ಹೊಂಬಾಳೆ ಫಿಲಂಸ್‌ ಪ್ಯಾನ್‌ ಇಂಡಿಯಾ ಸಿನಿಮಾಗೆ ಮೂಹೂರ್ತ : ಫಾಸಿಲ್‌-ಅಪರ್ಣಗೆ ಪವನ್‌ ಡೈರೆಕ್ಷನ್‌..!

ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ "ಧೂಮಂ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, "ಲೂಸಿಯಾ" ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ.

Written by - YASHODHA POOJARI | Edited by - Krishna N K | Last Updated : Oct 9, 2022, 04:22 PM IST
  • ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಪವನ್ ಕುಮಾರ್ ನಿರ್ದೇಶನ
  • ಮಾಲಿವುಡ್‌ ಸ್ಟಾರ್‌ ನಟ ಫಹಾದ್ ಫಾಸಿಲ್ ಹಾಗೂ ಅಪರ್ಣ ಬಾಲಮುರಳಿ ನಟನೆ
  • ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ ಪ್ಯಾನ್‌ ಇಂಡಿಯಾ ಚಿತ್ರ
ಹೊಂಬಾಳೆ ಫಿಲಂಸ್‌ ಪ್ಯಾನ್‌ ಇಂಡಿಯಾ ಸಿನಿಮಾಗೆ ಮೂಹೂರ್ತ : ಫಾಸಿಲ್‌-ಅಪರ್ಣಗೆ ಪವನ್‌ ಡೈರೆಕ್ಷನ್‌..! title=

ಬೆಂಗಳೂರು : ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ "ಧೂಮಂ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, "ಲೂಸಿಯಾ" ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ.

ಮಲೆಯಾಳಂನ ಹೆಸರಾಂತ ನಟ ಫಹಾದ್ ಫಾಸಿಲ್ ಹಾಗೂ ಅಪರ್ಣ ಬಾಲಮುರಳಿ(ಸೂರರೈ ಪೊಟ್ರು) ನಾಯಕ-  ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ಮೊದಲ ಸನ್ನಿವೇಶಕ್ಕೆ  ಮಂಜುನಾಥ್ ಕಿರಗಂದೂರು ಆರಂಭ ಫಲಕ ತೋರಿದರು. ಶೈಲಜಾ ವಿಜಯ್ ಕಿರಗಂದೂರು ಕ್ಯಾಮೆರಾಗೆ ಚಾಲನೆ ನೀಡಿದರು. ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು ʼಕೆಜಿಎಫ್ʼ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಆಗಮಿಸಿ ಶುಭ ಕೋರಿದರು. ಮುಂದಿನ ತಿಂಗಳಿನಿಂದ ʼಧೂಮಂʼ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ಇದನ್ನೂ ಓದಿ: ʼಅಪ್ಪು ಕಪ್ʼ ಲೋಗೋ ಲಾಂಚ್ : ಇದೇ ತಿಂಗಳ 21ರಿಂದ ʼಸ್ಯಾಂಡಲ್‌ವುಡ್ ಬ್ಯಾಡ್ಮಿಂಟನ್ ಲೀಗ್ʼ

ಪೂರ್ಣಚಂದ್ರ ತೇಜಸ್ವಿ ಸಂಗೀತ ನಿರ್ದೇಶನ ಹಾಗೂ ಪ್ರೀತಾ ಜಯರಾಮನ್ ಛಾಯಾಗ್ರಹಣ ʼಧೂಮಂʼ ಚಿತ್ರಕ್ಕಿದೆ. ಒಂದರ ಮೇಲೆ ಒಂದು ಹಿಟ್ ಚಿತ್ರಗಳನ್ನು ನೀಡುತ್ತಿರುವ ಹೊಂಬಾಳೆ ಫಿಲಂಸ್ ಹಾಗೂ ಪ್ರತಿಭಾವಂತ ನಿರ್ದೇಶಕ ಪವನ್ ಕುಮಾರ್ ಕಾಂಬಿನೇಶನ್ ನಲ್ಲಿ‌ ಬರುತ್ತಿರುವ ಈ ಚಿತ್ರದ ಪೋಸ್ಟರ್ ಈಗಾಗಲೇ ಕುತೂಹಲ ಹುಟ್ಟಿಸಿದೆ. ʼಧೂಮಂʼ ಬಗ್ಗೆ ಅಭಿಮಾನಿ ವಲಯದಲ್ಲಿ ಸಾಕಷ್ಟು ನಿರೀಕ್ಷೆಯಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News