ಜಾನಿ ಮಾಸ್ಟರ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ... ಖ್ಯಾತ ಡ್ಯಾನ್ಸ್ ಕೋರಿಯೋಗ್ರಾಫರ್ ವಿರುದ್ಧ FIR !

Jani Master: ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, FIR ಕೂಡ ದಾಖಲಾಗಿದೆ. 

Written by - Chetana Devarmani | Last Updated : Sep 16, 2024, 03:09 PM IST
  • ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್
  • ಜಾನಿ ಮಾಸ್ಟರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ
  • ಯುವರತ್ನ ಸಿನಿಮಾ ಡ್ಯಾನ್ಸ್ ಕೋರಿಯೋಗ್ರಾಫರ್ ವಿರುದ್ಧ FIR !
ಜಾನಿ ಮಾಸ್ಟರ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ... ಖ್ಯಾತ ಡ್ಯಾನ್ಸ್ ಕೋರಿಯೋಗ್ರಾಫರ್ ವಿರುದ್ಧ FIR !  title=

ಬೆಂಗಳೂರು: ಜನಪ್ರಿಯ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ ಹಲವು ಗಂಭೀರ ಆರೋಪಗಳು ಕೇಳಿ ಬಂದಿವೆ. ಮಾಧ್ಯಮ ವರದಿಗಳ ಪ್ರಕಾರ, ಮಹಿಳೆಯೊಬ್ಬರು ಆತನ ವಿರುದ್ಧ ಲೈಂಗಿಕ ಕಿರುಕುಳದ ಪ್ರಕರಣವನ್ನು ದಾಖಲಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧ 21 ವರ್ಷದ ಮಹಿಳೆ ಗಂಭೀರ ಆರೋಪ ಮಾಡಿದ್ದಾರೆ. ಹೈದರಾಬಾದ್‌ನ ರಾಯದುರ್ಗಂ ಪೊಲೀಸರಿಗೆ ಮಹಿಳೆ  ನೀಡಿದ ದೂರಿನಲ್ಲಿ, ಜಾನಿ ಮಾಸ್ಟರ್ ಜೊತೆ ಸ್ವಲ್ಪ ಸಮಯದಿಂದ ಕೆಲಸ ಮಾಡುತ್ತಿದ್ದೆ. ಔಟ್‌ ಡೋರ್‌ ಶೂಟಿಂಗ್ ವೇಳೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಹಿಳೆಯ ಹೇಳಿಕೆ ಆಧರಿಸಿ ರಾಯದುರ್ಗ ಪೊಲೀಸರು ಜಾನಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ನರಸಿಂಗಿ ಪೊಲೀಸರಿಗೆ ವರ್ಗಾಯಿಸಲಾಗಿದೆ. ಚೆನ್ನೈ, ಮುಂಬೈ, ಹೈದರಾಬಾದ್ ಸೇರಿದಂತೆ ಹಲವು ನಗರಗಳಲ್ಲಿ ಶೂಟಿಂಗ್ ವೇಳೆ ಜಾನಿ ತನಗೆ ಹಲವು ಬಾರಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. ನಾರ್ಸಿಂಗಿಯಲ್ಲಿರುವ ತನ್ನ ಮನೆಯಲ್ಲಿ ತನ್ನ ಮೇಲೆ ಹಲವು ಬಾರಿ ಹಲ್ಲೆ ನಡೆಸಿದ್ದಾಗಿಯೂ ಆಕೆ ಹೇಳಿಕೊಂಡಿದ್ದು, ಮಹಿಳೆ ನಾರ್ಸಿಂಗಿ ನಿವಾಸಿಯಾಗಿರುವ ಕಾರಣ ಪ್ರಕರಣವನ್ನು ಅಲ್ಲಿನ ಪೊಲೀಸರಿಗೆ ವರ್ಗಾಯಿಸಲಾಗಿದೆ. 

ಇದನ್ನೂ ಓದಿ: ಅದಿತಿ ರಾವ್ ಜೊತೆ ಗುಟ್ಟಾಗಿ ಮದುವೆಯಾದ ನಟ ಸಿದ್ಧಾರ್ಥ್! ಇಲ್ಲಿವೆ ನೋಡಿ ಮ್ಯಾರೇಜ್‌ ಫೋಟೋಸ್‌

ಈ ವಿಷಯದ ಕುರಿತು ಮಾತನಾಡಿದ ಪೊಲೀಸ್‌ ಅಧಿಕಾರಿ, ಜಾನಿ ಮಾಸ್ಟರ್ ವಿರುದ್ಧ ಐಪಿಸಿ ಸೆಕ್ಷನ್ 376 (ಅತ್ಯಾಚಾರ), ಕ್ರಿಮಿನಲ್ ಬೆದರಿಕೆ (506) ಮತ್ತು ಸ್ವಯಂಪ್ರೇರಣೆಯಿಂದ ನೋವುಂಟು ಮಾಡಿದ (323) ಕಲಂಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಾನಿ ಮಾಸ್ಟರ್ ದಕ್ಷಿಣ ಭಾರತದ ಜನಪ್ರಿಯ ನೃತ್ಯ ನಿರ್ದೇಶಕ. ಟಾಲಿವುಡ್ ಜೊತೆಗೆ, ಬಾಲಿವುಡ್ ಚಿತ್ರಗಳಲ್ಲಿ ಸಹ ಕೆಲಸ ಮಾಡಿದ್ದಾರೆ. ಪುನೀತ್ ರಾಜ್‌ಕುಮಾರ್ ಯುವರತ್ನ ಸಿನಿಮಾದಲ್ಲಿ ಜಾನಿ ಮಾಸ್ಟರ್ ಡ್ಯಾನ್ಸ್ ಕೋರಿಯೋಗ್ರಾಫರ್ ಮಾಡಿದ್ದಾರೆ. ಕನ್ನಡದಲ್ಲೂ ಜಾನಿ ಮಾಸ್ಟರ್ ಸಖತ್‌ ಫೇಮಸ್‌ ಆದವರು. ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ಕನ್ನಡ ಸಿನಿಮಾಗಳಲ್ಲೂ ಕೆಲಸ ಮಾಡಿದ್ದಾರೆ.

ಇದನ್ನೂ ಓದಿ: 4 ಮರ್ಡರ್.. 3 ಪಾರ್ಟಿ.. 12 ವರ್ಷಗಳಿಂದ ಜೈಲಿನಲ್ಲೇ ಇರುವ ಖ್ಯಾತ ನಟಿ ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News