Famous actor yogesh mahajan: ಮರಾಠಿ ಚಿತ್ರಗಳು ಮತ್ತು ಧಾರಾವಾಹಿಗಳಲ್ಲಿ ಗಮನಾರ್ಹ ಪಾತ್ರಗಳನ್ನು ನಿರ್ವಹಿಸುವ ಮೂಲಕ ಪ್ರೇಕ್ಷಕರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಸೃಷ್ಟಿಸಿದ ನಟ ಯೋಗೇಶ್ ಮಹಾಜನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.. ಅವರಿಗೆ 50 ವರ್ಷ ವಯಸ್ಸಾಗಿತ್ತು. ಈ ಬಗ್ಗೆ ಅವರ ಕುಟುಂಬದವರು ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ. ನಮ್ಮ ಪ್ರೀತಿಯ ಯೋಗೀಶ್ ಮಹಾಜನ್ ಅವರ ಹಠಾತ್ ನಿಧನವನ್ನು ನಾವು ಭಾರವಾದ ಹೃದಯದಿಂದ ಘೋಷಿಸುತ್ತೇವೆ. ಅವರು ಹೃದಯ ಸ್ತಂಭನದಿಂದ 19 ಜನವರಿ 2025 ರಂದು ನಿಧನರಾಗಿದ್ದಾರೆ.. ಇದು ನಮ್ಮ ಇಡೀ ಕುಟುಂಬ, ಸಂಬಂಧಿಕರು ಮತ್ತು ಸ್ನೇಹಿತರಿಗೆ ದೊಡ್ಡ ಆಘಾತವಾಗಿದೆ. ಅವರ ಮೃತದೇಹವನ್ನು ಸೋಮವಾರ, ಜನವರಿ 20 ರಂದು ಅಂತ್ಯಸಂಸ್ಕಾರ ಮಾಡಲಾಗುವುದು ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದೆ. ಮುಂಬೈನ ಬೊರಿವಲಿ ಚಿತಾಗಾರದಲ್ಲಿ ಯೋಗೇಶ್ ಮಹಾಜನ್ ಅವರ ಪಾರ್ಥಿವ ಶರೀರದ ಅಂತ್ಯಸಂಸ್ಕಾರ ನಡೆಯಲಿದೆ.
ಇದನ್ನೂ ಓದಿ-ಕರ್ನಾಟಕದಿಂದ ಪ್ರಾರಂಭವಾಯಿತು ಬಹು ನಿರೀಕ್ಷಿತ "ಕಣ್ಣಪ್ಪ" ಚಿತ್ರದ ಪ್ರಚಾರ ..
ಯೋಗೇಶ್ ಮಹಾಜನ್ ಅನೇಕ ಮರಾಠಿ ಚಲನಚಿತ್ರಗಳು ಮತ್ತು ಕೆಲವು ಹಿಂದಿ ಪೌರಾಣಿಕ ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದ್ದಾರೆ. 'ಶಿವ ಶಕ್ತಿ-ತಪ್, ತ್ಯಾಗ, ತಾಂಡವ್' ಹಿಂದಿ ಧಾರಾವಾಹಿಯ ಶೂಟಿಂಗ್ಗಾಗಿ ಉಮರ್ಗಾಂವ್ಗೆ ಹೋಗಿದ್ದರು. ಈ ಧಾರಾವಾಹಿಯಲ್ಲಿ ಅವರು ಶುಕ್ರಾಚಾರ್ಯರ ಪಾತ್ರವನ್ನು ನಿರ್ವಹಿಸಿದ್ದಾರೆ. ಮಾಧ್ಯಮಗಳ ವರದಿಗಳ ಪ್ರಕಾರ, ಶನಿವಾರ ಸಂಜೆ ಧಾರಾವಾಹಿಯ ಚಿತ್ರೀಕರಣ ಮುಗಿದಾಗ ಯೋಗೇಶ್ಗೆ ಎದೆ ನೋವು ಕಾಣಿಸಿಕೊಂಡಿದೆ. ಬಳಿಕ ಹತ್ತಿರದ ವೈದ್ಯರ ಬಳಿ ಹೋಗಿ ಔಷಧ ಸೇವಿಸಿ ರಾತ್ರಿ ಹೋಟೆಲ್ ರೂಮಿನಲ್ಲಿ ಮಲಗಿದ್ದರು.. ಹೀಗಾಗಿ ಭಾನುವಾರ ಬೆಳಗ್ಗೆ ಶೂಟಿಂಗ್ಗೆ ಸೆಟ್ಗೆ ಬಂದಿರಲಿಲ್ಲ.
ಇದನ್ನೂ ಓದಿ-ʼಟೈಟಾನಿಕ್ ದಡ ತಲುಪಿದೆ..ʼ ನಟಿ ಪವಿತ್ರಾ ಜೊತೆಗಿನ ಸಂಬಂಧದ ಬಗ್ಗೆ ಶಾಕಿಂಗ್ ಕಾಮೆಂಟ್ ಮಾಡಿದ ನರೇಶ್!
ಯೋಗೇಶ್ ಸೆಟ್ ಗೆ ಬರದ ಕಾರಣ ಧಾರಾವಾಹಿಯ ತಂಡದ ಸದಸ್ಯರು ಆತಂಕ ವ್ಯಕ್ತಪಡಿಸಿದರು. ಯೋಗೇಶ್ ಅವರನ್ನು ಪೋನ್ ಮೂಲಕ ಸಂಪರ್ಕಿಸಲು ಯತ್ನಿಸಿದರಾದರೂ ಯೋಗೇಶ್ ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಕೊನೆಗೆ ಅವರ ಹೋಟೆಲ್ ಕೋಣೆಯ ಬಾಗಿಲು ತೆರೆದಾಗ, ಅವರು ಹಾಸಿಗೆಯ ಮೇಲೆ ಮಲಗಿರುವುದು ಕಂಡುಬಂದಿದೆ. ಅಷ್ಟರಲ್ಲಾಗಲೇ ಅವರು ಹೃದಯ ಸ್ತಂಭನದಿಂದ ಮೃತಪಟ್ಟಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.