ಹಲ್ಲೆ ಪ್ರಕರಣ: ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಿದ ದುನಿಯಾ ವಿಜಯ್

ದುನಿಯಾ ವಿಜಯ್ ಜಾಮೀನು ಅರ್ಜಿ ವಿಚಾರನೇ ನಡೆಸಿದ್ದ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. 

Last Updated : Sep 27, 2018, 05:18 PM IST
ಹಲ್ಲೆ ಪ್ರಕರಣ: ಜಾಮೀನಿಗಾಗಿ ಮೇಲ್ಮನವಿ ಸಲ್ಲಿಸಿದ ದುನಿಯಾ ವಿಜಯ್ title=

ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಮೇಲಿನ ಹಲ್ಲೆ ಮತ್ತು ಅಪಹರಣ ಪ್ರಕರಣದ ಆರೋಪಿಯಾಗಿರುವ ನಟ ದುನಿಯಾ ವಿಜಯ್ ಜಾಮೀನಿಗಾಗಿ ಸೆಷನ್ಸ್ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ದುನಿಯಾ ವಿಜಯ್ ಜಾಮೀನು ಅರ್ಜಿ ವಿಚಾರನೇ ನಡೆಸಿದ್ದ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಬುಧವಾರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಬೆನ್ನಲ್ಲೇ ವಿಜಯ್ ಜಾಮೀನು ನೀಡುವಂತೆ ಕೋರಿ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ. 

ಬೆಂಗಳೂರಿನ ಅಂಬೇಡ್ಕರ್‌ ಭವನದಲ್ಲಿ ಸೆಪ್ಟೆಂಬರ್ 22ರ ರಾತ್ರಿ ನಡೆದ ಜಗಳವೊಂದು ಘರ್ಷಣೆಗೆ ತಿರುಗಿ, ಜಿಮ್‌ ಟ್ರೈನರ್‌ ಆಗಿರುವ ಪಾನಿಪುರಿ ಕಿಟ್ಟಿ ಅವರ ತಮ್ಮನ ಮಗ ಮಾರುತಿ ಗೌಡ ಎನ್ನುವ ಯುವಕನನ್ನು ದುನಿಯಾ ವಿಜಿ ಮತ್ತು ಮೂವರು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಭಾನುವಾರ ಬೆಳಿಗ್ಗೆ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ದುನಿಯಾ ವಿಜಯ್ ಮತ್ತು ಅವರ ಸ್ನೇಹಿತರ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ದುನಿಯಾ ವಿಜಯ್ ಮತ್ತು ಆರೋಪಿಗಳನ್ನು ಬಂಧಿಸಿದ್ದರು. ನಂತರ ಕೋರ್ಟ್ ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು.

Trending News