Balaramana Dinagalu: ಪದ್ಮಾವತಿ ಫಿಲಂಸ್ ಲಾಂಛನದಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸುತ್ತಿರುವ ಹಾಗೂ "ಆ ದಿನಗಳು" ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಚಿತ್ರ "ಬಲರಾಮನ ದಿನಗಳು". ಇದು ವಿನೋದ್ ಪ್ರಭಾಕರ್ ಅಭಿನಯದ 25 ನೇ ಚಿತ್ರ ಕೂಡ.
ಬಹು ನಿರೀಕ್ಷಿತ "ಬಲರಾಮನ ದಿನಗಳು" ಚಿತ್ರಕ್ಕೆ ಪ್ರಿಯಾ ಆನಂದ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. "ರಾಜಕುಮಾರ", "ಜೇಮ್ಸ್", "ಆರೆಂಜ್", "ಕರಟಕ ದಮನಕ" ದಂತಹ ಯಶಸ್ವಿ ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿ ಪ್ರಿಯಾ ಆನಂದ್ ಜನಪ್ರಿಯರಾಗಿದ್ದಾರೆ. "ಬಲರಾಮನ ದಿನಗಳು" 1980ರ ಕಾಲಘಟ್ಟದಲ್ಲಿ ನಡೆಯುವ ಕಥೆಯಾಗಿದೆ.ಇತ್ತೀಚೆಗಷ್ಟೇ ವಿನೋದ್ ಪ್ರಭಾಕರ್ ಅವರ ಹುಟ್ಟುಹಬ್ಬಕ್ಕೆ ಫಸ್ಟ್ ಲುಕ್ ಬಿಡುಗಡೆಯಾಗಿತ್ತು. ಫಸ್ಟ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
"ಅಟ್ಟಕತ್ತಿ", " ಕಾಲ", "ಕಬಾಲಿ", "ಭೈರವ", "ದಸರಾ", "ಕಲ್ಕಿ" ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿರುವ ಭಾರತದ ಖ್ಯಾತ ಜನಪ್ರಿಯ ಸಂಗೀತ ನಿರ್ದೇಶಕ ಸಂತೋಷ್ ನಾರಾಯಣನ್ ಈ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಈಗಾಗಲೇ ಚಿತ್ರಕ್ಕೆ ಎರಡು ಹಂತಗಳ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ 15 ರಿಂದ ಮೂರನೇ ಹಂತದ ಚಿತ್ರೀಕರಣ ಆರಂಭವಾಗಲಿದೆ.
ಹೀಗೆ ಸಾಕಷ್ಟು ವಿಶೇಷಗಳನ್ನೊಳಗೊಂಡಿರುವ ಹಾಗೂ ಆರಂಭದಿಂದಲ್ಲೇ ಸಾಕಷ್ಟು ಕುತೂಹಲ ಮೂಡಿಸಿರುವ "ಬಲರಾಮನ ದಿನಗಳು" ಚಿತ್ರದ ಕುರಿತು ಮತ್ತಷ್ಟು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ಹಂಚಿಕೊಳ್ಳುವುದಾಗಿ ನಿರ್ಮಾಪಕ ಶ್ರೇಯಸ್ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್