ಕಾಂತಾರ-2ಗೆ ನಟಿ ರಶ್ಮಿಕಾ ಮಂದಣ್ಣ ನಾಯಕಿ..! ಗುಟ್ಟು ಬಿಟ್ಟುಕೊಟ್ಟು ಹೀಗಂದ ನ್ಯಾಷನಲ್ ಕ್ರಶ್

Rashmika Mandanna New Kannada Movie: ನಟಿ ರಶ್ಮಿಕಾ ಮಂದಣ್ಣ ಕನ್ನಡದಲ್ಲಿ ಅಭಿನಯಿಸಿದ ಮೊದಲ ಸಿನಿಮಾ ಕಿರಿಕ್ ಪಾರ್ಟಿ. ಈ ಚಿತ್ರ ರಶ್ಮಿಕಾ ವೃತ್ತಿ ಬದುಕಿಗೆ ಭದ್ರ ಅಡಿಪಾಯ ಹಾಕಿತ್ತು. 2016ರಲ್ಲಿ ತೆರೆಗೆ ಬಂದ ಕಿರಿಕ್ ಪಾರ್ಟಿ ಸಿನಿಮಾವನ್ನು ರಿಷಬ್ ಶೆಟ್ಟಿ ನಿರ್ದೇಶಿಸಿದ್ದರೆ, ಜಿ.ಎಸ್. ಗುಪ್ತಾ ಮತ್ತು ರಕ್ಷಿತ್ ಶೆಟ್ಟಿ ನಿರ್ಮಿಸಿದ್ದರು

Written by - Bhavishya Shetty | Last Updated : Dec 18, 2023, 07:36 PM IST
    • ನ್ಯಾಷನಲ್ ಕ್ರಶ್ ಎಂದೇ ಖ್ಯಾತಿ ಪಡೆದಿರುವ ನಟಿ ರಶ್ಮಿಕಾ ಮಂದಣ್ಣ
    • ರಶ್ಮಿಕಾ ಕನ್ನಡದಲ್ಲಿ ಅಭಿನಯಿಸಿದ ಮೊದಲ ಸಿನಿಮಾ ಕಿರಿಕ್ ಪಾರ್ಟಿ
    • ಅನಿಮಲ್ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ಅಭಿನಯಿಸಿದ್ದರು
ಕಾಂತಾರ-2ಗೆ ನಟಿ ರಶ್ಮಿಕಾ ಮಂದಣ್ಣ ನಾಯಕಿ..! ಗುಟ್ಟು ಬಿಟ್ಟುಕೊಟ್ಟು ಹೀಗಂದ ನ್ಯಾಷನಲ್ ಕ್ರಶ್ title=
Rashmika Mandanna

Rashmika Mandanna: ನ್ಯಾಷನಲ್ ಕ್ರಶ್ ಎಂದೇ ಖ್ಯಾತಿ ಪಡೆದಿರುವ ನಟಿ ರಶ್ಮಿಕಾ ಮಂದಣ್ಣ ಕನ್ನಡದಲ್ಲಿ ಕೊನೆಯದಾಗಿ ‘ಪೊಗರು’ ಸಿನಿಮಾದಲ್ಲಿ ನಟಿಸಿದ್ದರು. ಅದಾದ ಬಳಿಕ ಸ್ಯಾಂಡಲ್ವುಡ್ ಕಡೆ ಮುಖ ಮಾಡಿರಲಿಲ್ಲ. ಆದರೆ ಇದೀಗ ಹೊಸ ಸಿನಿಮಾದ ಸ್ಕ್ರಿಪ್ಟ್ ಚರ್ಚೆ ನಡೆಯುತ್ತಿದೆ ಎಂದು ಸ್ವತಃ ಅವರೇ ಹೇಳಿದ್ದಾರೆ.

ಇದನ್ನೂ ಓದಿ: ವಂಚನೆ ಆರೋಪ… ವಿರಾಟ್ ಕೊಹ್ಲಿಯ ‘ಬೆಸ್ಟ್ ಫ್ರೆಂಡ್’ ಕ್ರಿಕೆಟ್ ಲೋಕದಿಂದ ಬ್ಯಾನ್!

ನಟಿ ರಶ್ಮಿಕಾ ಮಂದಣ್ಣ ಕನ್ನಡದಲ್ಲಿ ಅಭಿನಯಿಸಿದ ಮೊದಲ ಸಿನಿಮಾ ಕಿರಿಕ್ ಪಾರ್ಟಿ. ಈ ಚಿತ್ರ ರಶ್ಮಿಕಾ ವೃತ್ತಿ ಬದುಕಿಗೆ ಭದ್ರ ಅಡಿಪಾಯ ಹಾಕಿತ್ತು. 2016ರಲ್ಲಿ ತೆರೆಗೆ ಬಂದ ಕಿರಿಕ್ ಪಾರ್ಟಿ ಸಿನಿಮಾವನ್ನು ರಿಷಬ್ ಶೆಟ್ಟಿ ನಿರ್ದೇಶಿಸಿದ್ದರೆ, ಜಿ.ಎಸ್. ಗುಪ್ತಾ ಮತ್ತು ರಕ್ಷಿತ್ ಶೆಟ್ಟಿ ನಿರ್ಮಿಸಿದ್ದರು.

ಇನ್ನು ಇದಾದ ಬಳಿಕ ತಮಿಳು, ತೆಲುಗು, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾದರು ರಶ್ಮಿಕಾ. ಆದ್ರೆ ಇತ್ತೀಚಿಗೆ ನೀಡಿದ ಹೇಳಿಕೆಯೊಂದರಲ್ಲಿ, “ಕನ್ನಡ ಭಾಷೆಯ ಹೊಸ ಸಿನಿಮಾದ ಸ್ಕ್ರಿಪ್ಟ್ ಚರ್ಚೆ ನಡೆಯುತ್ತಿದೆ. ಕಂಬ್ಯಾಕ್ ಮಾಡುತ್ತೇನೆ” ಎಂಬರ್ಥದಲ್ಲಿ ಮಾತನಾಡಿದ್ದಾರೆ.

ಬಾಲಿವುಡ್’ನಲ್ಲಿ ಇತ್ತೀಚೆಗೆ ತೆರೆಕಂಡ ರಣಬೀರ್ ಕಪೂರ್ ಅಭಿನಯದ ಅನಿಮಲ್ ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ಅಭಿನಯಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಕಂಡಿತ್ತು. ಅಂದಹಾಗೆ ಕರ್ನಾಟಕದಲ್ಲಿ ನಡೆದ ಅನಿಮಲ್ ಸಿನಿಮಾದ ಪ್ರಚಾರ ಕಾರ್ಯಕ್ರಮದಲ್ಲಿ ವ್ಯಕ್ತಿಯೊಬ್ಬರು ನೀವು ಕನ್ನಡ ಸಿನಿ ಇಂಡಸ್ಟ್ರಿಗೆ ಯಾವಾಗ ಕಂಬ್ಯಾಕ್ ಮಾಡುತ್ತೀರಿ ಎಂದು ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: ವರ್ತೂರ್ ಸಂತೋಷ್ ಬಳಿಕ ಮತ್ತೊಬ್ಬ ಬಿಗ್ ಬಾಸ್ ಸ್ಪರ್ಧಿ ವಿರುದ್ಧ ಕೇಸ್: ಇಂದೇ ಅರೆಸ್ಟ್ ಸಾಧ್ಯತೆ…!

ಈ ಪ್ರಶ್ನೆಗೆ ನಗುತ್ತಲೇ ಉತ್ತರಿಸಿದ ನಟಿ, “ಒಂದು ಸಿನಿಮಾದ ಬಗ್ಗೆ ಚರ್ಚೆ ನಡೆಯುತ್ತಿದೆ. ಅದರ ಅಪ್ಡೇಟ್ ಆದಷ್ಟು ಬೇಗ ನಿಮಗೆ ಕೊಡುತ್ತೇನೆ” ಎಂದು ಹೇಳಿದ್ದಾರೆ. ಈ ಹೇಳಿಕೆ ನೀಡಿದ್ದೇ ತಡ, ರಶ್ಮಿಕಾ ಕಾಂತಾರ ಸಿನಿಮಾದಲ್ಲಿ ನಟಿಸುವ ಸಾಧ್ಯತೆ ಇದೆ, ನಟಿಸಬಹುದು, ಎಂದೆಲ್ಲಾ ಪ್ರತಿಕ್ರಿಯೆಗಳನ್ನು ನೆಟ್ಟಿಗರು ನೀಡುತ್ತಿದ್ದಾರೆ. ಆದರೆ ಈ ಬಗ್ಗೆ ದೃಢತೆ ಇಲ್ಲ.

 

 

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News