ಹಿರಿಯ ನಟ ಜಗ್ಗೇಶ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ರಾಜ್ಯಸಭೆಯಲ್ಲಿ ಇಂದು ಕನ್ನಡದಲ್ಲಿಯೇ ಜಗ್ಗೇಶ್ ಪ್ರಮಾಣವಚನ ಸ್ವೀಕರಿಸಿದ್ದು, ಎಲ್ಲರ ಗಮನಸೆಳೆಯುತ್ತಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇದನ್ನೂ ಓದಿ: ಶಿಂಷಾ ಮಾರಮ್ಮನಿಗೆ ಇಂಗ್ಲೀಷ್ ನಲ್ಲಿ ಪತ್ರ: ಬಗೆ ಬಗೆಯ ಬೇಡಿಕೆಗಳು, ಹರಕೆಗಳು!!
ಗುರು ರಾಘವೇಂದ್ರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನಟ ಜಗ್ಗೇಶ್, ಬಳಿಕ ಕುಳಿತುಕೊಂಡು ಸಹಿ ಹಾಕುವುದರ ಮೂಲಕ ಅಧಿಕೃತವಾಗಿ ಇಂದಿನಿಂದ ರಾಜ್ಯಸಭೆ ಸದಸ್ಯರಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ನಟ ಜಗ್ಗೇಶ್, ಇಂದು ರಾಜ್ಯ ಸಭೆಯಲ್ಲಿ ಶ್ರದ್ಧೆಯಿಂದ ಪ್ರಮಾಣವಚನ ಸ್ವೀಕರಿಸಿದ್ದೇನೆ. ಸಿರಿಗನ್ನಡದಲ್ಲಿ ರಾಯರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು, ಇದು ನನ್ನ ಬದುಕಿನ ಶ್ರೇಷ್ಠ ಕ್ಷಣ ಎಂದು ಬಣ್ಣಿಸಿದ್ದಾರೆ.
ರಾಜ್ಯಸಭೆಯಲ್ಲಿ ಶ್ರದ್ಧೆಯಿಂದ
ಪ್ರಮಾಣವಚನ ಸಿರಿಗನ್ನಡದಲ್ಲಿ
ರಾಯರ ಹೆಸರಲ್ಲಿ ಸ್ವೀಕರಿಸಿದ ನನ್ನ ಬದುಕಿನ ಶ್ರೇಷ್ಠಕ್ಷಣ...
ಹೃದಯಪೂರ್ವಕ ಧನ್ಯವಾದ @narendramodi@BJP4Karnataka @BSBommai @blsanthosh @nalinkateel @arunbpbjp ರವರಿಗೆ🙏 pic.twitter.com/CCppTvZrmD— ನವರಸನಾಯಕ ಜಗ್ಗೇಶ್ (@Jaggesh2) July 8, 2022
ಇದನ್ನೂ ಓದಿ: Baby Olekar : ಒಂದು ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ PSI ಬೇಬಿ : ACB ಬಲೆಗೆ ಬಿದ್ದು ವಿಲ ವಿಲ!
ಪ್ರಧಾನಿ ಮೋದಿ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಕುಮಾರ್ ಅವರಿಗೆ ಹೃದಯಪೂರ್ವಕ ಧನ್ಯವಾದ ಎಂದಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.