ವ.ʼ ಅಂತ ಪೋಸ್ಟ್‌ ಮೂಲಕ ಕಿಶೋರ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Written by - Krishna N K | Last Updated : Mar 23, 2023, 05:29 PM IST
  • ಉರಿಗೌಡ ಮತ್ತು ನಂಜೇಗೌಡ ವಿವಾದದ ಕುರಿತು ನಟ ಕಿಶೋರ್‌ ಪೋಸ್ಟ್‌.
  • ಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ… ಇದು ಇಂದಿನ ಪ್ರಜಾಪ್ರಭುತ್ವ.ʼ
  • ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ? ಎಂದ ಕಿಶೋರ್‌ ಗುಡುಗಿದ್ದಾರೆ.
 Kishore : ಉರಿಗೌಡ, ನಂಜೇಗೌಡ ವಿವಾದ.. ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ? title=

Kishore on Urigowda and Nanjegowda : ರಾಜ್ಯ ರಾಜಕಾರಣದಲ್ಲಿ ಉರಿಗೌಡ-ನಂಜೇಗೌಡ ಎಂಬ ಹೆಸರು ದೊಡ್ಡ ಅಲೆಯನ್ನೇ ಸೃಷ್ಟಿಸುತ್ತಿವೆ. ಟಿಪ್ಪು ಸುಲ್ತಾನನನ್ನು ಕೊಂದಿದ್ದು ಇವರೇ ಅಂತ ಬಿಜೆಪಿ ಹೇಳಿದಾಗಿನಿಂದಲೂ ಕಾಂಗ್ರೆಸ್‌, ಜೆಡಿಎಸ್‌ ತೀವ್ರವಾಗಿ ಖಂಡಿಸುತ್ತಾ ಬಂದಿದೆ. ಅಲ್ಲದೆ, ಇತಿಹಾಸಕಾರರು ಸಹ ಇದನ್ನು ಅಲ್ಲಗಳೆದಿದ್ದಾರೆ. ಇನ್ನೊಂದು ಕಡೆ ಉರಿಗೌಡ ಮತ್ತು ನಂಜೇಗೌಡ ಎಂಬ ಟೈಟಲ್‌ ಸಿನಿಮಾ ಪೋಸ್ಟರ್‌ ಸಹ ಇಂಟರ್‌ನೆಟ್‌ನಲ್ಲಿ ವೈರಲ್‌ ಆಗಿದೆ.

ಇದೀಗ ಉರಿಗೌಡ ಮತ್ತು ನಂಜೇಗೌಡ ವಿವಾದದ ಕುರಿತು ನಟ ಕಿಶೋರ್‌ ಮಾತನಾಡಿದ್ದಾರೆ. ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಸುದೀರ್ಘ ಬರವಣಿಗೆಯನ್ನು ಬರೆದುಕೊಂಡಿದ್ದಾರೆ. ಅದರಲ್ಲಿ, ʼಯಾವುದೋ ಕಾಲದ ರಾಜರ ಹೆಸರಲ್ಲಿ ಇಂದಿನ ರಾಜಕೀಯ… ಇದು ಇಂದಿನ ಪ್ರಜಾಪ್ರಭುತ್ವ.
ನಂಜೇಗೌಡ ಉರಿಗೌಡರ ಸೃಷ್ಟಿ ಒಂದು ಕಲ್ಲಿಗೆ ಎರಡು ಹಕ್ಕಿ ಹೊಡೆಯೋ ಯತ್ನವೇ?. ಇತ್ತ ಟಿಪ್ಪುವನ್ನು ಕೊಂದವರೆಂದು ಹೇಳಿ ಮುಸ್ಲಿಮರನ್ನೂ ಒಕ್ಕಲಿಗರನ್ನೂ ಒಬ್ಬರ ಮೇಲೊಬ್ಬರನ್ನು ಎತ್ತಿಕಟ್ಟುತ್ತಲೇ ಒಕ್ಕಲಿಗರು ಬ್ರಿಟೀಷರ ಪರವಾಗಿದ್ದರೆಂದು ಹೇಳಿ ಮುಂದೊಂದು ದಿನ ಒಕ್ಕಲಿಗರಿಗೂ ದೇಶದ್ರೋಹಿ ಪಟ್ಟಕಟ್ಟುವ ಹುನ್ನಾರವೇ?..

 
 
 
 

 
 
 
 
 
 
 
 
 
 
 

A post shared by Kishore Kumar Huli (@actorkishore)

ಇದನ್ನೂ ಓದಿ: Kangana Ranaut : ಬರ್ತ್‌ಡೇ ದಿನ ʼಶತ್ರುಗಳಿಗೆ ಥ್ಯಾಂಕ್ಸ್‌ʼ ಹೇಳಿದ ಬಿಟೌನ್‌ ಕ್ವೀನ್‌ ಕಂಗನಾ..!

ಮೊದಲು ಹಿಂದೂ ಮುಸ್ಲಿಂ ಅಂದರು ಮನೆಯ ಸದಸ್ಯರನ್ನು ಎತ್ತಿಕಟ್ಟಿದರು, ಗಾಂಧಿಯೆಂದರು, ಗಾಂಧಿ ಕೊಂದರು, ರೈತರನ್ನು ಭಯೋತ್ಪಾದಕರೆಂದರು, ಉರಿ ಹೊತ್ತಿಸಿದರು ನಂಜು ಕಾರಿದರು ಒಕ್ಕಲಿಗರೆಂದರು ಟಿಪ್ಪುವೆಂದರು ಬಿಹಾರಿಗಳೆಂದರು ತಮಿಳರೆಂದರು, ಧರ್ಮವೆಂದರು, ಜಾತಿಯೆಂದರು, ದಲಿತರೆಂದರು ಭಾಷೆಯೆಂದರು ದೇಶವೆಂದರು, ಇತಿಹಾಸ ತಿರುಚಿದರು, ಸುಳ್ಳು ಸುದ್ದಿ ಹರಡಿದರು . ಕೇವಲ ಅಧಿಕಾರದಾಸೆಯಿಂದ ಸರ್ವಜನಾಂಗದ ಶಾಂತಿಯ ತೋಟವನ್ನು ಕದಡಿ, ವಸುದೇವ ಕುಟುಂಬಕಂನ ಹೆಮ್ಮೆಯ ಕುಟುಂಬವನ್ನು ಮುರಿಯಲು ಬರುತ್ತಿದ್ದಾರೆ ಮಾಡಿದ ಕೆಲಸದ ಮೇಲೆ ಮತ ಯಾಚಿಸಲು ಯೋಗ್ಯತೆಯಿಲ್ಲದ ಧರ್ಮಾಂಧ ಮನೆಹಾಳರು.. ಚುನಾವಣೆಯ ಕಾಲವಿದು ಎಚ್ಚರ.. ಎಂದು ಕಿಶೋರ್‌ ವಾಗ್ದಾಳಿ ನಡೆಸಿದ್ದಾರೆ.

ಸಮಾಜಿಕ ಮತ್ತು ರಾಜಕೀಯ ವಿಚಾರಗಳ ಕುರಿತು ಕಿಶೋರ್‌ ನೇರವಾಗಿ ಮಾತನಾಡುತ್ತಿರುತ್ತಾರೆ. ಅಲ್ಲದೆ, ತಮ್ಮ ವಿಚಾರಧಾರೆಗಳನ್ನು ತಿಳಿಸುವ ಮೂಲಕ ಸರಿ ತಪ್ಪುಗಳ ಹೇಳುತ್ತಿರುತ್ತಾರೆ. ಕಳೆದ ಕೆಲವು ದಿನಗಳ ಹಿಂದೆ ಸಂದರ್ಶನವೊಂದರಲ್ಲಿ ಕಿಶೋರ್ ಅವರು, ಕೆಜಿಎಫ್ ಅನ್ನು ಬ್ರೈನ್​ಲೆಸ್ ಸಿನಿಮಾ ಎಂದಿದ್ದಾಗಿ ವಿವಾದ ಸೃಷ್ಟಿಯಾಗಿತ್ತು. ಬಳಿಕ ಅದಕ್ಕೆ ಕಿಶೋರ್ ಸ್ಪಷ್ಟನೆ ನೀಡಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News