ಬೆಂಗಳೂರು: ನಟ ರಾಘವೇಂದ್ರ ರಾಜಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅನಾರೋಗ್ಯದ ಕಾರಣ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.
ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ರಾಘವೇಂದ್ರ ರಾಜಕುಮಾರ್(Raghavendra Rajkumar) ದಾಖಲಾಗಿದ್ದಾರೆ. ಸಂಜೆ 6 ಗಂಟೆಗೆ ಆರೋಗ್ಯ ತಪಾಸಣೆಗೆ ಬಂದಿದ್ದ ರಾಘವೇಂದ್ರ ರಾಜಕುಮಾರ್ ಅವರಿಗೆ ಸದ್ಯದ ಮಾಹಿತಿ ಪ್ರಕಾರ ಯಾವುದೇ ಗಂಭೀರ ಸಮಸ್ಯೆ ಇಲ್ಲ. ತಡರಾತ್ರಿ ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Rihanna ಅಸಲಿ ಮುಖವಾಡ ಬಹಿರಂಗ, ಶ್ರೀ ಗಣೇಶನ ಪೆಂಡೆಂಟ್ ಧರಿಸಿ ಟಾಪ್ ಲೆಸ್ ಫೋಟೋಶೂಟ್
ನಟ ಹಾಗೂ ಅವರ ಸಹೋದರ ಶಿವರಾಜ್ ಕುಮಾರ್(Shiva Rajkumar) ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಮೊದಲು ಇದೇ ಆಸ್ಪತ್ರೆಯಲ್ಲಿ ರಾಘವೇಂದ್ರ ರಾಜಕುಮಾರ್ ಚಿಕಿತ್ಸೆ ಪಡೆದಿದ್ದರು. ಬೆಳಗ್ಗೆಯಿಂದ ಅವರು ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು, ಆಸ್ಪತ್ರೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Dia Mirza Weds Vaibhav Rekhi: ವೈಭವ್ ರೇಖಿ ಜೊತೆಗೆ ದಿಯಾ ಮಿರ್ಜಾ ವಿವಾಹ, ಇಲ್ಲಿವೆ Inside Pics
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.