ಬೆಂಗಳೂರು: ಖ್ಯಾತ ಚಿತ್ರ ನಟ ಕಿಚ್ಚ ಸುದೀಪ್ ಮತ್ತು ನಿರ್ದೇಶಕ ಪ್ರೇಮ್ ವಿರುದ್ಧ ಫಿಲ್ಮ್ ಛೇಂಬರ್ ನಲ್ಲಿ ದೂರು ದಾಖಲಾಗಿದೆ.
ಕನ್ನಡ ಚಿತ್ರರಂಗದಲ್ಲಿ ಭಾರೀ ಸುದ್ದಿ ಮಾಡಿರುವ 'ದಿ ವಿಲನ್' ಚಿತ್ರದ ಒಂದು ದೃಶ್ಯದಲ್ಲಿ ನಟ ಕಿಚ್ಚ ಸುದೀಪ್ ಸೊಂಟಕ್ಕೆ ಕೆಂಪು ಮತ್ತು ಹಳದಿ ಬಣ್ಣದ ಪಟ್ಟಿ ಕೊಂಡಿದ್ದು, ಇದರಿಂದ ಕನ್ನಡ ಬಾವುಟಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕರ್ನಾಟಕ ಸಂಘಟನೆ ಒಕ್ಕೂಟದ ಅಧ್ಯಕ್ಷ ನಾಗೇಶ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದಾರೆ.
ಈ ಬಗ್ಗೆ ಕೂಡಲೇ ಸುದೀಪ್ ಮತ್ತು ಪ್ರೇಮ್ ಅವರು ಬಹಿರಂಗ ಕ್ಷಮೆ ಕೇಳಬೇಕು. ಇಲ್ಲವಾದರೆ ಚಲನಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ನಾಗೇಶ್ ದೂರಿನಲ್ಲಿ ತಿಳಿಸಿದ್ದಾರೆ.