ಬೆಂಗಳೂರು: ಡಾಲಿ ಧನಂಜಯ್ ತಮ್ಮದೇ ಡಾಲಿ ಪಿಕ್ಚರ್ಸ್ ನಡಿ ನಿರ್ಮಿಸುತ್ತಿರುವ ಸಿನಿಮಾ ಟಗರು ಪಲ್ಯ..ಯೋಗರಾಜ್ ಭಟ್ಟರ ಗರಡಿಯಲ್ಲಿ ಮತ್ತು ಹಲವು ಖ್ಯಾತ ನಿರ್ದೇಶಕರ ಜೊತೆ ನಿರ್ದೇಶನದ ವಿಭಾಗದಲ್ಲಿ ದುಡಿರುವ ಉಮೇಶ್ ಕೆ ಕೃಪ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ಇದನ್ನೂ ಓದಿ: Ravichandra Birthday : 62ನೇ ವರ್ಷದ ರವಿಮಾವನನ್ನು ಮೂವತ್ತರ ʼರಣಧೀರʼ ಬೇಕೆನುತ್ತಿದ್ದಾರೆ ಫ್ಯಾನ್ಸ್ !
ಕಳೆದ ನವೆಂಬರ್ ನಲ್ಲಿ ಸೆಟ್ಟೇರಿದ ʼಟಗರು ಪಲ್ಯʼ ಸಿನಿಮಾಗೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಮಂಡ್ಯ, ಮಳವಳ್ಳಿ, ಮುತತ್ತಿ ಹಾಗೂ ಶಿಂಶ ಸುತ್ತಮುತ್ತ ಚಿತ್ರೀಕರಣ ನಡೆಸಲಾಗಿದೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಲೆಂದು ಹಾಗೂ ಕಂಟೆಂಟ್ ಆಧಾರಿತ ಚಿತ್ರ ನಿರ್ಮಿಸಲು ಧನಂಜಯ್ ಪ್ರಾರಂಭಿಸುವ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಮೂರನೇ ಕೊಡುಗೆ ಟಗರು ಪಲ್ಯ.
ಇದನ್ನೂ ಓದಿ: ಬಂಗಾರದಿಂದ ಬಣ್ಣಾನ ತಂದ ..ಸಾರಂಗದಿಂದ ನಯನಾನ ತಂದ ಕೇಜ್ರಿಸ್ಟಾರ್ : ಈಗ ಯಾಕೆ ಈ ಸಾಂಗ್ ಅಂತೀರಾ...
ಇಕ್ಕಟ್, ಬಡವ ರಾಸ್ಕಲ್ ಸಿನಿಮಾಗಳ ಖ್ಯಾತಿಯ ನಾಗಭೂಷಣ್ ನಾಯಕನಾಗಿ ನಟಿಸುತ್ತಿದ್ದು, ಇವರಿಗೆ ಜೋಡಿ ನೆನಪಿರಲಿ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದಾರೆ.
“ಟಗರುಪಲ್ಯ” ಚಿತ್ರೀಕರಣ ಮುಕ್ತಾಯ. ನಮ್ಮ ಮಣ್ಣಿನ ಕಥೆಯೊಂದನ್ನು ನಿರ್ಮಿಸಿದ ಹೆಮ್ಮೆ. ಕನ್ನಡಕ್ಕೊಬ್ಬ ಹೊಸ ಪ್ರತಿಭಾನ್ವಿತ ನಿರ್ದೇಶಕ, ನಾಯಕನಾಗಿ ನಾಗಭೂಷಣ, ನಾಯಕಿಯಾಗಿ ಅಮೃತಾ ಪ್ರೇಮ್ ಮತ್ತು ಹೊಸ ಪ್ರತಿಭಾನ್ವಿತರ ದಂಡು, ಜೊತೆಗೆ ರಂಗಾಯಣ ರಘು ಸರ್ , ತಾರಮ್ಮ, ಬಿರಾದರ್ ಅವರಂತಹ ಮೇರು ಕಲಾವಿದರ ಹೆಗಲು. ಸದ್ಯದಲ್ಲೆ ನಿಮ್ಮ ಮುಂದೆ❤️ pic.twitter.com/H1WHjDJq5S
— Dhananjaya (@Dhananjayaka) May 31, 2023
ಮಂಡ್ಯ ಹಳ್ಳಿಗಳಲ್ಲಿ ನಡೆಯುವ ಆಚರಣೆ ಸುತ್ತಾ ಇಡೀ ಸಿನಿಮಾವನ್ನು ಕಟ್ಟಿಕೊಡಲಾಗಿದೆ. ತಾರಾ, ಶರತ್ ಲೋಹಿತಾಶ್ವ, ರಂಗಾಯಣ ರಘು ಸೇರಿದಂತೆ ದೊಡ್ಡ ತಾರಾಬಳಗವಿರುವ ಟಗರು ಪಲ್ಯ ಸಿನಿಮಾಗೆ ವಾಸುಕಿ ವೈಭವ್ ಟ್ಯೂನ್ ಹಾಕಿದ್ದು, ಎಸ್ ಕೆ ರಾವ್ ಕ್ಯಾಮೆರಾ ಹಿಡಿದಿದ್ದಾರೆ. ಸದ್ಯ ಶೂಟಿಂಗ್ ಮುಗಿಸಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ