ಕೀರ್ತಿ ಪಟ್ಟಡಿ ನಟ ದುನಿಯಾ ವಿಜಿ ಎರಡನೇ ಪತ್ನಿಯೇ ಅಲ್ಲ... ಇನ್ನೊಂದು ಮದುವೆ ಆಗೇ ಇಲ್ಲ ಅಂದ್ರಾ ವಿಜಯ್!?

Duniya Vijay Nagaratna Divorce : ನಾಗರತ್ನ ಅವರು ಇದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ನಾಗರತ್ನ ಈ ಬಗ್ಗೆ ಒಂದು ದೀರ್ಘ ಪೋಸ್ಟ್‌ ಬರೆದು ತಮ್ಮ ಫೇಸ್‌ಬುಕ್‌ನಲ್ಲಿ ಶೇರ್‌ ಮಾಡಿದ್ದಾರೆ.

Written by - Chetana Devarmani | Last Updated : Jun 14, 2024, 11:53 AM IST
  • ದುನಿಯಾ ವಿಜಯ್ ವಿಚ್ಛೇದನ ಅರ್ಜಿ ವಜಾ
  • ದುನಿಯಾ ವಿಜಯ್‌ ಪತ್ನಿ ನಾಗರತ್ನ
  • ಇನ್ನೊಂದು ಮದುವೆ ಆಗೇ ಇಲ್ಲ ವಿಜಯ್!?
ಕೀರ್ತಿ ಪಟ್ಟಡಿ ನಟ ದುನಿಯಾ ವಿಜಿ ಎರಡನೇ ಪತ್ನಿಯೇ ಅಲ್ಲ... ಇನ್ನೊಂದು ಮದುವೆ ಆಗೇ ಇಲ್ಲ ಅಂದ್ರಾ ವಿಜಯ್!? title=

Duniya Vijay Wife Nagaratna Post: ದುನಿಯಾ ವಿಜಯ್‌ ತಮ್ಮ ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ನಾಗರತ್ನ ಅವರು ಇದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ. ನಾಗರತ್ನ ಈ ಬಗ್ಗೆ ಒಂದು ದೀರ್ಘ ಪೋಸ್ಟ್‌ ಬರೆದು ತಮ್ಮ ಫೇಸ್‌ಬುಕ್‌ನಲ್ಲಿ ಶೇರ್‌ ಮಾಡಿದ್ದಾರೆ. ಕೊನೆಯ ವರೆಗೆ ಪತಿಯ ಜೊತೆಯಲ್ಲೇ ಇರುವೆ ಎಂದು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. 

ಈ ದಿನ ತುಂಬಾ ಖುಷಿ ಕೊಟ್ಟ ದಿನವಾಗಿದೆ. ನನ್ನ ಪತಿ ವಿಜಯ್ ರವರು ತಮಗೆ ವಿಚ್ಛೇದನ ಬೇಕೆಂದು ಸ್ವಲ್ಪ ವರ್ಷಗಳ ಹಿಂದೆ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿರುತ್ತಾರೆ. ಆ ಹೋರಾಟದಲ್ಲಿ ನಿಮ್ಮೆಲ್ಲರ ಆಶೀರ್ವಾದದಿಂದ  ನನಗೆ ಜಯ ಸಿಕ್ಕಿದೆ. ನಾನು ನಂಬಿದ ದೇವರು ನನ್ನ ಕೈ ಬಿಡಲಿಲ್ಲ,
ಇದು ನನ್ನ ಜಯ ಅನ್ನೋದಕ್ಕಿಂತ ನನ್ನ ಪತಿ ಅಧಿಕೃತವಾಗಿ ಇನ್ನೊಂದು ಮದುವೆಯಾಗಲು ಅವಕಾಶ ಸಿಕ್ಕಿಲ್ಲ ಅನ್ನೋ ನಿಜ!!! ಎಂದು  ನಾಗರತ್ನ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ನನಗೆ ಅದು ಬೇಕೇ ಬೇಕು.. ಅಂತ ಪೊಲೀಸರ ಮುಂದೆ ಅಂಗಲಾಚಿದ ದರ್ಶನ್‌..! ಡೆವಿಲ್‌ ಕೇಳಿದ್ದಾದ್ರೂ ಏನು..?

ಏಕೆಂದರೆ ನನಗೆ ನನ್ನ ಅಪ್ಪ ಅಮ್ಮ ಮದುವೆ ಮಾಡಿಕೊಟ್ಟಾಗ ಹೇಳಿದ್ದು ಕಲಿಸಿದ್ದು ಒಂದೇ ಗಂಡನೇ ದೇವರು, ಅತ್ತೆ ಮಾವನೇ ನಿಮ್ಮವರು, ಗಂಡನ ಮನೆಯೇ ನಿನ್ನ ಮನೆ, ಎಷ್ಟೇ ಕಷ್ಟಗಳು, ಏನೇ ಸಮಸ್ಯೆ ಬಂದರೂ ಅದೇ ಮನೆಯಲ್ಲೇ ಇರ್ಬೇಕು ಅವರೇ ನಿನಗೆ ಎಲ್ಲಾ ಎಂದಿದ್ದರು, ನಾನೂ ಅದನ್ನೇ ಪಾಲಿಸಿಕೊಂಡು ಬಂದವಳು! ಅದನ್ನೇ ಪಾಲಿಸಿಕೊಂಡು ಹೋಗುವಳು ನನಗೆ ನನ್ನ ಗಂಡ ಮಕ್ಕಳು ಇಷ್ಟೇ ಸರ್ವಸ್ವ! ನನ್ನ ಜೀವ ಇರುವವರೆಗೂ ಅವರ ಜೊತೆಯಲ್ಲೇ ಇದ್ದು ಸಾಯುತ್ತೇನೆ ಎಂದು  ನಾಗರತ್ನ ಹೇಳಿದ್ದಾರೆ. 

ನಮ್ಮ ಕಾನೂನಿನ ಪ್ರಕಾರ ವಿಚ್ಚೇದನ ಆದ ನಂತರನೇ ಇನ್ನೊಂದು ಮದುವೆಗೆ ಅವಕಾಶ ಇರುವುದು ಎಂಬ ಸತ್ಯ ನಿಮಗೂ ಗೊತ್ತು, ನನ್ನ ಪತಿ ಇನ್ನೊಂದು ಮದುವೆಯಾಗಿಲ್ಲ ಎಂದು ಅವರೇ ನಮಗೆ ಹೇಳಿರುತ್ತಾರೆ. ಈ ಕೇಸಿನಲ್ಲಿ ನಮ್ಮ ವಕೀಲರಾದ ಬಿಎನ್ ನಾಗರಾಜ್ ಸರ್ ಅವರ ಶ್ರಮ ಅಪಾರವಾದುದು. ದಯವಿಟ್ಟು ಬೇರೆ ವದಂತಿಗಳಿಗೆ ಕಿವಿಕೊಡದೆ, ನಿಮ್ಮ ಆಶೀರ್ವಾದ ಸದಾ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಸಮಸ್ತ ನಾಡಿನ ಜನತೆಗೆ ಈ ಮೂಲಕ ಕೇಳಿಕೊಳ್ಳುತ್ತೇನೆ. ದಯವಿಟ್ಟು ಮಾಧ್ಯಮ ಮಿತ್ರರಿಗೆ ಕೇಳಿ ಕೊಳ್ಳುವುದೇನೆಂದರೆ ಕೀರ್ತಿ ಪಟ್ಟಡಿ ಯನ್ನು 2ನೇ ಹೆಂಡ್ತಿ ಅಂತಾ ದಯವಿಟ್ಟು ಪ್ರಸಾರ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. 

ಇದನ್ನೂ ಓದಿ: ಯುವ ರಾಜ್‌ಕುಮಾರ್ ಆ ನಟಿಯ ಜೊತೆಗೆ ಸಿಕ್ಕಿಬಿದ್ದ ಸಾಕ್ಷಿ ಇದೆಯಾ!? ಶ್ರೀದೇವಿ ಪರ ವಕೀಲರು ಹೇಳಿದ್ದೇನು?

ದುನಿಯಾ ವಿಜಯ್ ಹಾಗೂ ನಾಗರತ್ನ ಮದುವೆಯಾಗಿ ಮೂವರು ಮಕ್ಕಳಿದ್ದಾರೆ. ದುನಿಯಾ ವಿಜಯ್ ಕೆಲ ವರ್ಷಗಳ ಹಿಂದೆ ಪತ್ನಿ ನಾಗರತ್ನ ಅವರಿಂದ ದೂರಾಗಿ ಕೀರ್ತಿ ಪಟ್ಟಾಡಿ ಜೊತೆ ಸಹಜೀವನ ನಡೆಸುತ್ತಿದ್ದರು. ಇದು ಕೀರ್ತಿ ಮತ್ತು ನಾಗರತ್ನ ಅವರ ಮಧ್ಯೆ ಸಾಕಷ್ಟು ಜಗಳಕ್ಕೆ ಕಾರಣವಾಗಿತ್ತು. ಬಳಿಕ ದುನಿಯಾ ವಿಜಯ್, ನಾಗರತ್ನ ಅವರಿಂದ ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ವಿಜಯ್ ವಿಚ್ಛೇದನ ಅರ್ಜಿ ವಜಾ ಆಗಿದೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News