ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣ ಡಿಸಿಪಿ ಹೇಳಿದ್ದೇನು?

Actor Nagbhushan car accident : ಅಪಘಾತದ ನಂತರ ನಟ ನಾಗಭೂಷಣ್ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಶರಣಾಗಿದ್ದಾರೆ. ಈ ಬಗ್ಗೆ ದಕ್ಷಿಣ ವಿಭಾಗದ (ಸಂಚಾರ) ಡಿಸಿಪಿ ಶಿವಪ್ರಕಾಶ್ ದೇವರಾಜ್ ಹೇಳಿದ್ದಾರೆ.   

Written by - Chetana Devarmani | Last Updated : Oct 1, 2023, 03:34 PM IST
  • ನಿನ್ನೆ ರಾತ್ರಿ ನಟ ನಾಗಭೂಷಣ್ ಕಾರು ಅಪಘಾತ
  • ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಶರಣಾದ ನಟ
  • ದಕ್ಷಿಣ ವಿಭಾಗದ (ಸಂಚಾರ) ಡಿಸಿಪಿ ಶಿವಪ್ರಕಾಶ್ ದೇವರಾಜ್ ಹೇಳಿಕೆ
ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣ ಡಿಸಿಪಿ ಹೇಳಿದ್ದೇನು?  title=
ನಟ ನಾಗಭೂಷಣ್

ಬೆಂಗಳೂರು : ನಿನ್ನೆ ರಾತ್ರಿ ನಟ ನಾಗಭೂಷಣ್ ಕಾರು ಅಪಘಾತದಲ್ಲಿ ಮಹಿಳೆಯೋರ್ವರು ಸಾವಿಗೀಡಾಗಿದ್ದು ಮತ್ತೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ನಂತರ ನಟ ನಾಗಭೂಷಣ್ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿ ಪೊಲೀಸರಿಗೆ ಶರಣಾಗಿದ್ದಾರೆ. ಈ ಬಗ್ಗೆ ದಕ್ಷಿಣ ವಿಭಾಗದ (ಸಂಚಾರ) ಡಿಸಿಪಿ ಶಿವಪ್ರಕಾಶ್ ದೇವರಾಜ್ ಹೇಳಿದ್ದಾರೆ. 

30-09-23 ರಂದು ರಾತ್ರಿ 9-30 ಕ್ಕೆ ಅಪಘಾತವಾಗಿತ್ತು. ಉತ್ತರಹಳ್ಳಿಯ ವಸಂತಪುರ ಮುಖ್ಯರಸ್ತೆಯಲ್ಲಿ ಅಪಘಾತವಾಗಿತ್ತು. ಇಬ್ಬರು ಪಾದಚಾರಿಗಳಾದ ಕೃಷ್ಣ ಮತ್ತು ಪ್ರೇಮಾ ಎಂಬುವರಿಗೆ ಅಪಘಾತವಾಗಿತ್ತು. ಅತಿವೇಗ ಮತ್ತು ನಿರ್ಲಕ್ಷ್ಯತೆಯಿಂದ ಕಾರು ಚಾಲಕ ವಾಹನ ಓಡಿಸಿದ್ದು ಅಪಘಾತಕ್ಕೆ ಕಾರಣವಾಗಿದೆ 
ಆಕ್ಸಿಡೆಂಟ್ ಸ್ಪಾಟ್ ನಲ್ಲೇ ಪ್ರೇಮಾ ಮೃತಪಟ್ಟಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ : ರಾಮ್ ಚರಣ್ ಎದುರು ನಟಿಸುತ್ತಿರುವ ಸ್ಟಾರ್ ಹೀರೋಯಿನ್ ಮಗಳು ಯಾರು? 

ಕೃಷ್ಣರವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕಾರು ಚಾಲನೆ ಮಾಡುತ್ತಿದ್ದ ಸ್ಯಾಂಡಲ್‌ವುಡ್‌ ನಟ ನಾಗಭೂಷಣ್ ರನ್ನ ಅರೆಸ್ಟ್ ಮಾಡಿದ್ದೆವು. ಆ ಬಳಿಕ ನಾಗಭೂಷಣ್ ರನ್ನ ಸ್ಟೇಷನ್ ಬೇಲ್ ನೀಡಿ ಕಳಿಸಲಾಗಿದೆ. ಮುಂದಿನ ವಿಚಾರಣೆಗೆ ಮತ್ತೆ ಕರೆಯಲಾಗುತ್ತೆ. ಪ್ರಾಥಮಿಕ ತನಿಖೆಯಲ್ಲಿ ಅತಿ ವೇಗ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ರಾತ್ರಿಯೇ ಅಲ್ಕೊಹಾಲ್ ಟೆಸ್ಟಿಂಗ್ ಮೀಟರ್ ನಲ್ಲಿ ಕುಡಿದಿಲ್ಲ ಅನ್ನೋದು ಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಬ್ಲಡ್ ತೆಗೆದು ಟೆಸ್ಟಿಂಗ್ ಗೂ ಕಳುಹಿಸಲಾಗಿದೆ. ಆಕ್ಸಿಡೆಂಟ್ ಮಾಡಿದ ಬಳಿಕ ಸ್ಥಳೀಯರ ಜೊತೆ ಸೇರಿ ಚಾಲಕ ಅಂದರೆ ನಟ ನಾಗಭೂಷಣ್ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ ಎಂದು ಸಂಚಾರ ದಕ್ಷಿಣ ಡಿಸಿಪಿ ಶಿವಪಕ್ರಾಶ್ ದೇವರಾಜ್ ಮಾಧ್ಯಮದವರಿಗೆ ತಿಳಿಸಿದ್ದಾರೆ. 

ಇದನ್ನೂ ಓದಿ : ಐಶ್ವರ್ಯಾ ರೈ ಮಗಳು ಓದುತ್ತಿರೋ ಸ್ಕೂಲ್ ಫೀಸ್ ಎಷ್ಟಿದೆ ಗೊತ್ತಾ? 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News