ಮಾಲಿವುಡ್‌ಗೆ ಕಾಲಿಟ್ಟ ದಿಯಾ ಹೀರೋ ದೀಕ್ಷಿತ್ ಶೆಟ್ಟಿ.. ಸೆಟ್ಟೇರಿತು ಒಪ್ಪೀಸ್ ಸಿನಿಮಾ!

Dikshith Shetty New Movie: 'ದಿಯಾ' ಸಿನಿಮಾದಲ್ಲಿ ಲವರ್ ಬಾಯ್ ಆಗಿ ಮಿಂಚಿದ್ದ ದೀಕ್ಷಿತ್ ಶೆಟ್ಟಿ ದಸರಾ ಸಿನಿಮಾ ಮೂಲಕ ಪ್ಯಾನ್ ಇಂಡಿಯಾ ಸಿನಿ ಪ್ರಪಂಚಕ್ಕೆ ಪರಿಚಿತರಾಗಿದ್ದಾರೆ. ನ್ಯಾಚುರಲ್ ಸ್ಟಾರ್ ನಾನಿ ಗೆಳೆಯನಿಗೆ ದಸರಾದಲ್ಲಿ ಬಣ್ಣ ಹಚ್ಚಿ ತೆಲುಗು ಸಿನಿಮಂದಿಯ ಹೃದಯ ಗೆದ್ದಿರುವ ಈ ಚಾಕ್ಲೇಟ್ ಹೀರೋ, ಈಗ ಮಲಯಾಳಂ ಇಂಡಸ್ಟ್ರೀಗೂ ಪದಾರ್ಪಣೆ ಮಾಡಿದ್ದಾರೆ.   

Written by - Savita M B | Last Updated : Dec 26, 2023, 05:57 PM IST
  • ಪ್ಯಾರಾ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ಒಪ್ಪೀಸ್ ಸಿನಿಮಾ
  • ಒಪ್ಪೀಸ್ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಕೇರಳದಲ್ಲಿ ಸರಳವಾಗಿ ನಡೆದಿದೆ
  • ದೀಕ್ಷಿತ್ ಅಲ್ಲು ಅರವಿಂದ್ ಪ್ರೆಸೆಂಟ್ ಮಾಡುತ್ತಿರುವ ಗರ್ಲ್ ಫ್ರೆಂಡ್ ಸಿನಿಮಾದಲ್ಲಿಯೂ ಅಭಿನಯಿಸುತ್ತಿದ್ದಾರೆ.
ಮಾಲಿವುಡ್‌ಗೆ ಕಾಲಿಟ್ಟ ದಿಯಾ ಹೀರೋ ದೀಕ್ಷಿತ್ ಶೆಟ್ಟಿ.. ಸೆಟ್ಟೇರಿತು ಒಪ್ಪೀಸ್ ಸಿನಿಮಾ!  title=

Dikshith Shetty: ಪ್ಯಾರಾ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ಒಪ್ಪೀಸ್ ಸಿನಿಮಾದ ಮುಹೂರ್ತ ಸಮಾರಂಭ ಇತ್ತೀಚೆಗಷ್ಟೇ ಕೇರಳದಲ್ಲಿ ಸರಳವಾಗಿ ನಡೆದಿದೆ. 10 ವರ್ಷಗಳ ಕಾಲ ವಿದೇಶದಲ್ಲಿದ್ದ ವ್ಯಕ್ತಿ ತಾನು ಹುಟ್ಟಿ ಬೆಳೆದ ಕೇರಳಗೆ ವಾಪಸ್ ಆದಾಗ ಏನಾಗುತ್ತದೆ ಅನ್ನೋದೆ ಕಥೆಯ ತಿರುಳು. ಫೆಬ್ರವರಿಯಿಂದ ಒಪ್ಪೀಸ್ ಸಿನಿಮಾದ ಶೂಟಿಂಗ್ ಶುರುವಾಗಲಿದೆ. ಸೌಜನ್ ಜೋಸೆಫ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಪ್ರದ್ಯುಮನ್ಹಾ ಕೊಳ್ಳೇಕಾಲ ಬಂಡವಾಳ ಹೂಡಿದ್ದಾರೆ. ಎಂ ಜಯಚಂದ್ರನ್ ಮ್ಯೂಸಿಕ್ ಚಿತ್ರಕ್ಕಿದೆ. 

ಇದನ್ನೂ ಓದಿ-ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಸ್ಯನಟಿ ಪ್ರಿಯಾಂಕಾ ಕಾಮತ್‌!

ರಂಗಭೂಮಿಯಿಂದ ಕಿರುತೆರೆ ಹಾಗೂ ಹಿರಿತೆರೆಗೆ ಬಂದು 'ದಿಯಾ' ಚಿತ್ರದ ಮೂಲಕ ಪ್ರೇಕ್ಷಕರ ಮನ ಸೆಳೆದಿದ್ದ ಸ್ಪುರದ್ರೂಪಿ ನಟ ದೀಕ್ಷಿತ್ ಶೆಟ್ಟಿ. ಸದ್ಯ ಅವರೀಗ 'ಬ್ಲಿಂಕ್' ಎಂಬ ಚಿತ್ರ ಬಿಡುಗಡೆಗೆ ಎದುರು ನೋಡುತ್ತಿದ್ದಾರೆ. ಈ ಸಿನಿಮಾ ರವಿಚಂದ್ರ ಎ.ಜೆ ಎಂಬುವರು ಈ ಚಿತ್ರಕ್ಕೆ ಹಣ ಹೂಡಿದ್ದಾರೆ. ಶ್ರೀನಿಧಿ 'ಬೆಂಗಳೂರು ಕಥೆ' ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಮಾರ್ಚ್ 8ಕ್ಕೆ ಬ್ಲಿಂಕ್ ರಿಲೀಸ್ ಆಗ್ತಿದೆ.

ಇದನ್ನೂ ಓದಿ-Charithrya Ganesh: ಸೀರೆಯುಟ್ಟು ಮಿಂಚಿದ ಗೋಲ್ಡನ್ ಸ್ಟಾರ್ ಗಣೇಶ್ ಪುತ್ರಿ

ಇದರ ಹೊರತಾಗಿ ದೀಕ್ಷಿತ್ ಅಲ್ಲು ಅರವಿಂದ್ ಪ್ರೆಸೆಂಟ್ ಮಾಡುತ್ತಿರುವ ಗರ್ಲ್ ಫ್ರೆಂಡ್ ಸಿನಿಮಾದಲ್ಲಿಯೂ ಅಭಿನಯಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಸರಳವಾಗಿ ಅವರು ಜನ್ಮದಿನ ಆಚರಿಸಿಕೊಂಡಿದ್ದಾರೆ.ದೀಕ್ಷಿತ್ ಬರ್ತ್ ಡೇ ಸ್ಪೆಷಲ್ ಆಗಿ ಗರ್ಲ್ ಫ್ರೆಂಡ್ ಸಿನಿಮಾದ ಸಣ್ಣ ಗ್ಲಿಂಪ್ಸ್ ರಿಲೀಸ್ ಮಾಡಿ ಚಿತ್ರತಂಡ ಶುಭಾಶಯ ಕೋರಿದೆ. ‘ರಂಗಿತರಂಗ', 'ಅವನೇ ಶ್ರೀಮನ್ನಾರಾಯಣ' ಹಾಗೂ 'ಸ್ಪೂಕಿ ಕಾಲೇಜು' ಗಳಂತಹ ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ಹೆಚ್.ಕೆ.ಪ್ರಕಾಶ್ ನಿರ್ಮಾಣದ 'ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ' ಸಿನಿಮಾದಲ್ಲಿಯೂ ದಿಯಾ ಹೀರೋ ಬಣ್ಣ ಹಚ್ಚಿದ್ದಾರೆ. ಇನ್ನೂ, ದೀಕ್ಷಿತ್ ನಟನೆಯ ಕೆಟಿಎಂ ಫೆಬ್ರವರಿಯಲ್ಲಿ ಬಿಡುಗಡೆಯಾಗುತ್ತಿದೆ. ಇದರ ಜೊತೆಗೆ ತಮಿಳು ಸಿನಿಮಾವೊಂದು ತೆರೆಗೆ ಬರಲು ಅಣಿಯಾಗಿದೆ.

ನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News