ಡಬ್ಬಿಂಗ್‌ ಮುಗಿಸಿ ʼಲವ್ ಮೀ ಆರ್ ಹೇಟ್ ಮೀʼ ಅಂತ ತೆರೆಗೆ ಬರಲು ರೆಡಿಯಾದ ಕೃಷ್ಣ-ರಚ್ಚು..!

Darling Krishna -Rachita Ram : ಡಾರ್ಲಿಂಗ್ ಕೃಷ್ಣ ಮತ್ತು ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ ಲವ್‌ ಮೀ ಆರ್‌ ಹೇಟ್‌ ಮೀ ಬಿಡುಗಡೆಗೆ ಸಿದ್ಧವಾಗಿದ್ದು, ಚಿತ್ರತಂಡ ಸಿನಿಮಾದ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದೆ.

Written by - YASHODHA POOJARI | Edited by - Krishna N K | Last Updated : Jun 13, 2023, 05:08 PM IST
  • ಬಹುನಿರೀಕ್ಷಿತ ಲವ್‌ ಮೀ ಆರ್‌ ಹೇಟ್‌ ಮೀ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.
  • ಡಾರ್ಲಿಂಗ್ ಕೃಷ್ಣ, ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್ ನಟಿಸುತ್ತಿರುವ ಸಿನಿಮಾ.
  • ದೀಪಕ್ ಗಂಗಾಧರ್ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.
ಡಬ್ಬಿಂಗ್‌ ಮುಗಿಸಿ ʼಲವ್ ಮೀ ಆರ್ ಹೇಟ್ ಮೀʼ ಅಂತ ತೆರೆಗೆ ಬರಲು ರೆಡಿಯಾದ ಕೃಷ್ಣ-ರಚ್ಚು..! title=

Love Me Or Hate Me Movie : ನಾಯಕ ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬ ಇತ್ತೀಚಿಗೆ ನಡೆದಿದೆ. ಈ ಸಂದರ್ಭದಲ್ಲಿ ಅವರು ನಾಯಕರಾಗಿ ನಟಿಸಿರುವ "ಲವ್ ಮೀ ಆರ್ ಹೇಟ್ ಮೀ" ಚಿತ್ರದ ಬಿಡುಗಡೆಯ ದಿನಾಂಕ ಘೋಷಣೆಯಾಗಿದೆ. ಬಹ ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 29 ರಂದು ಬಿಡುಗಡೆಯಾಗಲಿದೆ. 

ದೀಪಕ್ ಗಂಗಾಧರ್ ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ದೀಪಕ್ ಗಂಗಾಧರ್ ಮೂವೀಸ್ ಲಾಂಛನದಲ್ಲಿ ದೀಪಕ ಗಂಗಾಧರ್ ಅವರ ಜೊತೆಗೆ ಸುನೀಲ್ ಬಿ.ಎನ್, ಮದನ್ ಗಂಗಾಧರ್, ಚಂದನ್ ಜೆ ಹಾಗೂ ನಾಗರಾಜ್ ಗೌಡ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಲವ್ ಸ್ಟೋರಿ ಜಾನರ್ ನ ಈ ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.

ಇದನ್ನೂ ಓದಿ: Shah Rukh Khan: ದಿನಕ್ಕೆ 100 ಸಿಗರೇಟ್​ ಸೇದುತ್ತೇನೆ ಎಂದ ಶಾರುಖ್ ಖಾನ್, ಆತಂಕದಲ್ಲಿ ಫ್ಯಾನ್ಸ್‌!!

ಐದು ಹಾಡುಗಳಿರುವ ಈ ಚಿತ್ರಕ್ಕೆ ಶ್ರೀನಿಧರ್ ಸಂಭ್ರಮ್ - ನಕುಲ್ ಅಭಯಂಕರ್ ಸಂಗೀತ ನೀಡಿದ್ದಾರೆ. ಸಂತೋಷ್ ರೈ ಪಾತಾಜೆ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ, ಈಶ್ವರಿ ಕುಮಾರ್ ಕಲಾ ನಿರ್ದೇಶನ, ಮುರಳಿ ಹಾಗೂ ಮೋಹನ್ ಅವರ ನೃತ್ಯ ನಿರ್ದೇಶನವಿರುವ ಈ ಚಿತ್ರಕ್ಕೆ ಯೋಗಾನಂದ್ ಮುದ್ದಾನ್, ರಘು ನಡವಳ್ಳಿ ಹಾಗೂ ರಘು ಸಂಭಾಷಣೆ ಬರೆದಿದ್ದಾರೆ.

ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ರಚಿತಾರಾಮ್ ನಟಿಸುತ್ತಿದ್ದಾರೆ. ರೂಪೇಶ್ ಶೆಟ್ಟಿ, ನಂದಿನಿ, ರಾಕೇಶ್ ಪೂಜಾರಿ, ದೀಪಿಕಾ, ಪ್ರವೀಣ್, ಸುಂದರ್ ವೀಣಾ, ರಮೇಶ್ ಭಟ್ ಮುಂತಾದವರು "ಲವ್ ಮೀ ಆರ್ ಹೇಟ್ ಮೀ" ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News