Akshay Kumar: ಬಾಲಿವುಡ್ ನಟ ಅಕ್ಷಯ್ ಕುಮಾರ್ ತಾಯಿ ನಿಧನ

ಅನಾರೋಗ್ಯ ಕಾರಣ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Written by - Puttaraj K Alur | Last Updated : Sep 8, 2021, 10:15 AM IST
  • ಖ್ಯಾತ ಬಾಲಿವುಡ್ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನ
  • ಅನಾರೋಗ್ಯ ಕಾರಣದಿಂದ ಸೆ.3ರಂದು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು
  • ತಾಯಿ ಅನಾರೋಗ್ಯದ ವಿಷಯ ತಿಳಿದು ಇಂಗ್ಲೆಂಡ್ ನಿಂದ ಮುಂಬೈಗೆ ಆಗಮಿಸಿದ್ದ ಅಕ್ಷಯ್ ಕುಮಾರ್
Akshay Kumar: ಬಾಲಿವುಡ್ ನಟ ಅಕ್ಷಯ್ ಕುಮಾರ್ ತಾಯಿ ನಿಧನ title=
ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನ Photo Courtesy: @India.com)

ಮುಂಬೈ: ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ(Aruna Bhatia) ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3ರಂದು ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರ ಆರೋಗ್ಯ ಸ್ಥಿತಿಯಲ್ಲಿದ್ದ ಅವರಿಗೆ ಆಸ್ಪತ್ರೆಯ ವೈದ್ಯರು ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದರು.

ತಮ್ಮ ತಾಯಿ ನಿಧನವಾಗಿರುವ ಸುದ್ದಿಯನ್ನು ಸ್ವತಃ ನಟ ಅಕ್ಷಯ್ ಕುಮಾರ್(Akshay Kumar) ಅವರೇ ಖಚಿತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನನ್ನ ತಾಯಿಯೇ ನನ್ನ ಮೂಲ. ಇಂದು ನಾನು ನನ್ನ ಅಸ್ತಿತ್ವದ ಮೂಲದಲ್ಲಿ ಅಸಹನೀಯ ನೋವನ್ನು ಅನುಭವಿಸುತ್ತಿದ್ದೇನೆ. ನನ್ನ ಅಮ್ಮ ಶ್ರೀಮತಿ ಅರುಣಾ ಭಾಟಿಯಾ ಇಂದು ಬೆಳಿಗ್ಗೆ ಶಾಂತಿಯುತವಾಗಿ ಈ ಜಗತ್ತನ್ನು ತೊರೆದರು. ಬೇರೆ ಜಗತ್ತಿನಲ್ಲಿರುವ ನನ್ನ ತಂದೆಯೊಂದಿಗೆ ಅವರು ಸೇರಿಕೊಂಡರು. ನನ್ನ ತಾಯಿ ಗುಣಮುಖರಾಗಲೆಂದು ಬಯಸಿದ ನಿಮ್ಮ ಪ್ರಾರ್ಥನೆಯನ್ನು ನಾನು ಮತ್ತು ನನ್ನ ಕುಟುಂಬವು ಹೃದಯಪೂರ್ವಕವಾಗಿ ಗೌರವಿಸುತ್ತೇವೆ. ಓಂ ಶಾಂತಿ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Viral Video: ಸೋದರಸಂಬಂಧಿ ಮದುವೆಯಲ್ಲಿ ಪತಿ ಜೊತೆ ಸಖತ್ ಡ್ಯಾನ್ಸ್ ಮಾಡಿದ ಐಶ್ವರ್ಯ ರೈ..!

ಅನೇಕ ದಿನಗಳಿಂದ ಅನಾರೊಗ್ಯ ಸಮಸ್ಯೆ ಎದುರಿಸುತ್ತಿದ್ದ ಅಕ್ಷಯ್ ಕುಮಾರ್ ಅವರ ತಾಯಿ ಅರುಣಾ ಭಾಟಿಯಾ(Aruna Bhatia)ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಕಳೆದೆರಡು ದಿನಗಳ ಹಿಂದೆ ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತತ್ತು. ಕಳೆದೊಂದು ತಿಂಗಳಿನಿಂದ ತಮ್ಮ ‘ಸಿಂಡ್ರೆಲಾ’ ಸಿನಿಮಾ ಶೂಟಿಂಗ್​ಗಾಗಿ ಇಂಗ್ಲೆಂಡ್​ ಪ್ರವಾಸದಲ್ಲಿದ್ದ ಅಕ್ಷಯ್ ಕುಮಾರ್ ತಾಯಿಯ ಆರೋಗ್ಯ ವಿಚಾರಿಸಲು ಮುಂಬೈಗೆ ದೌಡಾಯಿಸಿದ್ದರು.

ನಟ ಅಕ್ಷಯ್ ಕುಮಾರ್ ಅವರಿಗೆ ತಾಯಿ ಕಂಡರೆ ಪಂಚಪ್ರಾಣ. ತಾಯಿ ಅನಾರೋಗ್ಯದ ವಿಚಾರ ತಿಳಿಯುತ್ತಿದ್ದಂತೆಯೇ ಶೂಟಿಂಗ್ ಸ್ಥಗಿತಗೊಳಿಸಿ ಭಾರತಕ್ಕೆ ಹಿಂದಿರುಗಿದ್ದರು. ಈ ಹಿಂದೆ ತಾವು ತಾಯಿಯ ಜೊತೆ ಸಮಯ ಕಳೆಯುತ್ತಿರುವುದರ ಬಗ್ಗೆ ನಟ ಪೋಸ್ಟ್ ಹಂಚಿಕೊಂಡಿದ್ದರು.

ಇದನ್ನೂ ಓದಿ: Indian Idol 12 Winner: ಪವನ್ ದೀಪ್ ರಾಜನ್ ಮುಡಿಗೆ ಇಂಡಿಯನ್ ಐಡಲ್ 12 ಪ್ರಶಸ್ತಿ

‘ತಾಯಿಯ ಜೊತೆಗೆ ಕೆಲವು ಸಮಯ ಕಳೆಯಲು ಶೂಟಿಂಗ್‌ನಿಂದ ಬ್ರೇಕ್ ತೆಗೆದುಕೊಂಡಿದ್ದೇನೆ. ನೀವು ಎಷ್ಟೇ ಬ್ಯುಸಿಯಾಗಿದ್ದರೂ, ಎಷ್ಟೇ ಎತ್ತರಕ್ಕೆ ಬೆಳದರೂ ನಿಮ್ಮ ತಂದೆ-ತಾಯಿಗೂ ವಯಸ್ಸಾಗುತ್ತಿದೆ ಎಂಬುದನ್ನು ಮರೆಯಬೇಡಿ. ಬಿಡುವು ಮಾಡಿಕೊಂಡು ನಿಮ್ಮ ತಂದೆ-ತಾಯಿ ಜೊತೆಗೆ ಕಾಲ ಕಳೆಯಿರಿ’ ಎಂದು ಅಕ್ಷಯ್ ಕುಮಾರ್ ಬರೆದುಕೊಂಡು ಅಭಿಮಾನಿಗಳಿಗೆ ಸಲಹೆ ನೀಡಿದ್ದರು.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News