ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ‘ಭೈರತಿ ರಣಗಲ್’ ಚಿತ್ರ ಮೊದಲು ತಿಳಿಸಿದಂತೆ ಆಗಸ್ಟ್ 15 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರದಿಂದ ಚಿತ್ರ ಬಿಡುಗಡೆ ಮುಂದೆ ಹೋಗಿತ್ತು. ಆನಂತರ ಅಭಿಮಾನಿಗಳು ಈ ಚಿತ್ರ ಯಾವಾಗ ಬಿಡುಗಡೆಯಾಗಬಹುದೆಂದು ಕಾತುರದಿಂದ ಕಾಯುತ್ತಿದ್ದರು. ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 15 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
ಬೆಂಗಳೂರಿನ ಯಲಹಂಕದಲ್ಲಿರುವ ಗೆಲರಿಯಾ ಮಾಲ್‍ನಲ್ಲಿ ಇದೇ ಮೊದಲ ಬಾರಿಗೆ ವಿನೂತನವಾಗಿ ನಿರ್ಮಿಸಲಾಗಿದ್ದ ಅತೀ ದೊಡ್ಡ graffiti art ಅನ್ನು ಅನಾವರಣಗೊಳಿಸುವ ಮೂಲಕ "ಭೈರತಿ ರಣಗಲ್" ಚಿತ್ರದ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಯಿತು. ನಿರ್ಮಾಪಕಿ ಗೀತಾ ಶಿವರಾಜಕುಮಾರ್, ನಿರ್ದೇಶಕ ನರ್ತನ್ ಹಾಗೂ ನಿವೇದಿತಾ ಶಿವರಾಜಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಹಸ್ರಾರು ಅಭಿಮಾನಿಗಳು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. graffiti art ನಲ್ಲಿ ಮೂಡಿಬಂದ ಶಿವರಾಜಕುಮಾರ್ ಅವರ ಲುಕ್ ಗೆ ಅಭಿಮಾನಿಗಳು ಫಿದಾ ಆದರು.
ಇದನ್ನೂ ಓದಿ: Split ends: ಸೀಳಿದ ತುದಿಯ ಕಾರಣ ಕೂದಲು ಬೆಳೆಯುತ್ತಿಲ್ಲವೇ? ಈ ಟಿಪ್ಸ್ ಬಳಸಿ ಹಾವಿನಂತಹ ಜಡೆ ನಿಮ್ಮದಾಗುತ್ತೆ
ಬಿಡುಗಡೆ ದಿನಾಂಕ ಘೋಷಣೆಯಾದ ನಂತರ ಮಾತನಾಡಿದ ನಿರ್ಮಾಪಕಿ ಗೀತಾ ಶಿವರಾಜಕುಮಾರ್ ಅವರು, "ಭೈರತಿ ರಣಗಲ್" ನಮ್ಮ ಸಂಸ್ಥೆಯಿಂದ ನಿರ್ಮಾಣವಾಗಿರುವ ಎರಡನೇ ಚಿತ್ರ. ನಮ್ಮ ಸಂಸ್ಥೆಯ ಮೊದಲ ಚಿತ್ರ "ವೇದ" ಗೆ ನೀವೆಲ್ಲಾ ನೀಡಿದ ಪ್ರೋತ್ಸಾಹಕ್ಕೆ ಧನ್ಯವಾದ. ಈ ಚಿತ್ರಕ್ಕೂ ನಿಮ್ಮೆಲ್ಲರ ಪ್ರೋತ್ಸಾಹವಿರಲಿ. ಇಂದು ನಿಮ್ಮೆಲ್ಲರ ಸಮ್ಮುಖದಲ್ಲಿ ವಿನೂತನ ರೀತಿಯಲ್ಲಿ ಬಿಡುಗಡೆಯ ದಿನಾಂಕ ಅನೌನ್ಸ್ ಆಗಿದೆ. ಮುಂದೆ ಬೆಳಗಾವಿಯಲ್ಲೂ ಈ ಚಿತ್ರದ ಕುರಿತಾದ ಕಾರ್ಯಕ್ರಮ ನಡೆಯಲಿದೆ ಎಂದರು.
ಚಿತ್ರದ ಬಿಡುಗಡೆ ದಿನಾಂಕವನ್ನು ವಿಭಿನ್ನವಾಗಿ ಅನೌನ್ಸ್ ಮಾಡಲು ನಿರ್ಧರಿಸಲಾಗಿತ್ತು. ಇದೇ ಮೊದಲ ಬಾರಿಗೆ 4800 ವಿಸ್ತೀರ್ಣದ ಬೃಹತ್ graffiti art ಅನಾವರಣ ಮಾಡುವ ಮೂಲಕ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಸಹಸ್ರಾರು ಅಭಿಮಾನಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದೀರಿ. ನಿಮಗೆಲ್ಲಾ ಅನಂತ ಧನ್ಯವಾದ. ನವೆಂಬರ್ 15 ರಂದು ಚಿತ್ರ ಬಿಡುಗಡೆಯಾಗಲಿದೆ. ನಮ್ಮ ಚಿತ್ರವನ್ನು ಎಲ್ಲರೂ ಚಿತ್ರಮಂದಿರಗಳಿಗೆ ಬಂದು ನೋಡುವ ಮೂಲಕ ಪ್ರೋತ್ಸಾಹ ನೀಡಿ ಎಂದರು ನಿರ್ದೇಶಕ ನರ್ತನ್.
ಇದನ್ನೂ ಓದಿ- ಅಂಬಾನಿ-ಅದಾನಿಗೆ ಟಕ್ಕರ್ ನೀಡಲು ಮುಂದಾದ ಟಾಟಾ: ಈ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಸಜ್ಜು!
'ಮಫ್ತಿ' ಚಿತ್ರದ ಪ್ರೀಕ್ವೆಲ್ ಆಗಿರುವ 'ಭೈರತಿ ರಣಗಲ್’ ಚಿತ್ರವನ್ನು ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದಾರೆ.ನರ್ತನ್ ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಶಿವರಾಜಕುಮಾರ್, ರುಕ್ಮಿಣಿ ವಸಂತ್, ರಾಹುಲ್ ಬೋಸ್, ಅವಿನಾಶ್, ದೇವರಾಜ್, ಮಧು ಗುರುಸ್ವಾಮಿ, ಛಾಯಾ ಸಿಂಗ್, ಬಾಬು ಹಿರಣ್ಣಯ್ಯ ಮುಂತಾದವರಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ ಮತ್ತು ರವಿ ಬಸ್ರೂರು ಅವರ ಸಂಗೀತ ನಿರ್ದೇಶನ "ಭೈರತಿ ರಣಗಲ್" ಚಿತ್ರಕ್ಕಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ