Jacqueline Fernandez: ನಟಿ ಜಾಕ್ವೆಲಿನ್ ಫರ್ನಾಂಡಿಸ್ ನಿವಾಸದಲ್ಲಿ ಬೆಂಕಿ, ಆತಂಕದಲ್ಲಿ ಫ್ಯಾನ್ಸ್ !!

Fire At Jacqueline Fernandez Building: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದ ಜಾಕ್ವೆಲಿನ್ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. 

Written by - Chetana Devarmani | Last Updated : Mar 7, 2024, 08:16 AM IST
  • ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್
  • ಜಾಕ್ವೆಲಿನ್ ಫರ್ನಾಂಡಿಸ್ ನಿವಾಸದಲ್ಲಿ ಬೆಂಕಿ
  • ಜಾಕ್ವೆಲಿನ್ ಕಟ್ಟಡದ ಅಗ್ನಿ ಅವಘಡದ ವಿಡಿಯೋ ವೈರಲ್‌
Jacqueline Fernandez: ನಟಿ ಜಾಕ್ವೆಲಿನ್ ಫರ್ನಾಂಡಿಸ್ ನಿವಾಸದಲ್ಲಿ ಬೆಂಕಿ, ಆತಂಕದಲ್ಲಿ ಫ್ಯಾನ್ಸ್ !! title=

Jacqueline Fernandez Building Fire Updates: ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಈ ಘಟನೆಯ ವಿಡಿಯೋವೊಂದು ವೈರಲ್ ಆಗಿದ್ದು, ಜಾಕ್ವೆಲಿನ್ ಅಭಿಮಾನಿಗಳಲ್ಲಿ ಆತಂಕ ಹೆಚ್ಚಾಗಿದೆ. ಕಟ್ಟಡದ ಮೇಲಿನ ಎರಡನೇ ಮಹಡಿಯ ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಬೆಂಕಿಯ ಜ್ವಾಲೆಗಳು ಹೊರಬರುವುದನ್ನು ವಿಡಿಯೋದಲ್ಲಿ ಕಾಣಬಹುದು. 

ನಟಿ ಜಾಕ್ವೆಲಿನ್ ಸಹ ಇದೇ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಬೆಂಕಿ ಹೊತ್ತಿಕೊಂಡ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದಾರೆ. ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ ಎಂದು ಹೇಳಲಾಗಿದೆ. ಘಟನಾ ಸ್ಥಳದಿಂದ ಇದುವರೆಗೆ ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ.  

ಇದನ್ನೂ ಓದಿ:  ವಿಚ್ಛೇದನಕ್ಕೆ ಇದೇ ಕಾರಣ.. ನಯನತಾರಾ - ವಿಘ್ನೇಶ್‌ ಶಿವನ್‌ ಸಂಸಾರದಲ್ಲಿ ಬಿರುಕು ಮೂಡಿದ್ದು ಇಲ್ಲಿಂದಲೇ !? 

ವರದಿಗಳ ಪ್ರಕಾರ, ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಾಗ ಜಾಕ್ವೆಲಿನ್ ಫರ್ನಾಂಡಿಸ್ ಮನೆಯಲ್ಲಿ ಇರಲಿಲ್ಲ. ಅವರು ಪ್ರಸ್ತುತ ಕೆಲವು ಕೆಲಸಗಳಿಗಾಗಿ ದುಬೈನಲ್ಲಿ ಸಮಯ ಕಳೆಯುತ್ತಿದ್ದಾರೆ. 

ಜಾಕ್ವೆಲಿನ್ ಪ್ರಸ್ತುತ ಅಕ್ಷಯ್ ಕುಮಾರ್ ಅವರ ಮಲ್ಟಿ-ಸ್ಟಾರರ್ ಚಿತ್ರ 'ವೆಲ್ಕಮ್ ಟು ಜಂಗಲ್' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದಲ್ಲದೆ 'ಫತೇಹ್' ಚಿತ್ರದಲ್ಲೂ ಕಾಣಿಸಿಕೊಳ್ಳಲಿದ್ದಾರೆ. ಜಾಕ್ವೆಲಿನ್ ಅವರನ್ನು ಮತ್ತೆ ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. 

ಇದನ್ನೂ ಓದಿ: ಈ ಸೂಪರ್‌ಸ್ಟಾರ್ ಗೆ ಕಾಡಿತ್ತು ಅಂಗವೈಕಲ್ಯ.. ದೌರ್ಜನ್ಯಕ್ಕೆ ಒಳಗಾಗಿ ಜೀವನವೇ ಮುಗೀತು ಅಂದುಕೊಂಡಿದ್ದ ಈತ ಈಗ 3000 ಕೋಟಿ ಒಡೆಯ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News