ಹಾಡಿನ ಮೂಲಕ ಸದ್ದು ಮಾಡುತ್ತಿದ್ದಾರೆ "ಬ್ಯಾಕ್ ಬೆಂಚರ್ಸ್"!

Back Benchers: ಯವಜನತೆಗೆ ಮುದ ನೀಡುವ ಈ ಹಾಡನ್ನು ನಕುಲ್ ಅಭಯಂಕರ್ ಹಾಡಿದ್ದಾರೆ. ಸಂಗೀತವನ್ನೂ ನಕುಲ್ ಅಭಯಂಕರ್ ಅವರೆ ನೀಡಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹಾಡು ಬಿಡುಗಡೆಯ ನಂತರ "ಬ್ಯಾಕ್ ಬೆಂಚರ್ಸ್" ಮಾಧ್ಯಮಕ್ಕೆ ಮಾಹಿತಿ ನೀಡಿದರು. 

Written by - Yashaswini V | Last Updated : May 31, 2024, 09:48 AM IST
  • ಇದೊಂದು ಮನೋರಂಜನೆಯೇ ಪ್ರಮುಖವಾಗಿರುವ ಕಾಲೇಜು ಸ್ಟೋರಿ
  • ಮುಂದಿನ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.
  • ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರು ಹೊಸಬರು
ಹಾಡಿನ ಮೂಲಕ ಸದ್ದು ಮಾಡುತ್ತಿದ್ದಾರೆ "ಬ್ಯಾಕ್ ಬೆಂಚರ್ಸ್"! title=

Back Benchers Song: ಕಾಲೇಜು ದಿನಮಾನದ ಕಥೆಗಳು ಕನ್ನಡದಲ್ಲಿ ಸಾಕಷ್ಟು ಬಂದಿದೆ. ಆದರೆ ಮನೋರಂಜನೆಯೇ ಪ್ರಮುಖವಾಗಿಟ್ಟಿಕೊಂಡು ಕಾಲೇಜು ದಿನಗಳ ಕಥೆಯೊಂದು ಕನ್ನಡದಲ್ಲಿ ಬರುತ್ತಿದೆ. ಅದೇ " ಬ್ಯಾಕ್ ಬೆಂಚರ್ಸ್ ". ಈಗಾಗಲೇ ಟೀಸರ್ ಮೂಲಕ ಪ್ರೇಕ್ಷಕರಿಗೆ ಕಚುಗುಳಿಯಿಟ್ಟಿರುವ "ಬ್ಯಾಕ್ ಬೆಂಚರ್ಸ್" (Back Benchers) ಚಿತ್ರದ "ಯಲ್ಲೋ ಯಲ್ಲೋ"  ಹಾಡು ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. 

ಯವಜನತೆಗೆ ಮುದ ನೀಡುವ ಈ ಹಾಡನ್ನು ನಕುಲ್ ಅಭಯಂಕರ್ ಹಾಡಿದ್ದಾರೆ. ಸಂಗೀತವನ್ನೂ ನಕುಲ್ ಅಭಯಂಕರ್ ಅವರೆ ನೀಡಿದ್ದಾರೆ. ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಹಾಡು ಬಿಡುಗಡೆಯ ನಂತರ "ಬ್ಯಾಕ್ ಬೆಂಚರ್ಸ್" ಮಾಧ್ಯಮಕ್ಕೆ ಮಾಹಿತಿ ನೀಡಿದರು. 

ಇದನ್ನೂ ಓದಿ- Tarak Mehta Ka Ulta Chashma : ಜೇಟಾ ಲಾಲ್ ಖ್ಯಾತಿಯ ದಿಲೀಪ್ ಜೋಶಿ ಶೋನಿಂದ ಪಡೆಯುವ ಸಂಭಾವನೆ ಎಷ್ಟು ಗೊತ್ತಾ!

ಇದೊಂದು ಮನೋರಂಜನೆಯೇ ಪ್ರಮುಖವಾಗಿರುವ ಕಾಲೇಜು ಸ್ಟೋರಿ (College Story) ಎಂದು ಮಾತನಾಡಿದ ನಿರ್ದೇಶಕ, ನಿರ್ಮಾಪಕ ಬಿ.ಆರ್ ರಾಜಶೇಖರ್, ಚಿತ್ರ ತೆರೆಗೆ ಬರಲು ಸಿದ್ದಾವಾಗಿದೆ‌.‌ ಪ್ರಚಾರ ಕಾರ್ಯ ಆರಂಭಿಸಿದ್ದೇವೆ. ಮುಂದಿನ ತಿಂಗಳಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ. ಚಿತ್ರದಲ್ಲಿ ಅಭಿನಯಿಸಿರುವ ಎಲ್ಲಾ ಕಲಾವಿದರು ಹೊಸಬರು. ಹೊಸತಂಡಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು.

ನಿರ್ದೇಶಕ ರಾಜಶೇಖರ್ ಅವರು ನಮಗೆಲ್ಲಾ ನೀಡಿದ ಪ್ರೋತ್ಸಹ ಅಷ್ಟಿಷ್ಟಲ್ಲ.  ನಮ್ಮಗೆಲ್ಲಾ ಇದು ಮೊದಲ ಚಿತ್ರ. ಆದರೆ ನಮಗೆ ನಟನೆ ಹೊಸತಲ್ಲ‌‌. ನಾವೆಲ್ಲ ನಟನೆ ಕಲಿತು ಬಂದಿರುವವರು. ಈಗ ಚಿತ್ರಮಂದಿರಕ್ಕೆ ಹೆಚ್ಚಾಗಿ ಜನರು ಬರುತ್ತಿಲ್ಲ. ಆ ಮಾತನ್ನು ಸುಳ್ಳು ಮಾಡುವ ಪ್ರಯತ್ನವನ್ನು ನಾವು ಮಾಡುತ್ತೇವೆ‌. ವಿನೂತನ ಪ್ರಚಾರ ಮಾಡುವ ಮೂಲಕ ಪ್ರೇಕ್ಷಕರನ್ನು ಚಿತ್ರಮಂದಿರಕ್ಕೆ ಕರೆತರುವ ಪ್ರಯತ್ನ ಮಾಡುತ್ತೇವೆ‌. ಚಿತ್ರಮಂದಿರಕ್ಕೆ  ಬಂದ ಮೇಲು ನಮ್ಮ ಚಿತ್ರ ನೀವು ಕೊಟ್ಟ ದುಡ್ಡಿಗೆ ಮೋಸ ಆಗುವುದಿಲ್ಲ ಎಂಬ ಭರವಸೆ ನೀಡುತ್ತೇವೆ ಎಂದು "ಬ್ಯಾಕ್ ಬೆಂಚರ್ಸ್ " ಚಿತ್ರದಲ್ಲಿ ನಟಿಸಿರುವ  ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ,  ಮಾನ್ಯ ಗೌಡ, ಕುಂಕುಮ್ ಹೆಚ್,  ಮನೋಜ್ ಶೆಟ್ಟಿ ಮುಂತಾದವರು ತಿಳಿಸಿದರು. ಛಾಯಾಗ್ರಾಹಕ ಮನೋಹರ್ ಜೋಶಿ "ಬ್ಯಾಕ್ ಬೆಂಚರ್ಸ್ " ನ ಗುಣಗಾನ ಮಾಡಿದರು‌.

ಇದನ್ನೂ ಓದಿ- ಶ್ರುತಿ ಹಾಸನ್ ನಿಂದ ಕಾಜಲ್ ವರೆಗೂ, ಈ ನಾಯಕಿಯರು ಓದಿದೆಷ್ಟು ಗೊತ್ತಾ?

ರಂಜನ್, ಜತಿನ್ ಆರ್ಯನ್, ಆಕಾಶ್ ಎಂ.ಪಿ, ಶಶಾಂಕ್ ಸಿಂಹ, ಸುಚೇಂದ್ರ ಪ್ರಸಾದ್, ಅರವಿಂದ್ ಕುಪ್ಳೀಕರ್, ಮಾನ್ಯ ಗೌಡ, ಕುಂಕುಮ್ ಹೆಚ್, ಅನುಷಾ ಸುರೇಶ್, ವಿಯೋಮಿ ವನಿತಾ, ಮನೋಜ್ ಶೆಟ್ಟಿ, ನಮಿತಾ ಗೌಡ, ವಿಕಾಸ್, ರನ್ನ, ವಿಜಯ್ ಪ್ರಸಾದ್, ಚತುರ್ಥಿ ರಾಜ್, ಗೌರವ್ ಮುಂತಾದವರ ತಾರಾಬಳಗವಿರುವ ಈ ಚಿತ್ರಕ್ಕೆ ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಮನೋಹರ್ ಜೋಶಿ ಛಾಯಾಗ್ರಹಣ, ರಂಜನ್ ಮತ್ತು ಅಮರ್ ಗೌಡ ಸಂಕಲನವಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News