Anushka Sharma Pregnant: ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ವಿರುಷ್ಕಾ!?

ಕ್ರಿಕೆಟರ್‌ ವಿರಾಟ್ ಕೊಹ್ಲಿ ಪತ್ನಿ ನಟಿ ಅನುಷ್ಕಾ ಶರ್ಮಾ ಎರಡನೇ ಬಾರಿ ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಆಸ್ಪತ್ರೆಯಿಂದ ಕಾರಿನಲ್ಲಿ ಬರುತ್ತಿರುವುದನ್ನು ಫೋಟೋಗ್ರಾಫರ್ ಒಬ್ಬರು ವಿಡಿಯೋ ಮಾಡಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. 

Written by - Chetana Devarmani | Last Updated : Jun 14, 2022, 04:08 PM IST
  • ಕ್ರಿಕೆಟರ್‌ ವಿರಾಟ್ ಕೊಹ್ಲಿ ಪತ್ನಿ ನಟಿ ಅನುಷ್ಕಾ ಶರ್ಮಾ
  • ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ವಿರುಷ್ಕಾ!?
  • ಫೋಟೋಗ್ರಾಫರ್ ಒಬ್ಬರು ಮಾಡಿದ್ದ ವಿಡಿಯೋ ಎಲ್ಲೆಡೆ ವೈರಲ್‌
Anushka Sharma Pregnant: ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ವಿರುಷ್ಕಾ!?  title=
ನಟಿ ಅನುಷ್ಕಾ ಶರ್ಮಾ

ಕ್ರಿಕೆಟರ್‌ ವಿರಾಟ್ ಕೊಹ್ಲಿ ಪತ್ನಿ ನಟಿ ಅನುಷ್ಕಾ ಶರ್ಮಾ ಎರಡನೇ ಬಾರಿ ಗರ್ಭಿಣಿಯಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಆಸ್ಪತ್ರೆಯಿಂದ ಕಾರಿನಲ್ಲಿ ಬರುತ್ತಿರುವುದನ್ನು ಫೋಟೋಗ್ರಾಫರ್ ಒಬ್ಬರು ವಿಡಿಯೋ ಮಾಡಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. 

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಪತ್ನಿ ನಟಿ ಅನುಷ್ಕಾ ಶರ್ಮಾ ಮತ್ತು ಮಗಳು ವಾಮಿಕಾ ಅವರೊಂದಿಗೆ ವಿಹಾರಕ್ಕೆ ಮಾಲ್ಡೀವ್ಸ್‌ಗೆ ತೆರಳಿದ್ದರು. ಅಲ್ಲಿ ಕೆಲವು ದಿನ ಎಂಜಾಯ್ ಮಾಡಿದ ಕೊಹ್ಲಿ ದಂಪತಿ ಸೋಮವಾರ (ಜೂನ್ 13) ಮರಳಿದ್ದಾರೆ. ಸೋಮವಾರ ಮಧ್ಯಾಹ್ನ ಮುಂಬೈ ವಿಮಾನ ನಿಲ್ದಾಣದಲ್ಲಿ ದಂಪತಿಗಳು ಕಾಣಿಸಿಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ಕ್ಯಾಮರಾಗೆ ಪೋಸ್ ನೀಡಿದರು.

ಇದನ್ನೂ ಓದಿ: ಟೀಂ ಇಂಡಿಯಾದ ಈ ಕ್ರಿಕೆಟಿಗರ ಪತ್ನಿಯರು ಯಾವುದೇ ಬಾಲಿವುಡ್‌ ಬ್ಯೂಟಿಗಳಿಗಳೂ ಕಮ್ಮಿಯಿಲ್ಲ!

ಆದರೆ ರಜೆ ಮುಗಿಸಿ ವಾಪಸಾದ ಕೆಲವೇ ಗಂಟೆಗಳಲ್ಲಿ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಆಸ್ಪತ್ರೆಗೆ ಭೇಟಿ ನೀಡಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹಾಟ್ ಟಾಪಿಕ್ ಆಗಿದೆ. ಸೋಮವಾರ ಸಂಜೆ ಮುಂಬೈನ ಕೋಕಿಲಾ ಬೆನ್ ಅಂಬಾನಿ ಆಸ್ಪತ್ರೆಯಲ್ಲಿ ದಂಪತಿಗಳು ಕಾಣಿಸಿಕೊಂಡಿದ್ದಾರೆ. ಇವರಿಬ್ಬರು ಆಸ್ಪತ್ರೆಯಿಂದ ಕಾರಿನಲ್ಲಿ ಹೊರಡುತ್ತಿರುವುದನ್ನು ಛಾಯಾಗ್ರಾಹಕರೊಬ್ಬರು ಚಿತ್ರೀಕರಿಸಿದ್ದಾರೆ. ವಿಡಿಯೋ ವೈರಲ್ ಆಗಿದೆ. ಇದನ್ನು ಕಂಡ ನೆಟ್ಟಿಗರು, 'ಅನುಷ್ಕಾ ಶರ್ಮಾ ಮತ್ತೆ ಗರ್ಭಿಣಿಯಾದ್ರಾ?' ಎಂದು ಪ್ರಶ್ನಿಸುತ್ತಿದ್ದಾರೆ.  

 

 

ಅನುಷ್ಕಾ ಆಗಾಗ ತಮ್ಮ ವಿಚಾರಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ. ಆದರೆ, ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಅವರು ಆಸ್ಪತ್ರೆಗೆ ಭೇಟಿ ನೀಡಿದ ಕಾರಣವನ್ನು ಬಹಿರಂಗಪಡಿಸಲಿಲ್ಲ. ಶಾಂಪೂ ಜಾಹೀರಾತಿಗಾಗಿ ಕೊಹ್ಲಿ ಮತ್ತು ಅನುಷ್ಕಾ ಭೇಟಿಯಾಗಿ ಪ್ರೀತಿಸಿ ಮದುವೆಯಾದರು. ವಾಮಿಕಾ ಜನವರಿ 2021 ರಲ್ಲಿ ಜನಿಸಿದರು.

ಬಾಲಿವುಡ್ ನ ಸ್ಟಾರ್ ಹೀರೋಯಿನ್ ಗಳಲ್ಲಿ ಅನುಷ್ಕಾ ಶರ್ಮಾ ಕೂಡ ಒಬ್ಬರು. 2008 ರಲ್ಲಿ 'ರಬ್ ನೆ ಬನಾದಿ ಜೋಡಿ' ಚಿತ್ರದ ಮೂಲಕ ಅನುಷ್ಕಾ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ಈ ಚಿತ್ರ ಭಾರೀ ಹಿಟ್ ಆಗಿದ್ದು ಆಕೆಗೆ ಸಾಲು ಸಾಲು ಅವಕಾಶಗಳು ಬಂದವು. ಅಮೀರ್ ಖಾನ್, ಶಾಹಿದ್ ಕಪೂರ್, ಅಕ್ಷಯ್ ಕುಮಾರ್, ರಣಬೀರ್ ಕಪೂರ್ ಮತ್ತು ಸಲ್ಮಾನ್ ಖಾನ್ ಅವರೊಂದಿಗೆ ನಟಿಸಿದ್ದಾರೆ. ಅನುಷ್ಕಾ ಬದ್ಮಾಶ್ ಕಂಪನಿ, ಬ್ಯಾಂಡ್ ಬಾಜಾ ಬಾರಾತ್, ಪಿಕೆ, ಬಾಂಬೆ ವೆಲ್ವೆಟ್, ಸುಲ್ತಾನ್, ಪರಿ, ಸಂಜು, ಝೀರೋ ಮುಂತಾದ ಹಿಟ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ತದನಂತರ ಮದುವೆಯಾಗಿ ಸಿನಿಮಾಗಳಿಗೆ ಸ್ವಲ್ಪ ಗ್ಯಾಪ್ ಕೊಟ್ಟರು. 

ಇದನ್ನೂ ಓದಿ: ತಮ್ಮ ಗುಣದಂದಲೇ ಜನಪ್ರಿಯತೆ ಪಡೆಯುತ್ತಾರೆ ಈ ರಾಶಿಯವರು!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News