ನಿರ್ದೇಶನದತ್ತ ಮುಖ ಮಾಡಿದ ನೃತ್ಯ ನಿರ್ದೇಶಕ ಕಲೈ ಚಿತ್ರಕ್ಕೆ ಡೈನಾಮಿಕ್ ಪ್ರಿನ್ಸ್ ನಾಯಕ

23 ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ನಿರ್ದೇಶಕ  ಕಲೈ , ನೃತ್ಯ ನಿರ್ದೇಶಕರಾಗೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಮದನ್ - ಹರಿಣಿ, ಚಿನ್ನಿಪ್ರಕಾಶ್, ತ್ರಿಭುವನ್, ಫೈವ್ ಸ್ಟಾರ್ ಗಣೇಶ್ ಮುಂತಾದ ಹಿರಿಯ ನೃತ್ಯ ನಿರ್ದೇಶಕರೊಂದಿಗೆ ಕೆಲಸ‌ ಮಾಡಿರುವ ಕಲೈ, ಜನಪ್ರಿಯ ನಾಯಕರ 300ಕ್ಕೂ ಹೆಚ್ಚು ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಇದು ಕಲೈ ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರವಿದು. 

Written by - YASHODHA POOJARI | Edited by - Yashaswini V | Last Updated : Jul 21, 2023, 12:32 PM IST
  • ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು, ಹೆಚ್ಚಿನ ಭಾಗದ ‌ಚಿತ್ರೀಕರಣ ಅದ್ದೂರಿ ಸೆಟ್ ಗಳಲ್ಲೇ 80 ದಿನಗಳ ಕಾಲ ನಡೆಯಲಿದೆ.
  • ಆರು ಭರ್ಜರಿ ಫೈಟ್ ಗಳು ಹಾಗೂ ಆರು ಹಾಡುಗಳು ಈ ಚಿತ್ರದಲ್ಲಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ.
ನಿರ್ದೇಶನದತ್ತ  ಮುಖ ಮಾಡಿದ ನೃತ್ಯ ನಿರ್ದೇಶಕ ಕಲೈ ಚಿತ್ರಕ್ಕೆ ಡೈನಾಮಿಕ್ ಪ್ರಿನ್ಸ್ ನಾಯಕ  title=

ರಾಜಲಕ್ಷ್ಮೀ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಶ್ರೀಮತಿ ಪ್ರತಿಭಾ ಅವರು ನಿರ್ಮಾಣ ಮಾಡುತ್ತಿರುವ ಹಾಗೂ  ಕಲೈ ನಿರ್ದೇಶಿಸುತ್ತಿರುವ ನೂತನ ಚಿತ್ರದ ನಾಯಕರಾಗಿ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯಿಸುತ್ತಿದ್ದಾರೆ. ಸಾಮಾಜಿಕ ಕಳಕಳಿ ಹೊಂದಿರುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣ ಆರಂಭವಾಗಲಿದೆ. 

ನಿರ್ಮಾಪಕಿ ಪ್ರತಿಭಾ ಮಂಗಳೂರಿನ ಮೂಲದವರು. ಇಪ್ಪತ್ತುವರ್ಷಗಳಿಂದ ರಾಜಲಕ್ಷ್ಮೀ ಟ್ರಾವಲ್ಸ್ ನಡೆಸುತ್ತಿರುವ ಇವರು ನಿರ್ಮಿಸುತ್ತಿರುವ ಮೂರನೇ ಚಿತ್ರವಿದು.

ಇದನ್ನೂ ಓದಿ- Sapta Sagaradaache Yello: ‘ಸಪ್ತ ಸಾಗರದಾಚೆ ಎಲ್ಲೋ’ ಕೇಳುತ್ತಿದೆ ‘ಹೋರಾಟ’ದ ಹಾಡು

23 ವರ್ಷಗಳಿಂದ ಕನ್ನಡ ಚಿತ್ರರಂಗದೊಂದಿಗೆ ನಂಟಿರುವ ನಿರ್ದೇಶಕ  ಕಲೈ , ನೃತ್ಯ ನಿರ್ದೇಶಕರಾಗೂ ಕಾರ್ಯ ನಿರ್ವಹಿಸುತ್ತಿದ್ದಾರೆ. ಮದನ್ - ಹರಿಣಿ, ಚಿನ್ನಿಪ್ರಕಾಶ್, ತ್ರಿಭುವನ್, ಫೈವ್ ಸ್ಟಾರ್ ಗಣೇಶ್ ಮುಂತಾದ ಹಿರಿಯ ನೃತ್ಯ ನಿರ್ದೇಶಕರೊಂದಿಗೆ ಕೆಲಸ‌ ಮಾಡಿರುವ ಕಲೈ, ಜನಪ್ರಿಯ ನಾಯಕರ 300ಕ್ಕೂ ಹೆಚ್ಚು ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ಇದು ಕಲೈ ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರವಿದು. 

ಇದನ್ನೂ ಓದಿ- ಮಹೇಶ್ ಪುತ್ರಿಯ ಹೃದಯವಂತಿಕೆ..! ಬರ್ತ್‌ ಡೇಗೆ ಬಡ ಹೆಣ್ಣುಮಕ್ಕಳಿಗೆ ಸೈಕಲ್ ಗಿಫ್ಟ್‌ ನೀಡಿದ ಸಿತಾರಾ

ಅಕ್ಟೋಬರ್ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದ್ದು, ಹೆಚ್ಚಿನ ಭಾಗದ ‌ಚಿತ್ರೀಕರಣ ಅದ್ದೂರಿ ಸೆಟ್  ಗಳಲ್ಲೇ  80 ದಿನಗಳ ಕಾಲ ನಡೆಯಲಿದೆ. ಆರು ಭರ್ಜರಿ ಫೈಟ್ ಗಳು ಹಾಗೂ ಆರು ಹಾಡುಗಳು ಈ ಚಿತ್ರದಲ್ಲಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಶಂಕರ್ ಹಾಗೂ ಚಂದ್ರಮೌಳಿ(ಕೆ.ಜಿ.ಎಫ್ ಖ್ಯಾತಿ) ಈ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News