ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಚಂದನ್ ಶೆಟ್ಟಿಯ ವಿಆರ್ ಪೋಸ್ಟರ್ ಅನಾವರಣ!

Chandan Sheety Movie: ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಕಡೆಯಿಂದ ಪ್ರೇಕ್ಷಕರಿಗೊಂದು ಗಿಫ್ಟು ಸಿಕ್ಕಿದೆ. 

Written by - YASHODHA POOJARI | Last Updated : Mar 10, 2024, 11:39 AM IST
  • ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ
  • ಚಂದನ್ ಶೆಟ್ಟಿಯ ವಿಆರ್ ಪೋಸ್ಟರ್ ಅನಾವರಣ
  • ವಿಆರ್ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ರಿಲೀಸ್‌
ವಿದ್ಯಾರ್ಥಿ ವಿದ್ಯಾರ್ಥಿನಿಯರೇ: ಚಂದನ್ ಶೆಟ್ಟಿಯ ವಿಆರ್ ಪೋಸ್ಟರ್ ಅನಾವರಣ! title=

Chandan Sheety Movie: ಮಹಾಶಿವರಾತ್ರಿಯ ಶುಭ ಸಂದರ್ಭದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಕಡೆಯಿಂದ ಪ್ರೇಕ್ಷಕರಿಗೊಂದು ಗಿಫ್ಟು ಸಿಕ್ಕಿದೆ. ಹಂತ ಹಂತವಾಗಿ, ಅತ್ಯಂತ ಕ್ರಿಯಾಶೀಲವಾಗಿ ಈ ಸಿನಿಮಾದತ್ತ ಪ್ರೇಕ್ಷಕರನ್ನು ಸೆಳೆಯುವ ಕಾರ್ಯ ನಡೆಯುತ್ತಾ ಬಂದಿದೆ. ಅದರ ಫಲವಾಗಿಯೇ ಇದೀಗ ಈ ಸಿನಿಮಾ ಕಥೆಯ ಸುತ್ತ ಒಂದಷ್ಟು ಕುತೂಹಲ ಮೂಡಿಕೊಂಡು, ಚರ್ಚೆಗಳೂ ನಡೆಯುತ್ತಿವೆ. ಈ ಹಿಂದೆ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಬಿಡುಗಡೆಗೊಂಡಿತ್ತು. ಇದೀಗ ನಾಯಕನಾಗಿ ನಟಿಸಿರುವ ಚಂದನ್ ಶೆಟ್ಟಿಯ ವಿಆರ್ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಅನ್ನು ನಿವೇದಿತಾ ಗೌಡ ಬಿಡುಗಡೆಗೊಳಿಸಿದ್ದಾರೆ̤

ಅರುಣ್ ಅಮುಕ್ತ ನಿರ್ದೇಶನದ ಈ ಚಿತ್ರದಲ್ಲಿ ಚಂದನ್ ಶೆಟ್ಟಿ ನಾಯಕನಾಗಿ ನಟಿಸಿದ್ದಾರೆಂಬ ವಿಚಾರ ಈ ಹಿಂದೆಯೇ ಜಾಹೀರಾಗಿತ್ತು. ಚಂದನ್ ಯಾವ ಗೆಟಪ್ಪಿನಲ್ಲಿ ಕಾಣಿಸಿಕೊಂಡಿದ್ದಾರೆಂಬ ವಿಚಾರವನ್ನು ಮಾತ್ರ ಗೌಪ್ಯವಾಗಿಡಲಾಗಿತ್ತು. ಇದೀಗ ವಿಆರ್ ಪೋಸ್ಟರ್ ಮೂಲಕ ಚಂದನ್ ಶೆಟ್ಟಿಯ ಪಾತ್ರ ಪರಿಚಯವಾಗಿದೆ. ಚಂದನ್ ಇಲ್ಲಿ ಕಾಣಿಸಿಕೊಂಡಿರುವ ಗೆಟಪ್ಪಿನ ಸುತ್ತ ಒಟ್ಟಾರೆ ಕಥೆಯ ಬಗ್ಗೆ ಒಂದಷ್ಟು ಕುತೂಹಲ ಮೂಡಿಕೊಂಡಿದೆ. 

ಇದನ್ನೂ ಓದಿ: Bhairathi Rangal: ಸೆಂಚುರಿ ಸ್ಟಾರ್‌ನ ʻಭೈರತಿ ರಗಲ್ʼ ರಿಲೀಸ್‌ಗೆ ಮುಹೂರ್ತ ಫಿಕ್ಸ್‌! 

ಈ ವಿಆರ್ ಪೋಸ್ಟರ್ (ವರ್ಚುವಲ್ ರಿಯಾಲಿಟಿ ಪೋಸ್ಟರ್ ಅಂತೂ ಈಗಿನ ಜನರೇಷನ್ನಿನ ಹುಡುಗರಿಗೆ ನೇರಾನೇರ ಕನೆಕ್ಟಾಗುವಂತಿದೆ. ಚಂದನ್ ಶೆಟ್ಟಿಯ ಗೆಟಪ್ಪು ಕೂಡಾ ಮೆಚ್ಚುಗೆಗೆ ಪಾತ್ರವಾಗುತ್ತಿದೆ. ಜೊತೆಗೆ ಇದು ಸೈಬರ್ ಫಂಕ್ ಕಥೆಯನ್ನು ಒಳಗೊಂಡಿರಬಹುದಾ? ಈ ಹಿಂದೆ ಬಿಡುಗಡೆಗೊಂಡಿದ್ದ ಪೋಸ್ಟರಿನಲ್ಲಿ ಕೈಯಲ್ಲಿ ಹಾಕಿ ಸ್ಟಿಕ್ ಹಿಡಿದಿದ್ದ ನಾಲಕ್ಕು ಪಾತ್ರಗಳು ಎದುರುಗೊಂಡಿದ್ದವು. ಚಂದನ್ ಪಾತ್ರ ಕೈಯಲ್ಲಿ ವಿಆರ್ ಅನ್ನು ಹಿಡಿದುಕೊಂಡಿದೆ. ಇದೆಲ್ಲವನ್ನೂ ಕಂಡ ಪ್ರೇಕ್ಷಕರಿಗೆ ಇದೊಂದು ಈ ಕಾಲಮಾನದ ಆವೇಗ ಬಚ್ಚಿಟ್ಟುಕೊಂಡಿರುವ ಕಥೆಯೆಂಬ ವಿಚಾರವನ್ನು ದಾಟಿಸಿದೆ. ನಿಖರವಾಗಿ ಹೇಳಬೇಕೆಂದರೆ, ಈ ವಿಆರ್ ಪೋಸ್ಟರ್ ಮೂಲಕ ವಿದ್ಯಾರ್ಥಿ ವಿದ್ಯಾರ್ಥಿನಿಯರತ್ತ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗುವಂತಿದೆ. 

ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಕಾರ್ಯಕಾರಿ ನಿರ್ಮಾಪಕರಾಗಿ ಶ್ರೀಕಾಂತ್ ಜಿ ಕಶ್ಯಪ್, ಕುಮಾರ್ ಗೌಡ ಛಾಯಾಗ್ರಹಣ, ಭರ್ಜರಿ ಚೇತನ್ ಮತ್ತು ವಾಸುಕಿ ವೈಭಣವ್ ಸಾಹಿತ್ಯ, ಪವನ್ ಗೌಡ ಸಂಕಲನ, ಟೈಗರ್ ಶಿವು, ನರಸಿಂಹ ಸಾಹಸ ನಿರ್ದೇಶನ ಈ ಚಿತ್ರಕ್ಕಿರಲಿದೆ. ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ, ಕಾಕ್ರೋಚ್ ಸುಧಿ ಮುಂತಾದವರು ನಟಿಸಿದ್ದಾರೆ. ಇನ್ನುಳಿದಂತೆ ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಮತ್ತು ಸಂಗೀತ ನಿರ್ದೇಶನ ಮಾಡಲಿದ್ದಾರೆ. ವಿಶೇಷವೆಂದರೆ, ಇದುವರೆಗೂ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಚಂದನ್ ಶೆಟ್ಟಿ ಪಾತ್ರವನ್ನು ಗೌಪ್ಯವಾಗಿಡಲಾಗಿದೆ. ಶಿವರಾತ್ರಿಯಂದು ಚಂದನ್ ಶೆಟ್ಟಿ ಪಾತ್ರ ಪರಿಚಯ ಮಾಡಲಿರೋ ಮೋಷನ್ ಪೋಸ್ಟರ್ ಲಾಂಚ್ ಆಗಿದೆ. ಇದೀಗ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರ ಚಿತ್ರೀಕರಣದ ಅಂತಿಮ ಘಟ್ಟ ತಲುಪಿಕೊಂಡಿದೆ.

ಇದನ್ನೂ ಓದಿ: Samantha Ruth Prabhu : ಕಠಿಣ ನಿರ್ಧಾರ ಕೈಗೊಂಡ ನಟಿ ಸಮಂತಾ ! ಸ್ಯಾಮ್ ಮಾತು ಕೇಳಿ ಪ್ಯಾನ್ಸ್‌ ಬೇಸರ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News