Vidya Balan: ನಕಲಿ ಇನ್‌ಸ್ಟಾ ಐಡಿ.. ನಟಿ ವಿದ್ಯಾ ಬಾಲನ್ ಹೆಸರಿನಲ್ಲಿ ವಂಚನೆ!

Bollywood Actress Vidya Balan: ನಕಲಿ ಇನ್‌ಸ್ಟಾಗ್ರಾಮ್ ಐಡಿಯಿಂದ ಬಾಲಿವುಡ್ ನಟಿ ವಿದ್ಯಾ ಬಾಲನ್ ಹೆಸರಲ್ಲಿ ವಂಚನೆ ಆರೋಪ ಕೇಳಿಬಂದಿದೆ.

Written by - Chetana Devarmani | Last Updated : Feb 21, 2024, 10:40 AM IST
  • ವಿದ್ಯಾ ಬಾಲನ್ ಹೆಸರಿನಲ್ಲಿ ನಕಲಿ ಇನ್‌ಸ್ಟಾ ಐಡಿ
  • ಬಾಲಿವುಡ್‌ ನಟಿ ವಿದ್ಯಾ ಬಾಲನ್ ಹೆಸರಿನಲ್ಲಿ ವಂಚನೆ
  • ಮುಂಬೈ ಪೊಲೀಸರಿಂದ ಎಫ್‌ಐಆರ್‌ ದಾಖಲು
Vidya Balan: ನಕಲಿ ಇನ್‌ಸ್ಟಾ ಐಡಿ.. ನಟಿ ವಿದ್ಯಾ ಬಾಲನ್ ಹೆಸರಿನಲ್ಲಿ ವಂಚನೆ! title=

Fraud in the name of Vidya Balan: ಒಂದೆಡೆ ಬಾಲಿವುಡ್ ನಟ-ನಟಿಯರು ಎಐ ಡೀಪ್‌ಫೇಕ್ ವೀಡಿಯೊಗಳಿಂದ ತೊಂದರೆಗೀಡಾಗಿದ್ದರೆ, ಮತ್ತೊಂದೆಡೆ ಡರ್ಟಿ ಪಿಕ್ಚರ್ ನಟಿ ವಿದ್ಯಾ ಬಾಲನ್ ಕೂಡ ಸಾಮಾಜಿಕ ಜಾಲತಾಣಗಳಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿದ್ಯಾ ಬಾಲನ್ ಅವರ ಹೆಸರಲ್ಲಿ ನಕಲಿ Instagram ಖಾತೆ ತೆರೆಯಲಾಗಿದೆ. 

ವಿದ್ಯಾ ಬಾಲನ್‌ ಹೆಸರಿನಲ್ಲಿ ತೆರೆದ ನಕಲಿ ಇನ್‌ಸ್ಟಾಗ್ರಾಮ್ ಖಾತೆಯಿಂದ ವಂಚನೆಯಾಗುತ್ತಿರುವ ಆರೋಪ ಕೇಳಿಬಂದಿದೆ. ನಟಿ ವಿದ್ಯಾ ಬಾಲನ್‌ ಈ ವಿಷಯದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: Akaay Meaning: ಅನುಷ್ಕಾ ವಿರಾಟ್ ಪುತ್ರನ ಹೆಸರು ʻಅಕಾಯ್ʼ ನಿಜವಾದ ಅರ್ಥವೇನು?

ವಿದ್ಯಾ ಬಾಲನ್ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆಯನ್ನು ರಚಿಸಿದ ವ್ಯಕ್ತಿ ತಾನೇ ವಿದ್ಯಾ ಬಾಲನ್ ಎಂದು ಪೋಸ್ ಕೊಟ್ಟು ಜನರಿಂದ ಹಣ ಸುಲಿಗೆ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ನಟಿ ವಿದ್ಯಾ ಬಾಲನ್ ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಿದ್ದಾರೆ. ಅಪರಿಚಿತ ವ್ಯಕ್ತಿಯೊಬ್ಬರು ತಮ್ಮ ಹೆಸರಿನಲ್ಲಿ ನಕಲಿ ಇನ್‌ಸ್ಟಾಗ್ರಾಮ್ ಖಾತೆಯನ್ನು ಸೃಷ್ಟಿಸಿ ಜನರಿಂದ ಹಣಕ್ಕೆ ಬೇಡಿಕೆಯಿಡುತ್ತಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ನಕಲಿ ಇನ್‌ಸ್ಟಾಗ್ರಾಮ್ ಐಡಿ ಜೊತೆ ಜಿಮೇಲ್ ಖಾತೆಯನ್ನು ಸಹ ರಚಿಸಲಾಗಿದೆ ಎಂದು ಈ ಎಫ್‌ಐಆರ್‌ನಲ್ಲಿ ಆರೋಪಿಸಲಾಗಿದೆ. ನಕಲಿ ಇನ್‌ಸ್ಟಾಗ್ರಾಮ್ ಐಡಿ ಮತ್ತು ಜಿಮೇಲ್ ಖಾತೆಯನ್ನು ರಚಿಸುವ ಮೂಲಕ, ಅಪರಿಚಿತ ವ್ಯಕ್ತಿಯೊಬ್ಬರು ಬಾಲಿವುಡ್ ಇಂಡಸ್ಟ್ರಿಗೆ ಸಂಬಂಧಿಸಿದ ಜನರನ್ನು ಸಂಪರ್ಕಿಸುತ್ತಿದ್ದರು ಮತ್ತು ಉದ್ಯೋಗದ ಭರವಸೆ ನೀಡಿ ಹಲವರಿಂದ ಹಣಕ್ಕಾಗಿ ಬೇಡಿಕೆಯಿಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ವಿದ್ಯಾ ಬಾಲನ್ ಅವರ ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. 

ಇದನ್ನೂ ಓದಿ: Deepika Padukone pregnant: ದೀಪಿಕಾಗೆ ಈಗ ಇಷ್ಟು ತಿಂಗಳಂತೆ.. ಮೊದಲ ಮಗುವಿನ ನಿರೀಕ್ಷೆಯಲ್ಲಿ ದೀಪ್‌ವೀರ್‌ ಜೋಡಿ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News