ನಮ್ಮ ಕಾವೇರಿ ನಮ್ಮ ಹಕ್ಕು.. ಆದಷ್ಟು ಬೇಗ ನ್ಯಾಯ ಸಿಗಲಿ : ಕಾವೇರಿ ವಿವಾದ ಕುರಿತು ದರ್ಶನ್‌, ಸುದೀಪ್‌ ಟ್ವೀಟ್‌

Darshan On Kaveri Water Dispute : ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ 5,000 ಕ್ಯೂಸೆಕ್ ನೀರು ಬಿಡುವುದನ್ನು ಮುಂದುವರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇತ್ತೀಚೆಗೆ ಕರ್ನಾಟಕಕ್ಕೆ ಸೂಚಿಸಿತ್ತು. 

Written by - Chetana Devarmani | Last Updated : Sep 20, 2023, 07:22 PM IST
  • ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರ
  • ನಟ ದರ್ಶನ್ ತೂಗುದೀಪ ಟ್ವೀಟ್‌
  • ನಮ್ಮ ಕಾವೇರಿ ನಮ್ಮ ಹಕ್ಕು ಎಂದ ಕಿಚ್ಚ
ನಮ್ಮ ಕಾವೇರಿ ನಮ್ಮ ಹಕ್ಕು.. ಆದಷ್ಟು ಬೇಗ ನ್ಯಾಯ ಸಿಗಲಿ : ಕಾವೇರಿ ವಿವಾದ ಕುರಿತು ದರ್ಶನ್‌, ಸುದೀಪ್‌ ಟ್ವೀಟ್‌   title=

Sudeep On Kaveri Water Dispute : ಕಾವೇರಿ ನದಿ ನೀರು ಬಿಡುವ ವಿಚಾರದಲ್ಲಿ ಕರ್ನಾಟಕ ಮತ್ತು ತಮಿಳುನಾಡು ಬಹಳ ದಿನಗಳಿಂದ ಕಾನೂನು ಹೋರಾಟ ನಡೆಸುತ್ತಿವೆ. ತಮಿಳುನಾಡಿಗೆ ಇನ್ನೂ 15 ದಿನಗಳ ಕಾಲ 5,000 ಕ್ಯೂಸೆಕ್ ನೀರು ಬಿಡುವುದನ್ನು ಮುಂದುವರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇತ್ತೀಚೆಗೆ ಕರ್ನಾಟಕಕ್ಕೆ ಸೂಚಿಸಿತ್ತು. ಜಲಶಕ್ತಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಸೋಮವಾರ ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಇದೀಗ ಈ ನಿರ್ಧಾರದ ವಿರುದ್ಧ ನಟ ದರ್ಶನ್ ತೂಗುದೀಪ ಮತ್ತು ನಟ ಸುದೀಪ್‌ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಕನ್ನಡದಲ್ಲಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಸಾಹಸ ಸಿಂಹ ಡಾ||ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅನಾವರಣವಾಯಿತು "ತಗ್ಗಟ್ಟಿ" ಚಿತ್ರದ ಫಸ್ಟ್ ಲುಕ್  

 

 

ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು  ನಾನು ನಂಬಿದ್ದೇನೆ . ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ . ನೆಲ -ಜಲ -ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ ಎಂದು ನಟ ಕಿಚ್ಚ ಸುದೀಪ್‌ ಟ್ವೀಟ್‌ ಮಾಡಿದ್ದಾರೆ. 

 

 

ಕರ್ನಾಟಕದ ಪಾಲಿನ ಕಾವೇರಿ ನೀರಿಗೆ ಕತ್ತರಿ ಹಾಕಿ ಮತ್ತಷ್ಟು ನೀರು ಪಡೆದುಕೊಳ್ಳುವ ಪ್ರಯತ್ನ ನಿರಂತರವಾಗಿ ನಡೆದು ಬಂದಿದೆ. ಈ ವರ್ಷ ನೀರಿನ ಅಭಾವ ರಾಜ್ಯದಲ್ಲಿ ಸಾಕಷ್ಟಿದೆ. ಈ ಸಮಯದಲ್ಲಿ ನೀರಾವರಿ ಪ್ರದೇಶಕ್ಕೆ ಹಾನಿಯಾಗುವ ಸಾಧ್ಯತೆ ಬಹಳಷ್ಟು ಇರುವ ಕಾರಣ ಎಲ್ಲಾ ಅಂಕಿ-ಅಂಶಗಳನ್ನು ಪರಿಗಣಿಸಿ ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ ಎಂದು ನಟ ದರ್ಶನ್‌ ಟ್ವೀಟ್‌ ಮಾಡಿದ್ದಾರೆ. 

ಇದನ್ನೂ ಓದಿ: ಸಮಂತಾ - ನಾಗ ಚೈತನ್ಯ ಒಟ್ಟಿಗೆ ಇದ್ದಾರಾ? 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 
 

Trending News