ಕಿರುತೆರೆಯಲ್ಲಿ ಶುರುವಾಗ್ತಿದೆ ಸೆಲೆಬ್ರಿಟಿಗಳ ಬಹುದೊಡ್ಡ ಸಮರ "ಸುವರ್ಣ ಸೆಲೆಬ್ರಿಟಿ ಲೀಗ್"

Suvarna Celebrity League: ವೀಕೆಂಡ್ ನಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆಯ ರಸದೌತಣ ನೀಡಲು ಹೊತ್ತು ತರ್ತಿದೆ ಹೊಚ್ಚ ಹೊಸ ಶೋ "ಸುವರ್ಣ ಸೆಲೆಬ್ರಿಟಿ ಲೀಗ್".

Written by - Chetana Devarmani | Last Updated : Sep 12, 2024, 05:42 PM IST
    • ಕನ್ನಡ ಕಿರುತೆರೆಯಲ್ಲಿ ಹೊಸತನದ ಸಂಚಲನ
    • ಕನ್ನಡ ಕಿರುತೆರೆಯಲ್ಲಿ ಹೊಚ್ಚ ಹೊಸ ರಿಯಾಲಿಟಿ ಶೋ
    • ಸೆಲೆಬ್ರಿಟಿಗಳ ಬಹುದೊಡ್ಡ ಸಮರ "ಸುವರ್ಣ ಸೆಲೆಬ್ರಿಟಿ ಲೀಗ್"
ಕಿರುತೆರೆಯಲ್ಲಿ ಶುರುವಾಗ್ತಿದೆ ಸೆಲೆಬ್ರಿಟಿಗಳ ಬಹುದೊಡ್ಡ ಸಮರ "ಸುವರ್ಣ ಸೆಲೆಬ್ರಿಟಿ ಲೀಗ್"  title=
Suvarna Celebrity League

ಬೆಂಗಳೂರು: ರಿಯಾಲಿಟಿ ಶೋ ಮೂಲಕ ಕನ್ನಡ ಕಿರುತೆರೆಯಲ್ಲಿ ಹೊಸತನದ ಸಂಚಲನವನ್ನು ಸೃಷ್ಟಿಸಲು ಭರ್ಜರಿಯಾಗಿ ಸಜ್ಜಾಗಿದೆ ಸ್ಟಾರ್ ಸುವರ್ಣ. ವೀಕೆಂಡ್ ನಲ್ಲಿ ಪ್ರೇಕ್ಷಕರಿಗೆ ಮತ್ತಷ್ಟು ಮನರಂಜನೆಯ ರಸದೌತಣ ನೀಡಲು ಹೊತ್ತು ತರ್ತಿದೆ ಹೊಚ್ಚ ಹೊಸ ಶೋ "ಸುವರ್ಣ ಸೆಲೆಬ್ರಿಟಿ ಲೀಗ್".

ಇದೊಂದು ಕಿರುತೆರೆಯ ಜನಪ್ರಿಯ ಸೆಲೆಬ್ರಿಟಿಗಳನ್ನು ಒಳಗೊಂಡ ವಿನೂತನ ರೀತಿಯ ರಿಯಾಲಿಟಿ ಶೋ. ಇದರಲ್ಲಿ ಒಟ್ಟು 2 ತಂಡಗಳಿರುತ್ತದೆ. 10 ಜನ ಸೆಲೆಬ್ರಿಟಿ ಸ್ಪರ್ಧಿಗಳ ನಡುವೆ ಸರಿ ಸುಮಾರು 8 ವಾರಗಳ ಕಾಲ ನಡೆಯುವ ಸಮರ ಇದಾಗಿದೆ. ಈ ಜಟಾಪಟಿಯಲ್ಲಿ ಯಾವ ತಂಡ ಗೆದ್ದು "ಸುವರ್ಣ ಸೆಲೆಬ್ರಿಟಿ ಲೀಗ್" ಪಟ್ಟವನ್ನು ತನ್ನದಾಗಿಸಿಕೊಳ್ಳುತ್ತದೆ ? ಎಂಬುದು ಈ ಕಾರ್ಯಕ್ರಮದ ಶೈಲಿಯಾಗಿದೆ. ಜೊತೆಗೆ ಮೋಜು-ಮಸ್ತಿ, ತರ್ಲೆ ತುಂಟಾಟದ ಜೊತೆ ಪೈಪೋಟಿಯ ಮಹಾ ಯುದ್ಧವೇ ನಡೆಯಲಿದೆ.

ಇದನ್ನೂ ಓದಿ : ವಿಚ್ಛೇದನ ಪಡೆದ 2 ತಿಂಗಳಲ್ಲೇ ಹಾರ್ದಿಕ್ ಪಾಂಡ್ಯನನ್ನು ಮರೆತ ನತಾಶ! ಹೊಸ ಸಂಗಾತಿ ಜೊತೆ ಬಿಂದಾಸ್ ಸುತ್ತಾಟ!!

ಇನ್ನು ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ನಟನೆಯ ಮೂಲಕ ಕನ್ನಡಿಗರ ಮನಸ್ಸನ್ನು ಅದ್ದೂರಿಯಾಗಿ ಗೆದ್ದ ನಟ ಕಾರ್ತಿಕ್ ಮಹೇಶ್ ಇದೇ ಮೊದಲ ಬಾರಿಗೆ ‘ಸುವರ್ಣ ಸೆಲೆಬ್ರಿಟಿ ಲೀಗ್’ ನ ನಿರೂಪಣೆಯ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಇದು ಈ ಕಾರ್ಯಕ್ರಮದ ಮತ್ತೊಂದು ವಿಶೇಷತೆ. 

‘ಸುವರ್ಣ ಸೆಲೆಬ್ರಿಟಿ ಲೀಗ್’ ಶೋ ಲಾಂಚ್ ಗೆ ಭರ್ಜರಿಯಾಗಿ ತಯಾರಿ ನಡೆದಿದ್ದು, ಪ್ರೊಮೋಗಳಿಂದ ವೀಕ್ಷಕರಲ್ಲಿ ಕಾತುರತೆ ಹೆಚ್ಚಾಗಿದೆ. 10 ಸ್ಪರ್ಧಿಗಳಾಗಿ ಕಿರುತೆರೆ ಕಲಾವಿದರುಗಳಾದ ವಿನಯ್ ಗೌಡ, ನಮ್ರತಾ ಗೌಡ, 'ಕಥೆಯೊಂದು ಶುರುವಾಗಿದೆ' ಧಾರಾವಾಹಿ ಖ್ಯಾತಿಯ ಚಂದು ಗೌಡ, 'ಆಸೆ' ಧಾರಾವಾಹಿ ಖ್ಯಾತಿಯ ಪ್ರಿಯಾಂಕಾ ಮತ್ತು ನಿನಾದ್ ಹರಿತ್ಸ, 'ಗೌರಿಶಂಕರ' ಧಾರಾವಾಹಿ ಖ್ಯಾತಿಯ ಅಭಿಜ್ಞಾ ಭಟ್, ತನಿಷಾ ಕುಪ್ಪಂಡ, ಪ್ರಿಯಾಂಕಾ ಶಿವಣ್ಣ, ರಕ್ಷಕ್ ಬುಲೆಟ್ ಹಾಗೂ 'ಕಾಮಿಡಿ ಗ್ಯಾಂಗ್ಸ್' ಖ್ಯಾತಿಯ ಹಿತೇಶ್ ಭಾಗವಹಿಸಲಿದ್ದಾರೆ.

ಇನ್ಮುಂದೆ ವಾರಾಂತ್ಯದಲ್ಲಿ ಶುರುವಾಗಲಿದೆ ಸೆಲೆಬ್ರಿಟಿಗಳ ಬಹುದೊಡ್ಡ ಸಮರ "ಸುವರ್ಣ ಸೆಲೆಬ್ರಿಟಿ ಲೀಗ್" ಇದೇ ಭಾನುವಾರದಿಂದ ಪ್ರತೀ ಭಾನುವಾರ ರಾತ್ರಿ 7 ಗಂಟೆಗೆ ನಿಮ್ಮ ನೆಚ್ಚಿನ  ಸ್ಟಾರ್ ಸುವರ್ಣ ವಾಹಿನಿಯಲ್ಲಿ ತಪ್ಪದೇ ವೀಕ್ಷಿಸಿ.

ಇದನ್ನೂ ಓದಿ: ಈ ಸ್ಟಾರ್‌ ನಟ ಒಂದು ದಿನದ ಊಟಕ್ಕೆ 2 ಲಕ್ಷ ರೂಪಾಯಿ ಖರ್ಚು ಮಾಡ್ತಾರಂತೆ !

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News