ಪ್ರಭಾಸ್ ಅಭಿಮಾನಿಗಳಿಗೆ ಬಿಗ್ ಟ್ರೀಟ್..! ಇಲ್ಲಿದೆ "ಕಲ್ಕಿ" ಇಂಟ್ರೆಸ್ಟಿಂಗ್ ಅಪ್ಡೇಟ್

Kalki 2898 Film Updates: ಬಾಹುಬಲಿ ಚಿತ್ರದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆದ ಪ್ರಭಾಸ್, ಸತತವಾಗಿ ದೊಡ್ಡ ಪ್ರಾಜೆಕ್ಟ್‌ಗಳಿಗೆ ಕೈ ಹಾಕುತ್ತಿದ್ದಾರೆ. ಇತ್ತೀಚೆಗಷ್ಟೇ ಪ್ರಭಾಸ್... ನಾಗ್ ಅಶ್ವಿನ್ ಜೊತೆ ಸಿನಿಮಾ ಮಾಡುತ್ತಿರುವುದು ಗೊತ್ತೇ ಇದೆ. ಸದ್ಯ ಆ ಚಿತ್ರದ ಬಿಗ್‌ ಅಪ್ಡೇಟ್ ಹೊರಬಿದ್ದಿದೆ.

Last Updated : Oct 24, 2023, 02:14 PM IST
  • ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸದ್ಯ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ
  • ಅದರ ಭಾಗವಾಗಿ ಪ್ರಭಾಸ್ ಮತ್ತೊಂದು ದೊಡ್ಡ ಸಿನಿಮಾ ಕಲ್ಕಿ 2898ನಲ್ಲಿ ನಟಿಸುತ್ತಿದ್ದಾರೆ.
  • ಸದ್ಯ ಈ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಚಿತ್ರದ ಶೇ.80ಕ್ಕೂ ಹೆಚ್ಚು ಚಿತ್ರೀಕರಣ ಈಗಾಗಲೇ ಮುಗಿದಿದೆ.
ಪ್ರಭಾಸ್ ಅಭಿಮಾನಿಗಳಿಗೆ ಬಿಗ್ ಟ್ರೀಟ್..! ಇಲ್ಲಿದೆ "ಕಲ್ಕಿ" ಇಂಟ್ರೆಸ್ಟಿಂಗ್ ಅಪ್ಡೇಟ್ title=

Prabhas Movie: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಸದ್ಯ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಅದರ ಭಾಗವಾಗಿ ಪ್ರಭಾಸ್ ಮತ್ತೊಂದು ದೊಡ್ಡ ಸಿನಿಮಾ ಕಲ್ಕಿ 2898ನಲ್ಲಿ ನಟಿಸುತ್ತಿದ್ದಾರೆ. ಸದ್ಯ ಈ ಸಿನಿಮಾದ ಶೂಟಿಂಗ್ ನಡೆಯುತ್ತಿದ್ದು, ಚಿತ್ರದ ಶೇ.80ಕ್ಕೂ ಹೆಚ್ಚು ಚಿತ್ರೀಕರಣ ಈಗಾಗಲೇ ಮುಗಿದಿದೆ. 

ನಾಗ್ ಅಶ್ವಿನ್ ನಿರ್ದೇಶನದಲ್ಲಿ ಪ್ಯಾನ್ ವರ್ಲ್ಡ್ ಚಿತ್ರವಾಗಿ ಬರುತ್ತಿರುವ ಈ ಚಿತ್ರದ ಬಗ್ಗೆ ಪ್ರೇಕ್ಷಕರು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದಲ್ಲಿ ಪ್ರಭಾಸ್ ಗೆ ನಾಯಕಿಯಾಗಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಸಹ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. 

ಇದನ್ನೂ ಓದಿ-ಕೆಜಿಎಫ್ ಚಿತ್ರವನ್ನು ಹಿಂದಿಕ್ಕಲಿದೆಯಾ ಸಲಾರ್? ಮತ್ತಷ್ಟು ಕುತೂಹಲ ಹೆಚ್ಚಿಸಿದ ಪ್ರಭಾಸ್‌ ನ್ಯೂ ಲುಕ್!‌ 

ಪ್ರಭಾಸ್ ಹುಟ್ಟುಹಬ್ಬದ ಉಡುಗೊರೆಯಾಗಿ ನಿನ್ನೆ ಈ ಚಿತ್ರದ ಹೊಸ ಅಪ್ಡೇಟ್ಗಾಗಿ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದರು. ಆದರೆ ಅಭಿಮಾನಿಗಳಿಗೆ ಅಂತಹ ಯಾವುದೇ ಪ್ರಮುಖ ಅಪ್‌ಡೇಟ್‌ನ್ನು ನೀಡಲಾಗಿಲ್ಲ. ಚಿತ್ರದ  ಒಂದು ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಗಿದೆ. ಪೋಸ್ಟರ್‌ನಲ್ಲಿ ಪ್ರಭಾಸ್‌ ಡಾರ್ಕ್‌ ಮೋಡ್‌ನಲ್ಲಿ ಕಾಣಿಸಿಕೊಂಡಿದ್ದು, ಈ ಕುತೂಹಲಕಾರಿ ಪೋಸ್ಟರ್ ಇದೀಗ ವೈರಲ್ ಆಗಿದೆ.

ಅದ್ಧೂರಿ ಬಜೆಟ್‌ನಲ್ಲಿ ತಯಾರಾಗಿರುವ ಈ ಸಿನಿಮಾದಲ್ಲಿ ಕಮಲ್ ಹಾಸನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾದಲ್ಲಿ ಅವರು ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆಯಂತೆ. ಇದಲ್ಲದೇ ಈ ಸಿನಿಮಾದಲ್ಲಿ ಟಾಪ್ ನಿರ್ದೇಶಕ ರಾಜಮೌಳಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಸಂಬಂಧಿಸಿದ ಸುದ್ದಿಯೊಂದು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಲ್ಕಿ 2898 ರ ನಿರ್ಮಾಪಕರು ಈ ಚಿತ್ರವನ್ನು ಮುಂದಿನ ವರ್ಷ ಮೇ 9 ರಂದು ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಈ ಚಿತ್ರದಲ್ಲಿ ಪ್ರಭಾಸ್ ಕರ್ಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. 

ಇದನ್ನೂ ಓದಿ-ಜಿಯೋ ಸಿನಿಮಾದಲ್ಲಿ ಎಕ್ಸ್‌ಕ್ಲೂಸಿವ್ ಸಂದರ್ಶನ: ಸೀರಿಯಲ್‌ನಲ್ಲಿ ನಟಿಸೋಕೆ ರೆಡಿಯಂತೆ ಗೌರೀಶ್ ಅಕ್ಕಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News