ನವದೆಹಲಿ: ಭಾರತೀಯ ಚಿತ್ರರಂಗದ ಸ್ಟಾರ್ ನಿರ್ದೇಶಕ ಎಸ್.ಎಸ್.ರಾಜಮೌಳಿಯವರ RRR ಸಿನಿಮಾ ದೇಶ-ವಿದೇಶಗಳಲ್ಲಿ ಅಪಾರ ಮೆಚ್ಚುಗೆ ಗಳಿಸಿತ್ತು. ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ್ದ ಈ ಪ್ಯಾನ್ ಇಂಡಿಯಾ ಸಿನಿಮಾ ಅನೇಕ ದಾಖಲೆಗಳನ್ನು ನಿರ್ಮಿಸಿತ್ತು. ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ ರೇಸ್‍ನಲ್ಲಿರುವ RRRಗೆ ಇದೀಗ ಮತ್ತೊಂದು ಗರಿಮೆ ದೊರೆತಿದೆ.
ಹೌದು, RRR ಸಿನಿಮಾದ ಸೂಪರ್ ಹಿಟ್ ಹಾಡು ‘ನಾಟು ನಾಟು’ ಹಾಡಿಗೆ ಜಾಗತಿಕ ‘ಗೋಲ್ಡನ್ ಗ್ಲೋಬ್' ಅವಾರ್ಡ್ ಸಿಕ್ಕಿದೆ. ಅತ್ಯುತ್ತಮ ಮೂಲ ಗೀತೆ(Best Original Song)ಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ದೊರೆತಿದೆ. 2 ವಿಭಾಗಗಳಲ್ಲಿ RRR ನಾಮನಿರ್ದೇಶನಗೊಂಡಿತ್ತು. ಈ ಪೈಕಿ ‘ನಾಟು ನಾಟು’ ಹಾಡಿಗೆ ಪ್ರಶಸ್ತಿ ದೊರೆತಿದೆ.
And the GOLDEN GLOBE AWARD FOR BEST ORIGINAL SONG Goes to #NaatuNaatu #GoldenGlobes #GoldenGlobes2023 #RRRMovie
— RRR Movie (@RRRMovie) January 11, 2023
ಆದರೆ ಅತ್ಯುತ್ತಮ ಇಂಗ್ಲಿಷ್ ಅಲ್ಲದ ಭಾಷಾ ಚಲನಚಿತ್ರ ಪ್ರಶಸ್ತಿ RRR ಕೈತಪ್ಪಿದೆ. ಇದು ಅರ್ಜೆಂಟೀನಾದಿಂದ 1985ರಲ್ಲಿ ಅರ್ಜೆಂಟೀನಾದಿಂದ ಗೆದ್ದ ಅತ್ಯುತ್ತಮ ಇಂಗ್ಲಿಷ್ ಅಲ್ಲದ ಭಾಷಾ ಚಲನಚಿತ್ರದಿಂದ ತಪ್ಪಿಸಿಕೊಂಡಿದೆ ಎಂದು ವರದಿಯಾಗಿದೆ. ಆಲ್ ಕ್ವೈಟ್ ಆನ್ ದಿ ವೆಸ್ಟರ್ನ್ ಫ್ರಂಟ್(ಜರ್ಮನಿ), ಕ್ಲೋಸ್(ಬೆಲ್ಜಿಯಂ), ಡಿಸಿಷನ್ ಟು ಲೀವ್ (ದಕ್ಷಿಣ ಕೊರಿಯಾ) ಚಲನಚಿತ್ರಗಳು ಸಹ ಈ ವಿಭಾಗದಲ್ಲಿ ನಾಮನಿರ್ದೇಶನಗೊಂಡಿದ್ದವು.
ಇದನ್ನೂ ಓದಿ: ಬೆತ್ತಲಾಗಿ ಸ್ನಾನ ಮಾಡುತ್ತಿರುವ ವಿಡಿಯೋ ಹಂಚಿಕೊಂಡ ಗಾಯಕಿ..! ಫ್ಯಾನ್ಸ್ ಶಾಕ್
RRR ಚಿತ್ರದ ಸಂಗೀತ ನಿರ್ದೇಶಕ ಎಂ.ಎಂ.ಕೀರವಾಣಿಯವರು ಗೋಲ್ಡನ್ ಗ್ಲೋಬ್ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿ ಸಮಾರಂಭದಲ್ಲಿ ನಿರ್ದೇಶಕ ಎಸ್.ಎಸ್.ರಾಜಮೌಳಿ, ಜೂನಿಯರ್ NTR ಮತ್ತು ರಾಮ್ ಚರಣ್ ಹಾಗೂ ಅವರ ಪತ್ನಿ ಉಪಾಸನಾ ಕಾಮಿನೇನಿ ಭಾಗಿಯಾಗಿದ್ದರು. RRR ಸಿನಿಮಾದ ಅಧಿಕೃತ ಟ್ವಿಟರ್ ಖಾತೆಯಲ್ಲಿ ಪ್ರತಿಷ್ಠಿತ ಪ್ರಶಸ್ತಿ ಘೋಷಣೆಯ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋದಲ್ಲಿ ಎಂ.ಎಂ.ಕೀರವಾಣಿ ಪ್ರಶಸ್ತಿ ಸ್ವೀಕರಿಸಲು ವೇದಿಕೆಗೆ ತೆರಳುತ್ತದ್ದಂತೆಯೇ ರಾಜಮೌಳಿ, ಜೂ. NTR ಮತ್ತು ರಾಮಚರಣ್ ಮತ್ತು ಚಿತ್ರತಂಡದ ಇನ್ನಿತರ ಸದಸ್ಯರು ಹರ್ಷ ವ್ಯಕ್ತಪಡಿಸುತ್ತಿರುವುದನ್ನು ಕಾಣಬಹುದಾಗಿದೆ.
ಬ್ಲಾಕ್‌ಬಸ್ಟರ್ RRR ಸಿನಿಮಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಕೊಮರಂ ಭೀಮ್ ಮತ್ತು ಅಲ್ಲೂರಿ ಸೀತಾರಾಮರಾಜುರವರ ಪಾತ್ರದಲ್ಲಿ ಜೂನಿಯರ್ NTR ಮತ್ತು ರಾಮ್ ಚರಣ್ ಕಾಣಿಸಿಕೊಂಡಿದ್ದಾರೆ. ಇದು 1920ರಲ್ಲಿ ಬ್ರಿಟಿಷ್ ಆಕ್ರಮಿತ ಭಾರತದ ಕತೆ ಆಧರಿಸಿರುವ ಚಿತ್ರವಾಗಿದೆ. ಬಾಲಿವುಡ್ ನಟಿ ಆಲಿಯಾ ಭಟ್ ಮತ್ತು ಅಜಯ್ ದೇವಗನ್ ಜೊತೆಗೆ ಬ್ರಿಟಿಷ್ ನಟರಾದ ರೇ ಸ್ಟೀವನ್ಸನ್, ಅಲಿಸನ್ ಡೂಡಿ ಮತ್ತು ಒಲಿವಿಯಾ ಮೋರಿಸ್ ಸಹ ನಟಿಸಿದ್ದಾರೆ.
Music composer MM Keeravani poses with the #GoldenGlobes 2023 award, as his “Naatu Naatu” from RRR wins Best Original Song.
(Pic: RRR Movie's Twitter handle) https://t.co/2rzhedLNmk pic.twitter.com/rZigZMpiAC
— ANI (@ANI) January 11, 2023
ಜಾಗತಿಕ ಬಾಕ್ಸ್ ಆಫೀಸ್‍ನಲ್ಲಿ RRR 1,200 ಕೋಟಿ ರೂ.ಗಿಂತಲೂ ಹೆಚ್ಚು ಗಳಿಸಿದೆ. ನ್ಯೂಯಾರ್ಕ್ ಫಿಲ್ಮ್ ಕ್ರಿಟಿಕ್ಸ್ ಸರ್ಕಲ್ ಪ್ರಶಸ್ತಿ ವಿಭಾಗದಲ್ಲಿ ಎಸ್.ಎಸ್.ರಾಜಮೌಳಿ ಅತ್ಯುತ್ತಮ ನಿರ್ದೇಶಕ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇದಲ್ಲದೆ RRR ಆಸ್ಕರ್ ಪ್ರಶಸ್ತಿ ರೇಸ್‌ನಲ್ಲಿದ್ದು, ಕನಿಷ್ಠ ಒಂದಾದರೂ ವಿಭಾಗದಲ್ಲಿ ನಾಮನಿರ್ದೇಶನಗೊಳ್ಳುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಕೋಮಲ್ ಕುಮಾರ್ ʼಕಾಲಾಯ ನಮಃʼ ಚಿತ್ರದಲ್ಲಿ ನಟ ಪ್ರಕಾಶ್ ರೈ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.