ಡಾ.ವಿಷ್ಣುವರ್ಧನ್ ಹೆಸರಿನಲ್ಲಿ ಮತ್ತೊಂದು ಏಷ್ಯಾ ಬುಕ್ - ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್!

ಕಟೌಟ್‌ ಜಾತ್ರೆಯನ್ನು ಏಷ್ಯಾ ಬುಕ್‌ ಆಫ್‌ ರೆಕಾರ್ಡ್ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ ದಾಖಲಿಸಲು ಮನವಿಯನ್ನು ಸಲ್ಲಿಸಲಾಗಿತ್ತು. ಆ ಸಂಸ್ಥೆಗಳು ನಮ್ಮ ದಾಖಲೆ ಸಂಬಂಧ ಅನೇಕ ಹಂತದ ಪರೀಕ್ಷೆಗಳನ್ನು ನಡೆಸಿದರಲ್ಲದೆ, ಖುದ್ದಾಗಿ ಸ್ಥಳ ಪರಿಶೀಲನೆಯನ್ನು ಸಹ ಮಾಡಿದ್ದರು.

Written by - Bhavishya Shetty | Last Updated : Jun 2, 2023, 08:46 AM IST
    • ವಿಷ್ಣು ಪುಣ್ಯಭೂಮಿಯಲ್ಲಿ 51 ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ "ಕಟೌಟ್‌ ಜಾತ್ರೆ" ಎಂಬ ಕಾರ್ಯಕ್ರಮ
    • ಪೊಲೀಸ್‌ ಇಲಾಖೆಯ ಪ್ರಕಾರ ಎರಡೂವರೆ ಲಕ್ಷ ಕನ್ನಡಿಗರು ಈ ಕಟೌಟ್‌ ಜಾತ್ರೆಯಲ್ಲಿ ಭಾಗವಹಿಸಿದ್ದರು
    • ಕಟೌಟ್ ಜಾತ್ರೆಯು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ ದಾಖಲೆ
ಡಾ.ವಿಷ್ಣುವರ್ಧನ್ ಹೆಸರಿನಲ್ಲಿ ಮತ್ತೊಂದು ಏಷ್ಯಾ ಬುಕ್ - ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್!   title=
Dr Vishnuvardhan Cutout Fair

ಸಾಹಸ ಸಿಂಹ ಡಾ. ವಿಷ್ಣುವರ್ಧನ್‌ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಹಿನ್ನಲೆಯಲ್ಲಿ ಅವರ 50 ಸೇನಾನಿಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ 2022 ರ ಸೆಪ್ಟೆಂಬರ್‌ 18 ರಂದು ಬೆಂಗಳೂರಿನ ಡಾ. ವಿಷ್ಣು ಪುಣ್ಯಭೂಮಿಯಲ್ಲಿ 51 ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ "ಕಟೌಟ್‌ ಜಾತ್ರೆ" ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು.  ಆ ಕಟೌಟ್‌ ಗಳಿಗೆ ಬೃಹತ್‌ ಹಾರಗಳನ್ನು ಸಹ ಹಾಕಿಸಿದ್ದರು. ಇಡೀ ಕಾರ್ಯಕ್ರಮಕ್ಕೆ ಅಂದಾಜು 40 ಲಕ್ಷದಷ್ಟು ಹಣ ಖರ್ಚಾಗಿತ್ತು. ಪೊಲೀಸ್‌ ಇಲಾಖೆಯ ಪ್ರಕಾರ ಎರಡೂವರೆ ಲಕ್ಷ ಕನ್ನಡಿಗರು ಈ ಕಟೌಟ್‌ ಜಾತ್ರೆಯಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ʼಪೊನ್ನಿಯ ಸೆಲ್ವನ್ʼ ಸುಂದರಿಗೆ 31ರ ಹುಟ್ಟುಹಬ್ಬ..! ಶೋಭಿತಾ ಟಾಪ್‌ ಹಾಟ್‌ ಫೋಟೋಸ್‌ ಇಲ್ಲಿವೆ

ಅಂದೇ ಈ ಕಟೌಟ್‌ ಜಾತ್ರೆಯನ್ನು ಏಷ್ಯಾ ಬುಕ್‌ ಆಫ್‌ ರೆಕಾರ್ಡ್ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ ದಾಖಲಿಸಲು ಮನವಿಯನ್ನು ಸಲ್ಲಿಸಲಾಗಿತ್ತು. ಆ ಸಂಸ್ಥೆಗಳು ನಮ್ಮ ದಾಖಲೆ ಸಂಬಂಧ ಅನೇಕ ಹಂತದ ಪರೀಕ್ಷೆಗಳನ್ನು ನಡೆಸಿದರಲ್ಲದೆ, ಖುದ್ದಾಗಿ ಸ್ಥಳ ಪರಿಶೀಲನೆಯನ್ನು ಸಹ ಮಾಡಿದ್ದರು. ಇದೀಗ ಆ ಎಲ್ಲಾ ಹಂತದ ಪರೀಕ್ಷೆಗಳೂ ಮುಗಿದಿದ್ದು,  ಈ ಕಟೌಟ್ ಜಾತ್ರೆಯು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ ಮತ್ತು ಇಂಟರ್‌ ನ್ಯಾಷನಲ್‌ ಬುಕ್‌ ಆಫ್‌ ರೆಕಾರ್ಡ್‌ ನಲ್ಲಿ ದಾಖಲೆಯಾಗಿ ಎಂಟ್ರಿಯಾಗಿದೆ.  ಆ ಎರಡೂ ದಾಖಲೆಗಳ ಸರ್ಟಿಫಿಕೇಟ್‌ ಮತ್ತು ಪದಕಗಳು ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ಕೈ ತಲುಪಿದೆ.

ಇದನ್ನೂ ಓದಿ: ಆಯಿತು ಈ ರಾಶಿಯವರ ಭಾಗ್ಯೋದಯ ! ಇನ್ನು ಕೈ ತುಂಬಾ ಸದ್ದು ಮಾಡುವುದು ಕಾಂಚಾಣ

ಈ ಬಗ್ಗೆ ಮಾತನಾಡಿದ ಡಾ.ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ, “ತೆರೆ ಮುಂದೆ ತೆರೆ ಹಿಂದೆ ನುಡಿದಂತೆ ನಡೆದ ಮೇರುನಟನ ಹೆಸರಲ್ಲಿ ಇಂತಹದ್ದೊಂದು ದಾಖಲೆಯನ್ನು ಅವರಿಲ್ಲದ ಹೊತ್ತಿನಲ್ಲಿ ಸ್ಥಾಪಿಸಲು ಸಾಧ್ಯವಾಗಿದ್ದಕ್ಕೆ ನಿಜಕ್ಕೂ ಹೆಮ್ಮೆಪಡುತ್ತೇವೆ.  ಈ ದಾಖಲೆಯು ಡಾ.ವಿಷ್ಣುವರ್ಧನ್‌ ಅವರ ಅಗಲಿಕೆಯ 13 ವರ್ಷಗಳ ನಂತರವೂ ಅವರ ನೆನಪನ್ನು ಹಸಿರಾಗಿಡುವ ಕೆಲಸವನ್ನು ಅವರ ಅಭಿಮಾನಿಗಳು ನಿರಂತರವಾಗಿ ಮಾಡುತ್ತಿರುವುದರ ದ್ಯೋತಕವಾಗಿದೆ. ಈ ಕಟೌಟ್‌ ಜಾತ್ರೆಗೆ ಬೆನ್ನೆಲುಬಾಗಿ ನಿಂತ 50 ಸೇನಾನಿಗಳಿಗೆ, ಯೋಜನೆ ಕಾರ್ಯಸಾಧುಗೊಳಿಸಿದ ಆನಂದ್‌ ರಾಚ್‌, ಕಟೌಟ್‌ ವಿನ್ಯಾಸ ಮಾಡಿದ ರಾಜುವಿಷ್ಣು ಮತ್ತು ಈ ಸಂಸ್ಥೆಗಳ ಜೊತೆ ಸಂವಹನ ನಡೆಸಿ, ಸಾಧ್ಯವಾಗಿಸಿದ ಸಾಹಿತಿ ಜನಾರ್ಧನ್‌ ರಾವ್‌ ಅವರಿಗೆ ಧನ್ಯವಾದಗಳನ್ನು ಅರ್ಪಿಸಲು ಇಚ್ಚಿಸುತ್ತೇನೆ” ಎಂದು ಹೇಳಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News