ಸುಮಧುರ ಹಾಡುಗಳಲ್ಲಿ "ಕಾಣೆಯಾಗಿದ್ದಾಳೆ"

ಹೆಚ್ಚಿನ ಓದಿನ ಸಲುವಾಗಿ ನಗರಕ್ಕೆ ಬಂದ ಹೆಣ್ಣುಮಗಳೊಬ್ಬಳು ಯಾವ ರೀತಿ ತೊಂದರೆ ಅನುಭವಿಸುತ್ತಾಳೆ ಎನ್ನುವುದೇ "ಕಾಣೆಯಾಗಿದ್ದಾಳೆ" ಚಿತ್ರದ ಪ್ರಮುಖ ಕಥಾಹಂದರ- ನಿರ್ದೇಶಕ - ನಿರ್ಮಾಪಕ ಆರ್.ಕೆ. 

Written by - YASHODHA POOJARI | Edited by - Yashaswini V | Last Updated : Oct 18, 2022, 12:23 PM IST
  • ನಾನು ಹೊಸಕೋಟೆ ಬಳಿಯ ಹಳ್ಳಿಯವನು. ಬೆಂಗಳೂರಿಗೆ ಕೆಲಸದ ನಿಮಿತ್ತ ಬಂದೆ.
  • ಆನಂತರ ನಿರ್ದೇಶಕ ಆರ್ ಕೆ ಅವರು ಭೇಟಿಯಾದಾಗ ಈ ಚಿತ್ರದ ಬಗ್ಗೆ ಹೇಳಿದರು.
  • ನನ್ನನ್ನು ನಾಯಕನಾಗಿ ಆಯ್ಕೆ ಮಾಡಿದರು- ನಾಯಕ ವಿನಯ್ ಕಾರ್ತಿ
ಸುಮಧುರ ಹಾಡುಗಳಲ್ಲಿ "ಕಾಣೆಯಾಗಿದ್ದಾಳೆ"  title=
Kaneyagiddaale film songs release

ಬೆಂಗಳೂರು: ಶ್ರೀಮೈಲಾರಲಿಂಗೇಶ್ವರ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ಆರ್ ಕೆ ನಿರ್ದೇಶಿಸಿರುವ ಹಾಗೂ ಕೌಶಿಕ್ ಸಂಗೀತ ನೀಡಿರುವ "ಕಾಣೆಯಾಗಿದ್ದಾಳೆ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಹುಡುಕಿ ಕೊಟ್ಟವರಿಗೆ ಬಹುಮಾನ ಎಂಬ ಅಡಿಬರಹ ಈ ಚಿತ್ರಕ್ಕಿದೆ.

ಕರ್ನಾಟಕ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ನಟಿ, ನಿರ್ದೇಶಕಿ ಪ್ರಿಯಾಹಾಸನ್, ನಟಿಯರಾದ ಶರಣ್ಯ, ನಿಶಿತಾ ಗೌಡ, "ಫಾರ್ ರಿಜಿಸ್ಟ್ರೇಶನ್" ಚಿತ್ರದ ನಿರ್ದೇಶಕ ನವೀನ್ ದ್ವಾರಕನಾಥ್, ನಿರ್ಮಾಪಕ ನವೀನ್ ರಾವ್ ಮುಂತಾದವರು ಮುಖ್ಯ ಅತಿಥಿಗಳಾಗಿ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

ಇದನ್ನೂ ಓದಿ- 'ಗಂಧದ ಗುಡಿ' ಜೊತೆ 'ರಾಣಾ'ನಾಗಿ ಶ್ರೇಯಸ್ ಕೆ ಮಂಜು ಎಂಟ್ರಿ ಕೂಡ ಕನ್ಫರ್ಮ್..!

ನಾನು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದ ಜೊತೆ ಒಡನಾಟ ಹೊಂದಿದ್ದೇನೆ. ಇದು ನನ್ನ ಎರಡನೇ ನಿರ್ದೇಶನದ ಚಿತ್ರ. ಸಮಾಜಿಕ ಕಳಕಳಿಯಿರುವ ಈ ಚಿತ್ರವನ್ನು ಕುಟುಂಬ ಸಮೇತ ನೋಡಬಹುದು. ಹೆಚ್ಚಿನ ಓದಿನ ಸಲುವಾಗಿ ನಗರಕ್ಕೆ ಬಂದ ಹೆಣ್ಣುಮಗಳೊಬ್ಬಳು ಯಾವ ರೀತಿ ತೊಂದರೆ ಅನುಭವಿಸುತ್ತಾಳೆ ಎನ್ನುವುದೇ ಪ್ರಮುಖ ಕಥಾಹಂದರ. ವಿನಯ್ ಕಾರ್ತಿ ನಾಯಕನಾಗಿ ನಟಿಸಿದ್ದು, ಕೀರ್ತಿ ಭಟ್ ಈ ಚಿತ್ರದ ನಾಯಕಿ. ಸದ್ಯ ತೆಲುಗು ಬಿಗ್ ಬಾಸ್ ನಲ್ಲಿ ನಮ್ಮ ನಾಯಕಿ ಇರುವುದರಿಂದ ಇಲ್ಲಿಗೆ ಬಂದಿಲ್ಲ. ಹಿರಿಯ ನಟಿ ಗಿರಿಜಾ ಲೋಕೇಶ್, ವಿನಯಾ‌ಪ್ರಸಾದ್, ಬಿರಾದಾರ್ ಮುಂತಾದವರು ಚಿತ್ರದಲ್ಲಿದ್ದಾರೆ. ಕೌಶಿಕ್ ಅದ್ಭುತವಾಗಿ ಸಂಗೀತ ಸಂಯೋಜಿಸಿದ್ದಾರೆ. ಈಗಾಗಲೇ ಸೆನ್ಸಾರ್ ಮಂಡಳಿ ಸಹ ಚಿತ್ರವನ್ನು ವೀಕ್ಷಿಸಿದ್ದು, ಮೆಚ್ಚುಗೆಯ ಮಾತುಗಳನ್ನಾಡಿದೆ. ನವೆಂಬರ್ ಕೊನೆ ಅಥವಾ ಡಿಸೆಂಬರ್ ಮೊದಲವಾರ ನಮ್ಮ ಚಿತ್ರ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ - ನಿರ್ಮಾಪಕ ಆರ್.ಕೆ. ಮಾಹಿತಿ ಹಂಚಿಕೊಂಡರು.

ಇದನ್ನೂ ಓದಿ- ಮೀಸೆ ಎಲ್ಲಿದೆ.. ಅವ್ರರಿಗೆ ಗಡ್ಡ ಇದ್ಯಾ..! : ಬಿಗ್‌ಹೌಸ್‌ನಲ್ಲಿ ʼಪಟ ಪಟ ಚಿತ್ರಟಪʼ

ನಾನು ಹೊಸಕೋಟೆ ಬಳಿಯ ಹಳ್ಳಿಯವನು. ಬೆಂಗಳೂರಿಗೆ ಕೆಲಸದ ನಿಮಿತ್ತ ಬಂದೆ. ಆನಂತರ ನಿರ್ದೇಶಕ ಆರ್ ಕೆ ಅವರು ಭೇಟಿಯಾದಾಗ ಈ ಚಿತ್ರದ ಬಗ್ಗೆ ಹೇಳಿದರು. ನನ್ನನ್ನು ನಾಯಕನಾಗಿ ಆಯ್ಕೆ ಮಾಡಿದರು ಎಂದು ನಾಯಕ ವಿನಯ್ ಕಾರ್ತಿ ತಿಳಿಸಿದರು.

ಈ ವೇಳೆ ಮಾತನಾಡಿದ ಹಿರಿಯ ನಟಿ ಗಿರಿಜಾ ಲೋಕೇಶ್‌, ನಾನು ಆರ್ ಕೆ ಅವರ ಜೊತೆ ನಟಿಸಿರುವ ಎರಡನೇ ಸಿನಿಮಾ. ಅದ್ಭುತ ನಿರ್ದೇಶಕ ಈತ. ಒಳ್ಳೆಯ ಸಿನಿಮಾ ಮಾಡಿದ್ದಾರೆ ಪ್ರೋತ್ಸಾಹ ನೀಡಿ ಎಂದರು.  

ಹಾಡುಗಳ ಬಗ್ಗೆ ಸಂಗೀತ ನಿರ್ದೇಶಕ ಕೌಶಿಕ್ ಮಾಹಿತಿ ನೀಡಿದರು. ಕಾರ್ಯಕಾರಿ ನಿರ್ಮಾಪಕ ಸಂಜಯ್ ಹಾಗೂ ಚಿತ್ರದಲ್ಲಿ ನಟಿಸಿರುವ ಅಂಜನಾ ಗಿರೀಶ್ ಚಿತ್ರದ ಕುರಿತು ಮಾತನಾಡಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News