ಅಪ್ಪು ಮುಡಿಗೆ ʼಕರ್ನಾಟಕ ರತ್ನʼ : ಗೆಳೆಯನ ಕಾರ್ಯಕ್ರಮದಲ್ಲಿ ಎನ್‌ಟಿಆರ್‌ ಭಾಗಿ..!

ನವೆಂಬರ್ 1ರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಟಾಲಿವುಡ್‌ ಖ್ಯಾತ ನಟ ಜ್ಯೂ. ಎನ್‌ಟಿಆರ್‌ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಹ್ವಾನ ನೀಡಿದ್ದಾರೆ. ಅಂದು ಡಾ. ಪುನೀತ್‌ ರಾಜಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಗೆಳೆಯನ ಅದ್ಭುತ ಕಾರ್ಯಕ್ರಮಕ್ಕೆ ನಂದಮೂರಿ ತಾರಕ ರಾಮರಾವ್‌ ಸಾಕ್ಷಿಯಾಗಲಿದ್ದಾರೆ.

Written by - Krishna N K | Last Updated : Oct 29, 2022, 04:57 PM IST
ಅಪ್ಪು ಮುಡಿಗೆ ʼಕರ್ನಾಟಕ ರತ್ನʼ : ಗೆಳೆಯನ ಕಾರ್ಯಕ್ರಮದಲ್ಲಿ ಎನ್‌ಟಿಆರ್‌ ಭಾಗಿ..! title=

ಬೆಂಗಳೂರು : ನವೆಂಬರ್ 1ರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವಂತೆ ಟಾಲಿವುಡ್‌ ಖ್ಯಾತ ನಟ ಜ್ಯೂ. ಎನ್‌ಟಿಆರ್‌ ಅವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಹ್ವಾನ ನೀಡಿದ್ದಾರೆ. ಅಂದು ಡಾ. ಪುನೀತ್‌ ರಾಜಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಗೆಳೆಯನ ಅದ್ಭುತ ಕಾರ್ಯಕ್ರಮಕ್ಕೆ ನಂದಮೂರಿ ತಾರಕ ರಾಮರಾವ್‌ ಸಾಕ್ಷಿಯಾಗಲಿದ್ದಾರೆ.

ಹೌದು.. ಕರ್ನಾಟಕ ವಿಧಾನಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎನ್‌ಟಿಆರ್ ಭಾಗವಹಿಸಲಿದ್ದಾರೆ. ಇದೇ ನವೆಂಬರ್‌ 1ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ತಾರಕ್ ಆಗಮಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕದ ಅತ್ಯುನ್ನತ ಪ್ರಶಸ್ತಿ 'ಕರ್ನಾಟಕ ರತ್ನ' ನೀಡಿ ಗೌರವಿಸಲಾಗುವುದು.

ಇದನ್ನೂ ಓದಿ: ಅಪ್ಪು ʼನೆನಪಿನ ಸಾಗರದಲ್ಲಿ' ಪತ್ರ ಬರೆದ ಅಶ್ವಿನಿ ಪುನೀತ್ ರಾಜ್‌ಕುಮಾರ್‌

ಪುನೀತ್ ರಾಜ್‌ಕುಮಾರ್ ಅವರೊಂದಿಗೆ ಜೂನಿಯರ್ ಎನ್‌ಟಿಆರ್ ಉತ್ತಮ ಸ್ನೇಹವನ್ನು ಹೊಂದಿದ್ದಾರೆ. ಈ ಹಿನ್ನೆಲೆ ಸಿಎಂ ಎನ್‌ಟಿಆರ್‌ಗೆ ಆಹ್ವಾನ ನೀಡಿದ್ದಾರೆ. ಇನ್ನು ಈ ಕಾರ್ಯಕ್ರಮಕ್ಕೆ ಬರಲು ತಾರಕ್ ಒಪ್ಪಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಇದೇ ಕಾರ್ಯಕ್ರಮಕ್ಕೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನೂ ಆಹ್ವಾನಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News