'ಪುಷ್ಪಾ 2' ಪ್ರೀಮಿಯರ್‌ ಶೋ ವೇಳೆ ಕಾಲ್ತುಳಿತದಿಂದ ಮಹಿಳೆ ಸಾವು..! ₹25 ಲಕ್ಷ ನೆರವು ಘೋಷಿಸಿದ ಅಲ್ಲು ಅರ್ಜುನ್

Allu Arjun : 'ಪುಷ್ಪಾ 2: ದಿ ರೂಲ್' ಪ್ರೀಮಿಯರ್ ಶೋ ವೇಳೆ ಥಿಯೇಟರ್‌ನಲ್ಲಿ ಕಾಲ್ತುಳಿತ ಏರ್ಪಟ್ಟು ಮಹಿಳೆಯೊಬ್ಬರು ಸಾವನ್ನಪ್ಪಿದರು ಮತ್ತು ಅವರ ಮಗ ತೀವ್ರವಾಗಿ ಗಾಯಗೊಂಡಿದ್ದಾರೆ. ಇದೀಗ ಈ ಘಟನೆ ಸಂಭವಿಸಿ ಎರಡು ದಿನಗಳ ನಂತರ, ನಟ ಅಲ್ಲು ಅರ್ಜುನ್ ಕುಟುಂಬಕ್ಕೆ ಧೈರ್ಯ ತುಂಬುವುದರ ಜೊತೆ ₹25 ಲಕ್ಷ ರೂ. ಸಹಾಯವನ್ನು ಘೋಷಿಸಿದ್ದಾರೆ.  

Written by - Krishna N K | Last Updated : Dec 7, 2024, 01:05 PM IST
    • 'ಪುಷ್ಪಾ 2: ದಿ ರೂಲ್' ಪ್ರೀಮಿಯರ್ ಶೋ ವೇಳೆ ಥಿಯೇಟರ್‌ನಲ್ಲಿ ಕಾಲ್ತುಳಿತ
    • ಡಿಸೆಂಬರ್ 4 ರ ರಾತ್ರಿ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ದುರಂತ
    • ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ದುರಂತ ಘಟನೆಯ ಕುರಿತು ಮಾತನಾಡಿದ ಅಲ್ಲು ಅರ್ಜುನ್‌
'ಪುಷ್ಪಾ 2' ಪ್ರೀಮಿಯರ್‌ ಶೋ ವೇಳೆ ಕಾಲ್ತುಳಿತದಿಂದ ಮಹಿಳೆ ಸಾವು..! ₹25 ಲಕ್ಷ ನೆರವು ಘೋಷಿಸಿದ ಅಲ್ಲು ಅರ್ಜುನ್ title=

Allu Arjun on stampede : ದುಃಖದಲ್ಲಿರುವ ಕುಟುಂಬವನ್ನು ಖುದ್ದಾಗಿ ಭೇಟಿ ಮಾಡುವುದಾಗಿ ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ಮಾಡುವುದಾಗಿ ಭರವಸೆ ನೀಡಿದ್ದಾರೆ. ಬಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಆತನ ವೈದ್ಯಕೀಯ ವೆಚ್ಚವನ್ನು ನೋಡಿಕೊಳ್ಳುವುದಾಗಿ ಅಲ್ಲು ಅರ್ಜುನ್ ಭರವಸೆ ನೀಡಿದ್ದಾರೆ.

ಡಿಸೆಂಬರ್ 4 ರ ರಾತ್ರಿ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ದುರಂತದ ಬಗ್ಗೆ ಪ್ರತಿಕ್ರಿಯಿಸಲು ಅಲ್ಲು ಅರ್ಜುನ್ ತಮ್ಮ ಟ್ವಿಟರ್‌ (X) ಖಾತೆಯ ಮೂಲಕ ಸಂತಾಪ ಸೂಚಿಸಿದ್ದಾರೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ನಟ, ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ದುರಂತ ಘಟನೆಯ ಕುರಿತು ಮಾತನಾಡಿದ್ದಾರೆ.

ಇದನ್ನೂ ಓದಿ:Deepika Padukone: ಬೆಂಗಳೂರಿನಲ್ಲಿ ಪಂಜಾಬಿ ಗಾಯಕನಿಗೆ ಕನ್ನಡ ಕಲಿಸಿದ ಕನ್ನಡತಿ ದೀಪಿಕಾ ಪಡುಕೋಣೆ.

ಇದೊಂದು ತೀವ್ರ ಹೃದಯ ವಿದ್ರಾವಕ ಘಟನೆ. ಊಹೆಗೂ ನಿಲುಕದ ಕಷ್ಟದ ಸಮಯದಲ್ಲಿ ದುಃಖದಲ್ಲಿರುವ ಕುಟುಂಬಕ್ಕೆ ನನ್ನ ಸಂತಾಪಗಳು. ಈ ನೋವಿನಲ್ಲಿ ಅವರು ಒಬ್ಬಂಟಿಯಾಗಿಲ್ಲ, ನಾನು ಆ ಕುಟುಂಬವನ್ನು ವೈಯಕ್ತಿಕವಾಗಿ ಭೇಟಿಯಾಗುತ್ತಾನೆ. ಹೋದ ಪ್ರಾಣವನ್ನು ಮರಳಿ ತರಲು ಆಗದಿದ್ದರೂ, ಅವರಿಗೆ ಬೇಕಾದ ಸಹಾಯ ಮಾಡಲು ನಾನು ಸದಾ ಬದ್ಧನಾಗಿರುತ್ತೇನೆ ಎಂದು ಅಲ್ಲು ಅರ್ಜುನ್ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ..

ಇದನ್ನೂ ಓದಿ:ಮಗುವಿಗೆ ಜನ್ಮ ನೀಡಿದ ಮೂರು ತಿಂಗಳಲ್ಲೆ ಬೆಂಗಳೂರಿಗೆ ಎಂಟ್ರಿ ಕೊಟ್ಟ ದೀಪಿಕಾ ಪಡುಕೋಣೆ.. ಅಭಿಮಾನಿಗಳು ಫುಲ್‌ ಖುಷ್‌..!   

ಅಲ್ಲದೆ ವೀಡಿಯೊದಲ್ಲಿ, ಘಟನೆಯಿಂದ ಇಡೀ ಚಿತ್ರ ತಂಡವು ಆಘಾತಕ್ಕೊಳಗಾಗಿದೆ. ಮಹಿಳೆಯನ್ನು ಕಳೆದುಕೊಂಡ ಆ ಕುಟುಂಬದ ಭವಿಷ್ಯದ ಭದ್ರತೆಗಾಗಿ ₹25 ಲಕ್ಷ ರೂ. ನೀಡುವುದಾಗಿ ಅಲ್ಲು ಅರ್ಜುನ್‌ ಘೋಷಿಸಿದ್ದಾರೆ. ಅಲ್ಲದೆ, ಜಾಗೃತವಾಗಿರುವಂತೆ ಅಭಿಮಾನಿಗಳಿಗೂ ಮನವಿ ಮಾಡಿದ್ದಾರೆ.. 

ಇನ್ನು ಹೈದರಾಬಾದ್ ಪೊಲೀಸರು ಗುರುವಾರ ನಟ ಅಲ್ಲು ಅರ್ಜುನ್ ಮತ್ತು ಭದ್ರತಾ ತಂಡ ಹಾಗೂ ಸಂಧ್ಯಾ ಥಿಯೇಟರ್ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮೃತ ಮಹಿಳೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ (ಕೇಂದ್ರ ವಲಯ) ಅಕ್ಷಾಂಶ್ ಯಾದವ್ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News