ಜೂನ್ 16 ರಂದು "ಐರಾವನ್" ಆಗಮನ

  Irawan : ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಜೆ‌.ಕೆ ನಾಯಕರಾಗಿ ನಟಿಸಿರುವ "ಐರಾವನ್" ಚಿತ್ರ ಇದೇ ಜೂನ್ ಹದಿನಾರರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಕುರಿತು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Written by - Zee Kannada News Desk | Last Updated : Jun 3, 2023, 12:00 PM IST
  • ಕಿರುತೆರೆ ಹಾಗೂ ಹಿರಿತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ನಟ ಜೆ‌.ಕೆ
  • "ಐರಾವನ್" ಚಿತ್ರ ಇದೇ ಜೂನ್ ಹದಿನಾರರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
  • ಕಾರ್ಯಕಾರಿ ನಿರ್ಮಾಪಕ ಸಂತೋಷ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಜೂನ್ 16 ರಂದು "ಐರಾವನ್" ಆಗಮನ  title=

Sandalwood : ನಾನು ಮೂಲತಃ ವೈದ್ಯ. ಕೋವಿಡ್ ಸಮಯದಲ್ಲಿ ನಿರ್ದೇಶಕ ರಾಮ್ಸ್ ರಂಗ ಈ ಚಿತ್ರದ ಕಥೆ ಹೇಳಿದರು. ಕಥೆ ಇಷ್ಟವಾಯಿತು. ಆ ಸಮಯದಲ್ಲಿ ಚಿತ್ರರಂಗದ ಬಹುತೇಕರು ಸಂಕಷ್ಟದಲ್ಲಿದ್ದರು. ಈ ಸಂದರ್ಭದಲ್ಲಿ ನಾನು ಸಿನಿಮಾ ನಿರ್ಮಾಣ ಮಾಡಿದರೆ ಅನೇಕ ಜನರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶ ನನ್ನದಾಗಿತ್ತು. ಈಗ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ. ಇದೇ ಜೂನ್ 16 ರಂದು ಬಿಡುಗಡೆಯಾಗುತ್ತಿದೆ. ನೋಡಿ. ಪ್ರೋತ್ಸಾಹ ನೀಡಿ ಎಂದರು ನಿರ್ಮಾಪಕ ಡಾ||ನಿರಂತರ ಗಣೇಶ್.

"ಐರಾವನ್" ಎಂದರೆ ಮಹಾಭಾರತದಲ್ಲಿ ಬರುವ ಪಾತ್ರವೊಂದರ ಹೆಸರು. ಇದು ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ‌. ಬೆಂಗಳೂರು, ಮಂಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಸಮುದ್ರದಲ್ಲಿ ಹೆಚ್ಚಿನ ಚಿತ್ರೀಕರಣ ಮಾಡಿರುವುದು ಚಿತ್ರದ ವಿಶೇಷ ಎಂದು ನಿರ್ದೇಶಕ ರಾಮ್ಸ್ ರಂಗ ತಿಳಿಸಿದರು.

ಇದನ್ನೂ ಓದಿ-Samantha And Priyanka Chopra: ಪ್ರಿಯಾಂಕಾ ಚೋಪ್ರಾಗೆ ತಾಯಿಯಾಗಿ ಸಮಂತಾ ನಟನೆ!

"ಐರಾವನ್" ಚಿತ್ರದ ಟೀಸರ್ ಗೆ ತಮ್ಮಿಂದ ಸಿಕ್ಕಿರುವ ಪ್ರೋತ್ಸಾಹಕ್ಕೆ ನಾನು ಚಿರ ಋಣಿ. ಕೆಲವರಿಗೆ ಈ ಚಿತ್ರದ ಬಗ್ಗೆ ಗೊಂದಲವಿತ್ತು. ಇದು ಹಿಂದಿ ಚಿತ್ರದ ಡಬ್ ಇರಬಹುದು ಎಂದು.. ಆದರೆ ಇದು ಪಕ್ಕಾ ಕನ್ನಡ ಚಿತ್ರ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿದೆ. ಎರಡು ಶೇಡ್ ಗಳಲ್ಲಿ ನನ್ನ ಪಾತ್ರವಿರುತ್ತದೆ. ನಿರ್ದೇಶಕರು ಒಳ್ಳೆಯ ಕಥೆ ಮಾಡಿದ್ದಾರೆ. ಹಾಡುಗಳು ಚೆನ್ನಾಗಿದೆ. ನಿರ್ಮಾಪಕ ಡಾ||ನಿರಂತರ ಗಣೇಶ್ ಯಾವುದೇ ಕೊರತೆ ಬಾರದಂತೆ ಚಿತ್ರ ನಿರ್ಮಾಣ ಮಾಡಿದ್ದಾರೆ. ಜೂನ್ 16 ಚಿತ್ರ ತೆರೆಗೆ  ಬರುತ್ತಿದೆ ಎಂದು ನಾಯಕ ಜೆ.ಕೆ ತಿಳಿಸಿದರು.

ತಮ್ಮ ಪಾತ್ರದ ಬಗ್ಗೆ ನಾಯಕಿ ಅದ್ವಿತಿ ಶೆಟ್ಟಿ, ಹಾಗೂ ನವನಟ ವಿವೇಕ್, ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಪ್ರದೀಪ್ ವರ್ಮ, ಛಾಯಾಗ್ರಹಣದ ಕುರಿತು ದೇವೇಂದ್ರ ಮಾಹಿತಿ ನೀಡಿದರು. ಕಾರ್ಯಕಾರಿ ನಿರ್ಮಾಪಕ ಸಂತೋಷ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ-Rudra Garuda Purana: ರಿಷಿ ಅಭಿನಯದ ʼರುದ್ರ ಗರುಡ ಪುರಾಣʼ: ಶೀರ್ಷಿಕೆ ಅನಾವರಣ ನಟ ನೀನಾಸಂ ಸತೀಶ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News