ಕನ್ನಡ ಹಿರಿಯ ನಟ ಶರತ್‌ಬಾಬು ಆರೋಗ್ಯದಲ್ಲಿ ಏರುಪೇರು..! ಹೈದರಾಬಾದ್‌ ಆಸ್ಪತ್ರೆಗೆ ಶಿಫ್ಟ್‌

Sharath babu Health : ಹಿರಿಯ ನಟ ಶರತ್ ಬಾಬು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊದಲಿಗೆ ಬೆಂಗಳೂರಿನ ಆಸ್ಪತ್ರೆಗೆ ಶರತ್ ಬಾಬು ಅವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಇದೀಗ, ಅವರ ಆರೋಗ್ಯ ಮತ್ತಷ್ಟು ಹದಗೆಟ್ಟ ಹಿನ್ನೆಲೆ ಹೈದರಾಬಾದ್‌ನ ಆಸ್ಪತ್ರೆಗೆ ರವಾನಿಸಲಾಗಿದೆ.

Written by - Krishna N K | Last Updated : Apr 22, 2023, 04:57 PM IST
  • ʼಅಮೃತವರ್ಷಿಣಿʼ ಖ್ಯಾತಿಯ ನಟ ಶರತ್‌ಬಾಬು ಆಸ್ಪತ್ರೆಗೆ ದಾಖಲು.
  • ಬೆಂಗಳೂರಿನ ಆಸ್ಪತ್ರೆಗೆ ಶರತ್ ಬಾಬು ಅವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
  • ಇದೀಗ, ಅವರ ಆರೋಗ್ಯ ಮತ್ತಷ್ಟು ಹದಗೆಟ್ಟ ಹಿನ್ನೆಲೆ ಹೈದರಾಬಾದ್‌ನ ಆಸ್ಪತ್ರೆಗೆ ರವಾನಿಸಲಾಗಿದೆ.
ಕನ್ನಡ ಹಿರಿಯ ನಟ ಶರತ್‌ಬಾಬು ಆರೋಗ್ಯದಲ್ಲಿ ಏರುಪೇರು..! ಹೈದರಾಬಾದ್‌ ಆಸ್ಪತ್ರೆಗೆ ಶಿಫ್ಟ್‌ title=

Actor Sharath babu Health : ಕನ್ನಡದ ಹಿಟ್‌ ಸಿನಿಮಾ ʼಅಮೃತವರ್ಷಿಣಿʼಯಲ್ಲಿ ನಟಿಸುವ ಮೂಲಕ ಕನ್ನಡಿಗರಿಗೆ ಚಿರಪರಿಚಿತರಾಗಿದ್ದ ಜನಪ್ರಿಯ ಹಿರಿಯ ನಟ ಶರತ್ ಬಾಬು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊದಲಿಗೆ ಬೆಂಗಳೂರಿನ ಆಸ್ಪತ್ರೆಗೆ ಶರತ್ ಬಾಬು ಅವರನ್ನು ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ, ಅವರ ಆರೋಗ್ಯ ಮತ್ತಷ್ಟು ಹದಗೆಟ್ಟ ಹಿನ್ನೆಲೆ ಹೈದರಾಬಾದ್‌ನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ಶರತ್‌ ಬಾಬು ಅವರನ್ನು ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ. ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಸಾಮಾನ್ಯ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶರತ್ ಬಾಬು ಬೇಗ ಗುಣಮುಖರಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ. 

ಇದನ್ನೂ ಓದಿ: Priyanka Chopra : ನೀವೆಂದೂ ನೋಡಿರದ ʼಪಿಂಕಿ ಹಾಟ್‌ ಅವತಾರʼದ ಫೋಟೋಗಳು...! ಒಮ್ಮೆ ನೋಡಿ ಬಿಡಿ

1951 ರಲ್ಲಿ ಆಂಧ್ರಪ್ರದೇಶದಲ್ಲಿ ಜನಿಸಿದ ಶರತ್‌ ಬಾಬು ಅವರು, ಸುಮಾರು ನಾಲ್ಕು ದಶಕಗಳಿಂದ ಶರತ್‌ ಅವರು ಕನ್ನಡ, ತೆಲುಗು ಮತ್ತು ಮಲಯಾಳಂ ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದಾರೆ. ಇದುವರೆಗೂ ಅವು 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 20 ಕ್ಕೂ ಹೆಚ್ಚು ಕನ್ನಡ ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದರು, ಅವರ ನಟನೆಯ ಅಮೃತವರ್ಷಿಣಿ ಇಂದಿಗೂ ಸಹ ಜನಪ್ರಿಯವಾದ ಸಿನಿಮಾ. 1973 ರಲ್ಲಿ ʼರಾಮರಾಜ್ಯಂʼ ಎಂಬ ತೆಲುಗು ಚಿತ್ರದ ಮೂಲಕ ಸಿನಿಪಯಣ ಆರಂಭಿಸಿದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News