Bigg Boss Kannada 10: ಸ್ನೇಕ್‌ ಶ್ಯಾಮ್‌ ತೆರೆದಿಟ್ಟ ವಿಸ್ಮಯಕಾರಿ ಉರಗ ಪ್ರಪಂಚ!

Snake Shyam: ಹಲವು ಸಾವಿರ ಹಾವುಗಳನ್ನು ರಕ್ಷಿಸಿ ಸುರಕ್ಷಿತ ಜಾಗಕ್ಕೆ ಬಿಟ್ಟಿರುವ ಅನುಭವ ಇರುವ ಸ್ನೇಕ್‌ ಶ್ಯಾಮ್‌ ಈ ಸಲ ಬಿಗ್‌ಬಾಸ್‌ ಮನೆಯಲ್ಲಿ ‘ಅಸಮರ್ಥ’ರ ಗುಂಪಿನಲ್ಲಿರುವ ಸ್ಪರ್ಧಿ. ಮನೆಯೊಳಗೇನೋ ಅವರು ಅಸಮರ್ಥರ ಗುಂಪಿನಲ್ಲಿ ಕೂತಿರಬಹುದು. ಆದರೆ ಪ್ರಾಣಿಪ್ರಪಂಚದ, ಅದರಲ್ಲಿಯೂ ಹಾವುಗಳ ಕುರಿತಾದ ಜ್ಞಾನದಲ್ಲಿ ಅವರೆಂಥ ಸಮರ್ಥರು ಎಂಬುದನ್ನು ತಿಳಿದುಕೊಳ್ಳಲು ಈ ಸ್ಟೋರಿ ಓದಿ..  

Written by - Savita M B | Last Updated : Oct 14, 2023, 12:34 PM IST
  • ಹಲವು ಸಾವಿರ ಹಾವುಗಳನ್ನು ರಕ್ಷಿಸಿ ಸುರಕ್ಷಿತ ಜಾಗಕ್ಕೆ ಬಿಟ್ಟಿರುವ ಅನುಭವ ಇರುವ ಸ್ನೇಕ್‌ ಶ್ಯಾಮ್‌
  • ಸ್ನೇಕ್ ಶ್ಯಾಮ್‌ ಅವರು ಹಾವುಗಳ ಕುರಿತಾದ ಹಲವು ರೋಚಕ ಸಂಗತಿಗಳನ್ನು ನಿರರ್ಗಳವಾಗಿ ತೆರೆದಿಟ್ಟಿದ್ದಾರೆ
  • ಅವರು ಹೇಳಿದ ಸಂಗತಿಗಳನ್ನು ಕೇಳಿ ಉಳಿದ ಸ್ಪರ್ಧಿಗಳು ಬೆಕ್ಕಸ ಬೆರಗಾಗಿದ್ದಾರೆ
Bigg Boss Kannada 10: ಸ್ನೇಕ್‌ ಶ್ಯಾಮ್‌ ತೆರೆದಿಟ್ಟ ವಿಸ್ಮಯಕಾರಿ ಉರಗ ಪ್ರಪಂಚ! title=

BBK 10: ಸ್ಪರ್ಧಿಗಳೆಲ್ಲ ಈಜುಕೊಳದ ಬಳಿ ಆರಮವಾಗಿ ಕೂತು ಹರಟೆ ಹೊಡೆಯುತ್ತಿದ್ದಾಗ ಸ್ನೇಕ್ ಶ್ಯಾಮ್‌ ಅವರು ಹಾವುಗಳ ಕುರಿತಾದ ಹಲವು ರೋಚಕ ಸಂಗತಿಗಳನ್ನು ನಿರರ್ಗಳವಾಗಿ ತೆರೆದಿಟ್ಟಿದ್ದಾರೆ. ಅವರು ಹೇಳಿದ ಸಂಗತಿಗಳನ್ನು ಕೇಳಿ ಉಳಿದ ಸ್ಪರ್ಧಿಗಳು ಬೆಕ್ಕಸ ಬೆರಗಾಗಿದ್ದಾರೆ. 

ಹಾವುಗಳಲ್ಲಿ 45-65 ದಿನಗಳ ಒಳಗೆ ಮೊಟ್ಟೆಬೆಳವಣಿಗೆಯಾಗುತ್ತದೆ. ಪ್ರಾಣಿಗಳಲ್ಲಿ ಫೈಟಿಂಗ್ ಆಗೋದು ಈಟಿಂಗ್ ಮತ್ತು ಮೀಟಿಂಗ್ ಎರಡಕ್ಕೇನೇ. ನಮ್ ಥರ ಅಲ್ಲ… ನಾವು ಎಲ್ಲದಕ್ಕೂ ಹೊಡೆದಾಡುತ್ತೇವೆ. ಮೀಟಿಂಗ್ ಮುಗಿದ ಮೇಲೆ ಗಂಡು ಹಾವು ಅದರ ಪಾಡಿಗೆ ಅದು ಹೋಗುತ್ತದೆ. ಹೆಣ್ಣು ಹಾವು ಮೊಟ್ಟೆ ಡೆವಲೆಪ್ ಆದಮೇಲೆ ಸರಿಯಾಗಿರುವ ಜಾಗ ಹುಡುಕಿಕೊಂಡು ಹೋಗಿ ಮೊಟ್ಟೆಗಳನ್ನು ಇಡುತ್ತದೆ. ಅದೂ ಟೆಂಪರೇಚರ್ ಸರಿಯಾಗಿರುವ ಜಾಗ ಸಿಗುವತನಕ ಕಾಯುತ್ತದೆ. ನಮ್ ಥರ ಒಂಬತ್ತು ತಿಂಗ್ಳಾಯ್ತು, ಹೊಟ್ಟೆ ನೋವು ಶುರುವಾಯ್ತು, ಡಾಕ್ಟರ್ ಹತ್ರ ಹೋಗ್ಬೇಕು ಅಂತೆಲ್ಲ ಮಾಡಲ್ಲ…

ಇದನ್ನೂ ಓದಿ-BBK 10: ಬಿಗ್ ಬಾಸ್ ಮನೆಯಲ್ಲಿ ನಮ್ರತಾ ಕಣ್ಣೀರು..! ಕಾರಣ ಯಾರು...?

ಸರಿಯಾದ ಜಾಗ ಸಿಗುವ ತನಕ ಮೊಟ್ಟೆಗಳನ್ನು ಹೊಟ್ಟೆಯಲ್ಲಿ ಇಟ್ಟುಕೊಂಡಿರತ್ತೆ. ಮೊಟ್ಟೆ ಇಟ್ಟಮೇಲೆ ಕೆಲವು ಜಾತಿ ಹಾವುಗಳು ಸುರುಳಿ ಸುತ್ಕೊಂಡು ಮೊಟ್ಟೆ ಮೇಲೆ ಕಾವು ಕೊಡ್ತವೆ. ಇನ್ನು ಕೆಲವು ಜಾತಿ ಹಾವುಗಳು ಮೊಟ್ಟೆಗಳನ್ನಿಟ್ಟು ಕಾಯುತ್ತವೆ. ಮೊಟ್ಟೆ ಇಟ್ಟ 45-65ದಿನಗಳಲ್ಲಿ ಮರಿಗಳು ಈಚೆ ಬರುತ್ತವೆ. 

ಎಲ್ಲ ಜಾತಿಯ ಹಾವುಗಳು ಮೊಟ್ಟೆಗಳನ್ನು ಇಟ್ಟರೆ ಮೂರು ಜಾತಿಯ ಹಾವುಗಳು ಮರಿಗಳನ್ನು ಹಾಕತ್ತೆ. ಅವು ಯಾವವೆಂದರೆ, ಹಸಿರು ಹಾವು, ಮಣ್ಣುಮುಕ್ಕ ಹಾವು ಮತ್ತೆ ಮಂಡಲ ಹಾವು -ಈ ಮೂರು ಜಾತಿಯ ಹಾವುಗಳು ಮರಿ ಹಾಕತ್ತೆ. ಆದರೆ ಇವು ಸಸ್ತನಿ ಅಲ್ಲ. ಸಸ್ತನಿ ಅಂದ್ರೆ ಮರಿಗಳನ್ನು ಹಾಕಿ ಮೊಲೆಯೂಡಿಸಬೇಕು. ಈ ಹಾವುಗಳು ಹಾಗೆ ಮಾಡಲ್ಲ. ಒಂದು ವಿಷಯ ಹೇಳ್ಬೇಕು, ಹಾವಿನ ಪ್ರತಿಯೊಂದು ಮರಿಗಳೂ ಸಂಪೂರ್ಣ ಸ್ವಾವಲಂಬಿಗಳಾಗಿರ್ತವೆ. ನಮ್ಮ ಥರ ಹುಟ್ಟಿದ ಮೇಲೆ ಬೇರೆಯವರ ಮೇಲೆ ಡಿಪೆಂಡ್ ಆಗಿರುವುದಿಲ್ಲ. ಅವರ ಪಾಡಿಗೆ ಅವು ತಮ್ಮ ಆಹಾರವನ್ನು ಹುಡುಕಿಕೊಂಡು ಹೋಗುತ್ತಿರುತ್ತವೆ. ತಾಯಿ-ತಂದೆಯ ಮೇಲೆ ಅವಲಂಬನೆ ಮಾಡುವುದೇ ಇಲ್ಲ. 

ಎಲ್ಲ ಜಾತಿಯ ಹಾವುಗಳಲ್ಲಿಯೂ ಗಂಡು ಹಾವು ಇದೆ. ಆದರೆ ಒಂದು ಜಾತಿಯ ಹಾವುಗಳಲ್ಲಿ ಗಂಡುಹಾವು ಇಲ್ಲ. ಹೆಣ್ಣು ಹಾವೇ ಸೆಲ್ಫ್‌ ರಿಪ್ರೊಡಕ್ಷನ್ ಮಾಡಿಕೊಳ್ಳುತ್ತದೆ. ಆ ಜಾತಿಯ ಹಾವುಗಳನ್ನು ನೀವೆಲ್ಲರೂ ನೋಡಿರ್ತೀರಾ… ಎಲ್ಲರ ಮನೆಯ ಅಡುಗೆ ಮನೆ, ಬಚ್ಚಲ ಮನೆ, ಟಾಯ್ಲೆಟ್‌ನಲ್ಲೆಲ್ಲ ಓಡಾಡ್ತಿರತ್ತೆ, ಪಿಣಿಪಿಣಿಪಿಣಿ ಅಂತ… ಎರೆಹುಳದ ಥರ ಇರತ್ತೆ. ಅದು ಭಾರತದಲ್ಲಿನ ಅತಿಸಣ್ಣ ಹಾವು. ಅದು ರಿಪ್ರೊಡಕ್ಷನ್‌ ಅನ್ನು ಅದೇ ಮಾಡಿಕೊಳ್ಳುತ್ತದೆ. 

ಎಲ್ಲ ಜಾತಿಯ ಹಾವುಗಳೂ ಬಿಲಗಳಲ್ಲಿ, ಪೊಟರೆಗಳಲ್ಲಿ ಮೊಟ್ಟೆ ಇಟ್ಟರೆ, ಒಂದೇ ಒಂದು ಜಾತಿಯ ಹಾವು ಗೂಡನ್ನು ಕಟ್ಟಿ ಮೊಟ್ಟೆ ಇಡುತ್ತದೆ. ಎಲೆಗಳಿಂದ ಗೂಡು ಕಟ್ಟಿ ಮೊಟ್ಟೆ ಇಡುತ್ತದೆ. ಅದು ಕಿಂಗ್ ಕೋಬ್ರಾ!!’ -ಹೀಗೆ ಸ್ನೇಕ್‌ ಶ್ಯಾಮ್‌ ಅವರು ಉರಗ ಪ್ರಪಂಚದ ವಿಸ್ಮಯ ಸಂಗತಿಗಳನ್ನು ಒಂದೊಂದಾಗಿ ಹೇಳುತ್ತಿದ್ದರೆ ಸ್ಪರ್ಧಿಗಳು ಮೈಮರೆತು ಕೇಳುತ್ತಿದ್ದರು. 

ಇದನ್ನೂ ಓದಿ-ಬಿಗ್’ಬಾಸ್ ಮನೆಗೆ ಹೋಗಿಬಂದ ಅನುಭವದ ಬಗ್ಗೆ ‘ಒಳ್ಳೆ ಹುಡುಗ ಪ್ರಥಮ್’ ಹೇಳಿದ್ದು ಹೀಗೆ…

https://jiocinema.onelink.me/fRhd/srvtazvk

ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ನೋಡಿ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News