Dhoolu: ಮನಸ್ಸಿಗೆ ನಾಟುವ ಕೆಂಡದ `ಧೂಳು’ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ

Dhoolu Lyrical Video Song: ಇದೀಗ ಸಂಪೂರ್ಣವಾಗಿ ಚಿತರ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಜ್ಜುಗೊಂಡಿರುವ `ಕೆಂಡ’ದ ಕಡೆಯಿಂದೀಗ ಸಮ್ಮೋಹಕ ಹಾಡುಗಳ ಹಂಗಾಮಾ ಶುರುವಾಗಿದೆ. ಈಚೆಗಷ್ಟೇ ಚೆಂದದ್ದೊಂದು ಹಾಡು ಬಿಡುಗಡೆಗೊಂಡಿತ್ತು. ಇದೀಗ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಅನಾವರಣಗೊಂಡಿದೆ.

Written by - YASHODHA POOJARI | Edited by - Manjunath N | Last Updated : Apr 15, 2024, 06:49 PM IST
  • ಈಗಾಗಲೇ ಗಂಟುಮೂಟೆ ಚಿತ್ರದ ಮೂಲಕ ನಿರ್ದೇಶಕಿಯಾಗಿ ನೆಲೆ ಕಂಡುಕೊಂಡಿರುವವರು ರೂಪಾ ರಾವ್
  • ಅವರು ಕೆಂಡದ ಮೂಲಕ ನಿರ್ಮಾಪಕಿಯಾಗಿ ರೂಪಾಂತರಗೊಂಡಿದ್ದಾರೆ
  • ಗಂಟುಮೂಟೆಯ ಭಾಗವಾಗಿದ್ದ ಸಹದೇವ್ ಕೆಲವಡಿ ಕೆಂಡದೊಂದಿಗೆ ಸ್ವತಂತ್ರ ನಿರ್ದೇಶಕರಾಗಿದ್ದಾರೆ
 Dhoolu: ಮನಸ್ಸಿಗೆ ನಾಟುವ ಕೆಂಡದ `ಧೂಳು’ ಲಿರಿಕಲ್ ವೀಡಿಯೋ ಸಾಂಗ್ ಬಿಡುಗಡೆ title=

ಬೆಂಗಳೂರು: ರೂಪಾ ರಾವ್ ನಿರ್ಮಾಣ ಮತ್ತು ಸಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರ `ಕೆಂಡ’. ಆರಂಭದಿಂದ ಇಲ್ಲಿಯವರೆಗೂ  ಒಂದಷ್ಟು ಕುತೂಹಲಕರ ವಿಚಾರಗಳೊಂದಿಗೇ ಈ ಸಿನಿಮಾ ಪ್ರೇಕ್ಷಕರನ್ನು ತಲುಪುತ್ತಾ ಬಂದಿದೆ. ಇದೀಗ ಸಂಪೂರ್ಣವಾಗಿ ಚಿತರ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಜ್ಜುಗೊಂಡಿರುವ `ಕೆಂಡ’ದ ಕಡೆಯಿಂದೀಗ ಸಮ್ಮೋಹಕ ಹಾಡುಗಳ ಹಂಗಾಮಾ ಶುರುವಾಗಿದೆ. ಈಚೆಗಷ್ಟೇ ಚೆಂದದ್ದೊಂದು ಹಾಡು ಬಿಡುಗಡೆಗೊಂಡಿತ್ತು. ಇದೀಗ ಮತ್ತೊಂದು ಲಿರಿಕಲ್ ವೀಡಿಯೋ ಸಾಂಗ್ ಅನಾವರಣಗೊಂಡಿದೆ.

ಇದನ್ನೂ ಓದಿ -ಜೈಲಿನಿಂದ ಹೊರ ಬರ್ತಿದ್ದಂತೆ 3 ಕೋಟಿ ರೂ. ಬೆಲೆ ಬಾಳುವ ಕಾರು ಖರೀದಿಸಿ ಬಿಗ್​ಬಾಸ್​ ವಿನ್ನರ್​..!

ದಾರಿಯಲ್ಲಿ ಧೂಳು... ದೂರ ಎಲ್ಲೋ ಊರು... ಅಂತ ತೆರೆದುಕೊಳ್ಳೋ ಈ ಹಾಡು ನವಿರು ಸಾಹಿತ್ಯ, ಅದಕ್ಕೊಪ್ಪುವ ಸಂಗೀತ ಹಾಗೂ ಧ್ವನಿಯೊಂದಿಗೆ ಮೆಲ್ಲಗೆ ಮನಸಿಗಿಳಿಯುವಂತಿದೆ. ವಿಶೇಷವೆಂದರೆ, ರಿತ್ವಿಕಕ್ ಕಾಯ್ಕಿಣಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡನ್ನು, ಖ್ಯಾತ ಸಂಗೀತ ನಿರ್ದೇಶಕ ಚರಣ್ ರಾಜ್ ಹಾಡಿದ್ದಾರೆ. ಪ್ರತಿಯೊಂದರಲ್ಲಿಯೂ ಹೊಸತನ, ಪ್ರಯೋಗಾತ್ಮಕ ಗುಣಗಳೊಂದಿಗೆ ಮುಂದುವರೆಯುತ್ತಿರುವ ಚಿತ್ರತಂಡ, ಈ ವಿಚಾರದಲ್ಲಿಯೂ ಗಮನ ಸೆಳೆದಿದೆ.

ಇದನ್ನೂ ಓದಿ-Salman Khan: ಮನೆ ಮುಂದೆ ಗುಂಡಿನ ದಾಳಿ ಬಳಿಕ ಸಲ್ಮಾನ್ ಖಾನ್ ಮೊದಲ ಪೋಸ್ಟ್‌ ! ಏನಿದೆ ಅದರಲ್ಲಿ?!

ಜಯಂತ್ ಕಾಯ್ಕಿಣಿ ಈ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಅದಕ್ಕೆ ಅವರ ಪುತ್ರ ರಿತ್ವಿಕ್ ಮೆಲುವಾದ ಸಂಗೀತ ಸ್ಪರ್ಶ ನೀಡಿದ್ದಾರೆ. ಮೊದಲ ಹಾಡಿನ ಮೂಲಕ ಗಮನ ಸೆಳೆದಿದ್ದ ರಿತ್ವಿಕ್ ಕಾಯ್ಕಿಣಿ, ಎರಡನೇ ಈ ಹಾಡಿನ ಮೂಲಕ ಮತ್ತಷ್ಟು ಭರವಸೆ ಮೂಡಿಸಿರೋದು ಸತ್ಯ. ಮತ್ತೆ ಮತ್ತೆ ಕೇಳಿಸಿಕೊಂಡು, ವಿವರಿಸಲಾಗದಂಥಾ ಧ್ಯಾನಕ್ಕೆ ದೂಡುವ ಗುಣದ ಈ ಹಾಡು ಕೇಳುಗರನ್ನೆಲ್ಲ ಆವರಿಸಿಕೊಳ್ಳುವಂತೆ ಮೂಡಿ ಬಂದಿದೆ. ಹೀಗೆ ಹಾಡುಗಳ ಮೂಲಕ ಸಂಚಲನ ಸೃಷ್ಟಿಸುತ್ತಿರುವ ಕೆಂಡ ಇದೇ ಜೂನ್ ತಿಂಗಳಿನಲ್ಲಿ ಬಿಡುಗಡೆಗೊಳ್ಳಲಿದೆ.

ಈಗಾಗಲೇ ಗಂಟುಮೂಟೆ ಚಿತ್ರದ ಮೂಲಕ ನಿರ್ದೇಶಕಿಯಾಗಿ ನೆಲೆ ಕಂಡುಕೊಂಡಿರುವವರು ರೂಪಾ ರಾವ್. ಅವರು ಕೆಂಡದ ಮೂಲಕ ನಿರ್ಮಾಪಕಿಯಾಗಿ ರೂಪಾಂತರಗೊಂಡಿದ್ದಾರೆ. ಗಂಟುಮೂಟೆಯ ಭಾಗವಾಗಿದ್ದ ಸಹದೇವ್ ಕೆಲವಡಿ ಕೆಂಡದೊಂದಿಗೆ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಈಗಾಗಲೇ ಸಹದೇವ್ ಒಂದೊಳ್ಳೆ ಕಥೆಗೆ ಪರಿಣಾಮಕಾರಿಯಾಗಿ ದೃಷ್ಯರೂಪ ನೀಡಿರುವ ಸ್ಪಷ್ಟ ಲಕ್ಷಣಗಳು ಗೋಚರಿಸಿವೆ. ಇದೀಗ ಕೆಂಡದ ಎರಡನೇ ಹಾಡು ಬಿಡುಗಡೆಗೊಂಡಿದೆ. ಅದರ ಬೆನ್ನಲ್ಲಿಯೇ ಮತ್ತೊಂದಷ್ಟು ವಿಚಾರಗಳೊಂದಿಗೆ ಕೆಂಡದ ನಿಖರವಾದ ಬಿಡುಗಡೆ ದಿನಾಂಕ ಜನಾಹೀರಾಗುವ ಸಾಧ್ಯತೆಗಳಿದ್ದಾವೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

 

 

Trending News