Shivarajkumar health : ಕ್ಯಾನ್ಸರ್ ಚಿಕಿತ್ಸೆಗಾಗಿ ಅಮೆರಿಕಕ್ಕೆ ತೆರಳಿದ್ದ ಕನ್ನಡದ ನಟ ಶಿವರಾಜಕುಮಾರ್ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಈ ಕುರಿತು ವಿಡಿಯೋ ಮೂಲಕ ತಮ್ಮ ಅಭಿಮಾನಿಗಳಿಗೆ ತಮಗಾಗಿ ಪ್ರಾರ್ಥಿಸಿದಕ್ಕೆ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
ಸ್ಯಾಂಡಲ್ವುಡ್ ಸೂಪರ್ ಸ್ಟಾರ್ ಶಿವರಾಜಕುಮಾರ್ ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು ಅಮೇರಿಕಾದ ಫ್ಲೋರಿಡಾದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಲೈವ್ ಬಂದು ತಮ್ಮ ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಮಾಹಿತಿ ನೀಡಿದ್ದಾರೆ..
ಇದನ್ನೂ ಓದಿ: ಅಲ್ಲು ಅರ್ಜುನ್ ನನ್ನ ಎತ್ತಿಕೊಂಡು ಆ ರೀತಿ ಮಾಡಿದಾಗ.. ನನಗೆ ಭಯವಾಯ್ತು..! ರಶ್ಮಿಕಾ ಶಾಕಿಂಗ್ ಹೇಳಿಕೆ ವೈರಲ್..
ಕೆಲ ದಿನಗಳ ಹಿಂದೆ ಅಮೆರಿಕಕ್ಕೆ ತೆರಳಿದ್ದ ಶಿವರಾಜಕುಮಾರ್ ಅವರು ಡಿಸೆಂಬರ್ 24ರಂದು ಯುಸ್ನಲ್ಲಿ ಮೂತ್ರಪಿಂಡದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಶಿವಣ್ಣ ತಮ್ಮ ಅಭಿಮಾನಿಗಳ ಪ್ರಾರ್ಥನೆಗೆ ಧನ್ಯವಾದ ಅರ್ಪಿಸಿದ್ದಾರೆ..
Shivanna is officially cancer-free. He thanks fans for their best wishes and sends back his love ❤️#Shivanna #ShivaRajkumar #DrShivaRajkumar #ಶಿವಣ್ಣ pic.twitter.com/dlijdj1vN8
— ಎಸ್ ಶ್ಯಾಮ್ ಪ್ರಸಾದ್ | S Shyam Prasad (@ShyamSPrasad) January 1, 2025
ಕ್ಯಾನ್ಸರ್ ಚಿಕಿತ್ಸೆ ಬಳಿಕ ತಮ್ಮ ಎಕ್ಸ್ ಪೇಜ್ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಶಿವರಾಜ್ಕುಮಾರ್ ಅವರು.. ಮೊದಮೊದಲು ನನಗೆ ಕ್ಯಾನ್ಸರ್ ಭಯವಿತ್ತು.. ನನಗಾಗಿ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದಗಳು. ಅಮೆರಿಕದಿಂದ ದುಪ್ಪಟ್ಟು ಶಕ್ತಿಯೊಂದಿಗೆ ದೇಶಕ್ಕೆ ಮರಳುವುದಾಗಿ ತಿಳಿಸಿದ್ದಾರೆ..
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.