ಬಿಗ್‌ ಬಾಸ್‌ ಮನೆಯಲ್ಲಿ ರಾಗಿ ಮುದ್ದೆ ರಾಮಾಯಣ.. ಪೇಚಿಗೆ ಸಿಲುಕಿದ ಪ್ರತಾಪ್!

Bigg Boss Kannada Season 10: ಈ ಇಡೀ ವಾರ ಬಿಗ್‌ಬಾಸ್ ಮನೆಯ ಸದಸ್ಯರು ಶಾಲೆಯಲ್ಲಿ ಮಕ್ಕಳಾಗಿ ನಲಿದಿದ್ದರು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಹೊರತುಪಡಿಸಿದರೆ, ಯಾವುದೇ ಜಗಳಗಳಿಲ್ಲದೆ, ಅನಾಹುತಗಳಿಲ್ಲದೆ ಸುವ್ಯವಸ್ಥಿತವಾಗಿಯೇ ಕಳೆಯಿತು. 

Written by - Chetana Devarmani | Last Updated : Dec 15, 2023, 12:49 PM IST
  • ಬಿಗ್‌ ಬಾಸ್‌ ಕನ್ನಡ ಸೀಸನ್‌ 10
  • ರಾಗಿ ಮುದ್ದೆ ಮಾಡಿದ ಪ್ರತಾಪ್‌
  • ಮುದ್ದೆ ಮಾಡಿದ್ದೇ ಅಪರಾಧವಾಯ್ತೆ?
ಬಿಗ್‌ ಬಾಸ್‌ ಮನೆಯಲ್ಲಿ ರಾಗಿ ಮುದ್ದೆ ರಾಮಾಯಣ.. ಪೇಚಿಗೆ ಸಿಲುಕಿದ ಪ್ರತಾಪ್! title=

Bigg Boss Kannada Season 10: ಈ ಇಡೀ ವಾರ ಬಿಗ್‌ಬಾಸ್ ಮನೆಯ ಸದಸ್ಯರು ಶಾಲೆಯಲ್ಲಿ ಮಕ್ಕಳಾಗಿ ನಲಿದಿದ್ದರು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಹೊರತುಪಡಿಸಿದರೆ, ಯಾವುದೇ ಜಗಳಗಳಿಲ್ಲದೆ, ಅನಾಹುತಗಳಿಲ್ಲದೆ ಸುವ್ಯವಸ್ಥಿತವಾಗಿಯೇ ಕಳೆಯಿತು. ಇನ್ನೇನು ಇದೇ ರೀತಿ ಈ ವಾರ ಸುಖಾಂತ್ಯವನ್ನು ಕಾಣಲಿದೆ ಎನ್ನುವ ಹೊತ್ತಿಗೇ ಬಿಗ್‌ಬಾಸ್‌ ಮನೆಯಲ್ಲಿ ಕೋಲಾಹಲವೆದ್ದಿದೆ. ಆಲ್ರೆಡಿ ಅವ್ರೆಲ್ಲ ರಾಕ್ಷಸರಾಗ್ತಿದಾರೆ ಎಂದು ತುಕಾಲಿ ಸಂತೋಷ್‌ ಕಳವಳದಿಂದ ಕ್ಯಾಮೆರಾ ಎದುರು ನಿಂತು ಅಲವತ್ತುಕೊಳ್ಳುತ್ತಿದ್ದಾರೆ.  

ರಾಗಿ ಹಿಟ್ಟನ್ನು ನೋಡಿ, ಪ್ರತಾಪ್‌ಗೆ ಯಾಕೋ ಮುದ್ದೆ ತಿನ್ನುವ ಮನಸ್ಸಾಗಿದೆ. ‘ಯಾರಿಗೆಲ್ಲ ಮುದ್ದೆ ಬೇಕು?’ ಎಂದು ಮನೆಯ ಸದಸ್ಯರನ್ನು ಕೇಳಿದ್ದಾರೆ. ಕಾರ್ತಿಕ್‌, ‘ತಿಂತೀನಿ ಕಣೋ ಮಾಡೋ’ ಎಂದು ಪ್ರತಾಪ್‌ಗೆ ಪ್ರೋತ್ಸಾಹ ಕೊಟ್ಟಿದ್ದಾರೆ. ತುಕಾಲಿ ಅವರೂ, ‘ಮಾಡೋದ್ ಮಾಡ್ತಿದೀಯಾ. ಸ್ವಲ್ಪ ದಪ್ಪ ಮಾಡೋ’ ಎಂದು ಕೇಳಿದ್ದಾರೆ. ಪ್ರತಾಪ್ ಉತ್ಸಾಹದಿಂದಲೇ ಎಲ್ಲರಿಗೂ ಮುದ್ದೆ ಮಾಡಿ ಬಡಿಸಿದ್ದಾರೆ. ಎಲ್ಲರೂ ಖುಷಿಯಿಂದ ತಿಂದಿದ್ದಾರೆ ಕೂಡ. 

ಇದನ್ನೂ ಓದಿ: BBK 10: ಬಿಗ್‌ಬಾಸ್‌ ಆಟದಲ್ಲಿ ಸಿರಿ ಫೈನಲ್ಸ್‌ಗೆ ಹೋಗ್ತಾರಾ? ನಮ್ರತಾ ಹಾಗೂ ತುಕಾಲಿಗೆ ಸ್ಟಾರ್ಟಾಯ್ತು ಡೌಟ್! 

ಆದರೆ ಮಧ್ಯದಲ್ಲಿ ಎಲ್ಲೋ ತಾಳ ತಪ್ಪಿದೆ. ಮನೆಯ ಗ್ಯಾಸ್‌ ನಿಂತುಹೋಗಿದೆ. ‘ಮಾಡಿರೋ ಜವಾಬ್ದಾರಿ ನಾನು ಹೊತ್ಕೋತೀನಿ’ ಎಂದು ಪ್ರತಾಪ್ ಹೇಳಿದ್ರೂ ನಮ್ರತಾ, ‘ಮನೆಗೆ ಶಿಕ್ಷೆಯಾದ್ರೆ ನೀನೇನ್ ಮಾಡ್ತೀಯಾ?’ ಎಂದು ಕೇಳಿದ್ದಾರೆ. ಪ್ರತಾಪ್ ಕ್ಯಾಮೆರಾ ಎದುರಿಗೆ ಹೋಗಿ, ‘ಬಿಗ್‌ಬಾಸ್ ದಯವಿಟ್ಟು ಕೊಟ್ಬಿಡಿ ಬಿಗ್‌ಬಾಸ್’ ಎಂದು ಕೇಳಿಕೊಳ್ಳುತ್ತಿದ್ದಾರೆ. ಅತ್ತ ವಿನಯ್‌ ಕೋಪದಿಂದ, ‘ಇವಾಗ ಊಟ ಬರಬೇಕು ಅಷ್ಟೆ. ರಾತ್ರಿ ಊಟ ಆಗ್ಲಿಲ್ಲ ಅಂದ್ರೆ ದೇವ್ರಾಣೆ ನಾನ್ ಸುಮ್ನಿರಲ್ಲ’ ಎಂದು ಅವಾಜ್ ಹಾಕಿದ್ದಾರೆ. 

ಹಾಗಾದ್ರೆ ಮನೆಯೊಳಗೆ ನಿಜವಾಗಿಯೂ ನಡೆದಿದ್ದು ಏನು? ರಾಗಿ ಮುದ್ದೆ ಮಾಡಿದ್ದೇ ಅಪರಾಧವಾಯ್ತೆ? ಅಥವಾ ಮುದ್ದೆ ಮಾಡುವ ಹಂತದಲ್ಲಿ ಏನಾದರೂ ಪ್ರಮಾದವಾಗಿದೆಯಾ? ಮನೆಮಂದಿ ಉಪವಾಸದಲ್ಲಿಯೇ ಮಲಗಬೇಕಾಯ್ತಾ? ಈ ಎಲ್ಲ ಪ್ರಶ್ನೆಗೆ ಉತ್ತರ ಸಿಗಲು ಬಿಗ್‌ಬಾಸ್ ನೋಡಬೇಕಷ್ಟೆ. ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ. ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ ವೀಕ್ಷಿಸಿ.

ಇದನ್ನೂ ಓದಿ: ಬಿಗ್‌ ಬಾಸ್‌ ನಲ್ಲಿ ಟಾಸ್ಕ್ ಮಧ್ಯೆ ಎಲಿಮಿನೇಷನ್..‌ ವರ್ತೂರ್ ಕ್ಲಾಸ್ ನಡೆದಾಗಲೇ ಮನೆಯಿಂದ ಔಟ್!‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News