ಹಣ ಪಡೆಯದೇ ʼರಾಮಾಯಣʼ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ರಾಕಿಂಗ್‌ ಸ್ಟಾರ್‌ ಯಶ್‌..! ಏಕೆ ಗೊತ್ತೆ

actor Yash remuneration : ರಾಕಿಂಗ್‌ ಸ್ಟಾರ್‌ ಯಶ್‌ ಪ್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್‌ ಸಿನಿಮಾದ ಮೂಲಕ ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ಪ್ರಸಿದ್ಧರಾದರು. ಈ ಸಿನಿಮಾ ನಂತರ ಸಾಕಷ್ಟು ಗ್ಯಾಪ್‌ ತೆಗೆದುಕೊಂಡಿರುವ ನಟ ಇದೀಗ ಟಾಕ್ಸಿಕ್‌ ಸಿನಿಮಾದ ಮೂಲಕ ತೆರೆಗೆ ಬರಲು ರೆಡಿಯಾಗಿದ್ದಾರೆ. 

Written by - Krishna N K | Last Updated : Apr 10, 2024, 06:50 PM IST
    • ಸ್ಯಾಂಡಲ್‌ವುಡ್‌ ರಾಕಿಭಾಯ್‌ ಯಶ್ ಬಾಲಿವುಡ್‌ಗೆ ಪಾದಾರ್ಪಣೆ
    • ʼರಾಮಾಯಣʼ ಸಿನಿಮಾದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸಲಿದ್ದಾರೆ ಯಶ್‌
    • ಈ ಸಿನಿಮಾದಲ್ಲಿ ನಟಿಸಲು ರಾಕಿ ಸಂಭಾವನೆ ಪಡೆದಿಲ್ಲ ಎಂದು ಹೇಳಲಾಗಿದೆ.
ಹಣ ಪಡೆಯದೇ ʼರಾಮಾಯಣʼ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ರಾಕಿಂಗ್‌ ಸ್ಟಾರ್‌ ಯಶ್‌..! ಏಕೆ ಗೊತ್ತೆ title=

Yash in Ramayana movie : ಇದೀಗ ಸ್ಯಾಂಡಲ್‌ವುಡ್‌ ರಾಕಿಭಾಯ್‌ ಯಶ್ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದಾರೆ. ನಿತೇಶ್ ತಿವಾರಿ ನಿರ್ದೇಶನದ ʼರಾಮಾಯಣʼ ಸಿನಿಮಾದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ಹೇಳಲಾಗಿದೆ.. ಅಲ್ಲದೆ ಈ ಸಿನಿಮಾದಲ್ಲಿ ನಟಿಸಲು ರಾಕಿ ಯಾವುದೇ ಸಂಭಾವನೆ ಪಡೆದಿಲ್ಲ ಎಂದು ಹೇಳಲಾಗಿದೆ.

ಹೌದು.. ರಾಕಿಂಗ್‌ ಸ್ಟಾರ್‌ ಯಶ್‌ ಪ್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್‌ ಸಿನಿಮಾದ ಮೂಲಕ ಪ್ಯಾನ್‌ ಇಂಡಿಯಾ ಲೆವೆಲ್‌ನಲ್ಲಿ ಪ್ರಸಿದ್ಧರಾದರು. ಈ ಸಿನಿಮಾ ನಂತರ ಸಾಕಷ್ಟು ಗ್ಯಾಪ್‌ ತೆಗೆದುಕೊಂಡಿರುವ ನಟ ಇದೀಗ ಟಾಕ್ಸಿಕ್‌ ಸಿನಿಮಾದ ಮೂಲಕ ತೆರೆಗೆ ಬರಲು ರೆಡಿಯಾಗಿದ್ದಾರೆ. ಈ ಚಿತ್ರದ ಶೂಟಿಂಗ್‌ ಪ್ರಗತಿಯಲ್ಲಿದೆ..

ಇದನ್ನೂ ಓದಿ:ವಿಡಿಯೋ ಕಾಲ್‌ನಲ್ಲಿ S*X ಮಾಡಿದ್ದೆ.. ಯಾರ ಜೊತೆ ಅಂತ...! ಶಾಕಿಂಗ್‌ ವಿಚಾರ ಬಿಚ್ಚಿಟ್ಟ ಪಿಂಕಿ

ಅಲ್ಲದೆ, ರಾಮಾಯಣ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್‌ ಕಪೂರ್‌ ಮತ್ತು ಸೀತೆಯಾಗಿ ಸಾಯಿ ಪಲ್ಲವಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಯಶ್‌ ದಶಕಂಠ ರಾವಣನ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ತಿಳಿದು ಬಂದಿದೆ. ಸಧ್ಯ ಈ ಚಿತ್ರದಲ್ಲಿ ನಟಿಸಲು ಯಶ್‌ ಸಂಭಾವನೆ ಪಡೆದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಅವರು ಬೇರೆಯದೇ ರೀತಿಯ ಡೀಲ್ ಮಾಡಿಕೊಂಡಿದ್ದಾರಂತೆ. 

ಯಸ್‌.. ದೊಡ್ಡ ಮಟ್ಟದಲ್ಲಿ ಸಂಭಾವನೆ ಪಡೆಯುತ್ತಿರುವ ನಟ ಈ ಸಿನಿಮಾಗೆ ನಿರ್ಮಾಪಕರಾಗಲಿದ್ದಾರೆ ಎಂದು ಹೇಳಲಾಗಿದೆ. ಆದರೆ ಇದು ಅಧಿಕೃತವಲ್ಲ. ಮೊದಲು ರಾಮಾಯಣ ಸಿನಿಮಾಗಾಗಿ ಯಶ್ 80 ಕೋಟಿ ರೂಪಾಯಿ ಸಂಭಾವನೆಗೆ ಬೇಡಿಕೆ ಇಟ್ಟಿದ್ದರಂತೆ, ಇದಕ್ಕೆ ನಿರ್ಮಾಪಕರೂ ಸಹ ಒಪ್ಪಿಗೆ ನೀಡಿದ್ದರು. ಅದರೆ ಯಶ್ ಸಂಭಾವನೆ ಬದಲು ಆ 80 ಕೋಟಿ ರೂಪಾಯಿನ ಸಿನಿಮಾ ಮೇಲೆ ಹೂಡಿಕೆ ಮಾಡುವಂತೆ ಕೋರಿದ್ದಾರೆ ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News