‘ವೆಂಕ್ಯಾ’ನಿಗೆ ಸಿಕ್ತು ಸಿದ್ಧಾರೂಢರ ಆಶೀರ್ವಾದ.. ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ಮತ್ತೊಂದು ಸಿನಿಮಾ

Sandalwood Updates: ಡೊಳ್ಳು ಸಾರಥಿ ಸಾಗರ್ ಪುರಾಣಿಕ್ ಹಾಗೂ ಪವನ್ ಒಡೆಯರ್ ಮತ್ತೊಂದು ಸಂಗಮದ ಸಿನಿಮಾ ಸೆಟ್ಟೇರಿದೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಇತ್ತೀಚೆಗಷ್ಟೇ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ವೆಂಕ್ಯಾ ಎಂಬ ಟೈಟಲ್ ಇಡಲಾಗಿದೆ.

Written by - YASHODHA POOJARI | Edited by - Bhavishya Shetty | Last Updated : Mar 19, 2024, 06:46 PM IST
    • ಪವನ್ ನಿರ್ಮಾಪಕರಾಗಿಯೂ ಮೊದಲ ಹೆಜ್ಜೆಯಲ್ಲಿ ಶಹಬಾಸ್ ಗಿರಿ ಪಡೆದುಕೊಂಡಿದ್ದಾರೆ.
    • ಪವನ್ ಒಡೆಯರ್ ಮತ್ತೊಮ್ಮೆ ಸಾಗರ್ ಪುರಾಣಿಕ್ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ
    • ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಇತ್ತೀಚೆಗಷ್ಟೇ ಮುಹೂರ್ತ ನೆರವೇರಿದೆ
‘ವೆಂಕ್ಯಾ’ನಿಗೆ ಸಿಕ್ತು ಸಿದ್ಧಾರೂಢರ ಆಶೀರ್ವಾದ.. ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ಮತ್ತೊಂದು ಸಿನಿಮಾ title=
Sandalwood

ಸ್ಯಾಂಡಲ್ವುಡ್’ನಲ್ಲಿ ಯಶ್, ಪುನೀತ್ ರಾಜ್’ಕುಮಾರ್ ಅವರಂತಹ ಸ್ಟಾರ್ ನಟರಿಗೆ ಸಿನಿಮಾ ಮಾಡಿ ಸೈ ಎನಿಸಿಕೊಂಡವರು ಪವನ್ ಒಡೆಯರ್. ನಿರ್ದೇಶನದಲ್ಲಿ ಗೆದ್ದಿರುವ ಪವನ್ ನಿರ್ಮಾಪಕರಾಗಿಯೂ ಮೊದಲ ಹೆಜ್ಜೆಯಲ್ಲಿ ಶಹಬಾಸ್ ಗಿರಿ ಪಡೆದುಕೊಂಡಿದ್ದಾರೆ. ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಮತ್ತೊಮ್ಮೆ ಸಾಗರ್ ಪುರಾಣಿಕ್ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್‌ ಅವರೇ ಜನರನ್ನು ಕರೆದುಕೊಂಡು ಬಂದು ಕಳ್ಳ ವೋಟು ಹಾಕಿಸಿದ್ದು ಮರೆತಿದ್ದೀರಾ? 

ಡೊಳ್ಳು ಸಾರಥಿ ಸಾಗರ್ ಪುರಾಣಿಕ್ ಹಾಗೂ ಪವನ್ ಒಡೆಯರ್ ಮತ್ತೊಂದು ಸಂಗಮದ ಸಿನಿಮಾ ಸೆಟ್ಟೇರಿದೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಇತ್ತೀಚೆಗಷ್ಟೇ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ವೆಂಕ್ಯಾ ಎಂಬ ಟೈಟಲ್ ಇಡಲಾಗಿದೆ. ವೆಂಕ್ಯಾನಿಗೆ ಸಾಗರ್ ಪುರಾಣಿಕ್ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಾಯಕನಾಗಿಯೂ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ಸಾಗರ್ ನಟನೆ ಜವಾಬ್ದಾರಿನ್ನು ಹೊತ್ತುಕೊಂಡಿದ್ದಾರೆ.

ವೆಂಕ್ಯಾ ಶೂಟಿಂಗ್ ಈಗಾಗಲೇ ಚಾಲುವಾಗಿದೆ. ಇದೊಂದು ವಿಭಿನ್ನ ಪ್ರಯತ್ನದ ಸಿನಿಮಾ. ಉತ್ತರ ಕರ್ನಾಟಕದ ಕಥೆಯಾದ್ರೂ ಅದು ದೇಶ ಎಲ್ಲಾ ಸುತ್ತಲಿದೆ. ಇದೊಂದು ಹೊಸ ಬಗೆಯ ಕಮರ್ಷಿಯಲ್ ಸಿನಿಮಾ  ಅಂತಿದೆ ಚಿತ್ರತಂಡ. ಶೀಘ್ರದಲ್ಲೇ ಉಳಿದ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.

ಇದನ್ನೂ ಓದಿ: White Hair: ಬಿಳಿಕೂದಲನ್ನು ಗಾಢ ಕಪ್ಪಾಗಿಸಲು ಹೇಳಿಮಾಡಿಸಿದ್ದು ಈ ನೀರು: ಕೂದಲಿಗೆ ಸ್ಪ್ರೇ ಮಾಡಿದ್ರೆ ಸಾಕು 25 ನಿಮಿಷದಲ್ಲಿ ರಿಸಲ್ಟ್!

ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ಹಣ ಹಾಕುತ್ತಿರುವ ವೆಂಕ್ಯಾ ಚಿತ್ರಕ್ಕೆ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News