ಒರಿಸ್ಸಾದ ಪುರಿಬೀಚ್‌ನಲ್ಲಿ ಅರಳಿದ ನಟ ಕಿಚ್ಚ ಸುದೀಪ್ ಮರಳು ಶಿಲ್ಪ..

ದಕ್ಷಿಣ ಭಾರತದಲ್ಲಿಯೇ ಈ ಮರಳು ಶಿಲ್ಪ ಗೌರವಕ್ಕೆ ಪಾತ್ರವಾಗುತ್ತಿರುವ 2ನೇ ಕಲಾವಿದರೆಂದರೆ ಅದು ಕಿಚ್ಚ ಸುದೀಪ್ ಅವರು ಮಾತ್ರ.

Written by - Puttaraj K Alur | Last Updated : Sep 1, 2022, 10:10 PM IST
  • ಸೆಪ್ಟೆಂಬರ್ 2ರಂದು ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಹುಟ್ಟುಹಬ್ಬ
  • ಒರಿಸ್ಸಾದ ಸಮುದ್ರ ತೀರದಲ್ಲಿ ನಟ ಕಿಚ್ಚ ಸುದೀಪ್ ಅವರ ಮರಳು ಶಿಲ್ಪ
  • ‘ಕಿಚ್ಚ’ನ ಜನ್ಮದಿನಕ್ಕೆ ಮರಳು ಶಿಲ್ಪ ನಿರ್ಮಿಸಿ ಅಭಿಮಾನಿಯಿಂದ ವಿಶೇಷ ಶುಭಾಶಯ
ಒರಿಸ್ಸಾದ ಪುರಿಬೀಚ್‌ನಲ್ಲಿ ಅರಳಿದ ನಟ ಕಿಚ್ಚ ಸುದೀಪ್ ಮರಳು ಶಿಲ್ಪ.. title=
ಕಿಚ್ಚ ಸುದೀಪ್ ಅವರ ಮರಳು ಶಿಲ್ಪ

ಬೆಂಗಳೂರು: ‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ ಅವರು ರಾಷ್ಟ್ರದಾದ್ಯಂತ ಖ್ಯಾತಿ ಜೊತೆಗೆ ಅಭಿಮಾನ ಸಮೂಹ ಹೊಂದಿರುವ ಕನ್ನಡದ ಮೇರುನಟ. ಸೆಪ್ಟೆಂಬರ್ 2ರಂದು ಸುದೀಪ್ ಅವರ ಜನ್ಮದಿನ. ಈ ಜನ್ಮದಿನವನ್ನು ಸ್ಮರಣೀಯವಾಗಿಸಲು ಮತ್ತು ಸಂಭ್ರಮವನ್ನು ದುಪ್ಪಟ್ಟುಗೊಳಿಸಲು ಮಾನಸ್ ಕುಮಾರ್ ಎಂಬ ಹೆಸರಾಂತ ಮರಳುಶಿಲ್ಪಿ ಒರಿಸ್ಸಾದ ಸಮುದ್ರ ತೀರದಲ್ಲಿ ಕಿಚ್ಚ ಸುದೀಪ್ ಅವರ ಮರಳು ಶಿಲ್ಪವನ್ನು ನಿರ್ಮಿಸುವ ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಶಿಲ್ಪವು 20 ಅಡಿ ಅಗಲ, 7 ಅಡಿ ಎತ್ತರವಿದೆ. ಈ ಶಿಲ್ಪಕ್ಕಾಗಿ ಸುಮಾರು 20 ಟನ್ ಮರಳನ್ನು ಬಳಸಲಾಗಿದೆ ಎಂದು ಶಿಲ್ಪಿ ತಿಳಿಸಿದ್ದಾರೆ. ಸುದೀಪ್ ಅವರ ಆಪ್ತರಾದ ವೀರಕಪುತ್ರ ಶ್ರೀನಿವಾಸ ಅವರು ಯಾವ ಫೋಟೋ ಬಳಸಬೇಕು ಮತ್ತು ಕನ್ನಡ ಬರವಣಿ ಹೇಗಿರಬೇಕು ಎಂಬ ಗೊಂದಲಕ್ಕೆ ಅಗತ್ಯವಿದ್ದ ಮಾಹಿತಿಯನ್ನು ನೀಡಿರುವುದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ: ಚಿತ್ರ ಪ್ರೇಮಿಗಳಿಗೆ ‘ಕಿಕ್’ ಕೊಡಲು ಸಜ್ಜಾದ ಸ್ಟಾರ್ ಡೈರೆಕ್ಟರ್ ಪ್ರಶಾಂತ್ ರಾಜ್..!

ದಕ್ಷಿಣ ಭಾರತದಲ್ಲಿಯೇ ಈ ಮರಳು ಶಿಲ್ಪ ಗೌರವಕ್ಕೆ ಪಾತ್ರವಾಗುತ್ತಿರುವ 2ನೇ ಕಲಾವಿದರೆಂದರೆ ಅದು ಕಿಚ್ಚ ಸುದೀಪ್ ಅವರು ಮಾತ್ರ. ಈ ಹಿಂದೆ 2020ರಲ್ಲಿ ಡಾ.ವಿಷ್ಣುವರ್ಧನ್ ಅವರ 70ನೇ ಜನ್ಮದಿನ ಪ್ರಯುಕ್ತ ಮರಳು ಶಿಲ್ಪದ ಗೌರವ ನೀಡಲಾಗಿತ್ತು ಎಂಬುದು ಬಿಟ್ಟರೆ ಇದುವರೆಗೆ ಯಾವುದೇ ದಕ್ಷಿಣ ಭಾರತದ ನಟರಿಗೆ ಈ ಗೌರವ ದಕ್ಕಿರಲಿಲ್ಲ. ಈಗ 2ನೇಯವರಾಗಿ ಕಿಚ್ಚ ಸುದೀಪ್ ಅವರು ಇಂತಹ ವಿಶೇಷ ಗೌರವವಕ್ಕೆ ಪಾತ್ರರಾಗಿದ್ದಾರೆ. ಬುಧವಾರವಷ್ಟೇ ಅಂಚೆ ಇಲಾಖೆಯಿಂದ ವಿಶೇಷ ಲಕೋಟೆಯ ಗೌರವವನ್ನು ಪಡೆದಿದ್ದಂತಹ ಸುದೀಪ್ ಅವರು ಈಗ ಮರಳು ಶಿಲ್ಪ ಗೌರವಕ್ಕೂ ಪಾತ್ರರಾಗಿರುವುದು ಅವರ ಅಭಿಮಾನಿಗಳು ಖುಷಿಯಿಂದ ಕುಣಿಯುವಂತೆ ಮಾಡಿದೆ.

ಮರಳು ಶಿಲ್ಪದ ಕುರಿತ ಇತರೆ ಮಾಹಿತಿಗಳಿಗಾಗಿ ಶಿಲ್ಪಿ ಮಾನಸ್ ಕುಮಾರ್ ಅವರನ್ನು 9437280477 ಸಂಪರ್ಕಿಸಬಹುದು.

ಇದನ್ನೂ ಓದಿ: ನಟ ಯಶ್ ಅಯೋಧ್ಯೆಗೆ ದೇಣಿಗೆ ಕೊಟ್ರಾ? ವೈರಲ್ ಫೋಟೋದ ಅಸಲಿಯತ್ತು ಇಲ್ಲಿದೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News