'ಪಿಎಂ ನರೇಂದ್ರ ಮೋದಿ' ಸಿನಿಮಾ ಬಿಡುಗಡೆಗೆ ಚುನಾವಣಾ ಆಯೋಗದಿಂದ ಗ್ರೀನ್ ಸಿಗ್ನಲ್!

ಚಿತ್ರ ಬಿಡುಗಡೆ ಬಗ್ಗೆ ಕೇಂದ್ರ ಸೆನ್ಸಾರ್​ ಮಂಡಳಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಚುನಾವಣಾ ಆಯೋಗ ಹೇಳಿದೆ. 

Last Updated : Apr 3, 2019, 11:04 AM IST
'ಪಿಎಂ ನರೇಂದ್ರ ಮೋದಿ' ಸಿನಿಮಾ ಬಿಡುಗಡೆಗೆ ಚುನಾವಣಾ ಆಯೋಗದಿಂದ ಗ್ರೀನ್ ಸಿಗ್ನಲ್! title=

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಚಿತ್ರ 'ಪಿಎಂ ನರೇಂದ್ರ ಮೋದಿ' ಬಿಡುಗಡೆಗೆ ಚುನಾವಣಾ ಆಯೋಗ ಬುಧವಾರ ಗ್ರೀನ್ ಸಿಗ್ನಲ್ ನೀಡಿದೆ. ಅಲ್ಲದೆ, ಚಿತ್ರ ಬಿಡುಗಡೆ ಬಗ್ಗೆ ಕೇಂದ್ರ ಸೆನ್ಸಾರ್​ ಮಂಡಳಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಚುನಾವಣಾ ಆಯೋಗ ಹೇಳಿದೆ. 

ಲೋಕಸಭಾ ಚುನಾವಣೆಗಳ ಫ‌ಲಿತಾಂಶ ಹೊರಬೀಳುವ ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಬಯೋಪಿಕ್‌ 'ಪಿಎಂ ನರೇಂದ್ರ ಮೋದಿ' ಚಿತ್ರ ಬಿಡುಗಡೆಗೆ ತಡೆಯಾಜ್ಞೆ ನೀಡಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ದೆಹಲಿ ಹೈಕೋರ್ಟ್ ವಜಾ ಮಾಡಿತ್ತು. ಮುಖ್ಯ ನ್ಯಾಯಮೂರ್ತಿಗಳಾದ ರಾಜೇಂದ್ರ ಮೆನನ್‌ ಮತ್ತು ಎ.ಜೆ. ಭಂಭಾನಿ ಅವರನ್ನು ಒಳಗೊಂಡ ಪೀಠವು ಅರ್ಜಿ ವಿಚಾರಣೆ ನಡೆಸಿ, "ನಾವು ಈ ವಿಷಯದಲ್ಲಿ ಹಸ್ತಕ್ಷೇಪ ಮಾಡಲು ಬಯಸುವುದಿಲ್ಲ; ನೀವು ಬೇಕಿದ್ದರೆ ಸೆನ್ಸಾರ್‌ ಮಂಡಳಿಗೆ ಹೋಗಿ ಇಲ್ಲವೇ ಚುನಾವಣಾ ಆಯೋಗಕ್ಕೆ ಹೋಗಿ" ಎಂದು ಅರ್ಜಿದಾರರಿಗೆ ಹೇಳಿ, ಅರ್ಜಿಯನ್ನು ವಜಾಗೊಳಿಸಿತ್ತು.

ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಚಿತ್ರ ಬಿಡುಗಡೆ ಆಗುತ್ತಿರುವುದಕ್ಕೆ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಅಲ್ಲದೆ, ಚಿತ್ರ ಬಿಡುಗಡೆಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ವಾದಿಸಿದ್ದವು. ಆದರೀಗ ಚುನಾವಣಾ ಆಯೋಗ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾಗಿ ಪೂರ್ವ ನಿಗದಿಯಂತೆ ಏಪ್ರಿಲ್ 5 ರಂದು ದೇಶಾದ್ಯಂತ ಚಿತ್ರ ಬಿಡುಗಡೆಯಾಗುವ ಸಾಧ್ಯತೆಯಿದೆ. 

Trending News